ಮಣಿಪುರ ಹಿಂಸಾಚಾರ | 12 ಗಂಟೆಗಳಲ್ಲಿ 9 ಸಾವು; ಶಾಂತಿ ಕಾಪಾಡಲು ಸಿಎಂ ಮನವಿ

Date:

ಈಶಾನ್ಯ ರಾಜ್ಯ ಮಣಿಪುರದ ಮಲೆನಾಡು ಭಾಗಗಳಲ್ಲಿ ಕಳೆದ ಕೆಲ ಗಂಟೆಗಳಲ್ಲಿ ಮರುಕಳಿಸಿದ ತೀವ್ರ ಹಿಂಸಾಚಾರದಲ್ಲಿ ಮೃತರ ಸಂಖ್ಯೆ ಒಂಬತ್ತಕ್ಕೆ ಏರಿಕೆಯಾಗಿದೆ. ರಾಜ್ಯದ ಉಖ್ರುಲ್, ಕಾಮ್‌ಜಾಂಗ್ ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಿಂದ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದೆ. ಹಿಂಸಾಚಾರದ ನಡುವೆ ಮುಖ್ಯಮಂತ್ರಿ ವೈ. ಖೇಮ್‌ಚಂದ್ ಸಿಂಗ್ ಅವರು ರಾಜ್ಯದ ಜನರಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಯ್ದುಕೊಳ್ಳುವಂತೆ ತುರ್ತು ಮನವಿ ಮಾಡಿದ್ದಾರೆ.

- Advertisement -

ಮಲೆನಾಡು ಪ್ರದೇಶಗಳಲ್ಲಿ ಕುಕಿ ಮತ್ತು ನಾಗಾ ಸಮುದಾಯಗಳ ಬಣಗಳ ನಡುವೆ ಹಠಾತ್ ಸಂಘರ್ಷ ಏರ್ಪಟ್ಟಿದೆ. ಸುಮಾರು 12 ಗಂಟೆಗಳ ಅವಧಿಯಲ್ಲಿ ವಿವಿಧ ಕಡೆಗಳಲ್ಲಿ ಗುಂಡಿನ ಚಕಮಕಿ ನಡೆದಿದೆ, ಆಸ್ತಿಪಾಸ್ತಿಗೆ ಹಾನಿ ಉಂಟಾಗಿದೆ. ಘಟನೆಯಲ್ಲಿ ಮಹಿಳೆ, ಸ್ಥಳೀಯ ನಿವಾಸಿಗಳು ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನೂ ಓದಿ: ಮಣಿಪುರ ಹಿಂಸಾಚಾರ: 2023ರಿಂದ ಈವರೆಗೆ 58,800ಕ್ಕೂ ಅಧಿಕ ಮಂದಿ ಸ್ಥಳಾಂತರ

ಸಂಘರ್ಷ ತೀವ್ರಗೊಳ್ಳುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿ-202 ಮತ್ತು ಕಾಮ್‌ಜಾಂಗ್ ಜಿಲ್ಲೆ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಸಂಚಾರ, ಸಾರ್ವಜನಿಕ ಸಭೆಗಳ ನಿಷೇಧ ಹೇರಲಾಗಿದೆ.

ಮಣಿಪುರದಲ್ಲಿ 2023ರ ಮೇ ತಿಂಗಳಿಂದ ಹಿಂಸಾಚಾರ ನಡೆಯುತ್ತಿದೆ. ಆರಂಭದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯದ ನಡುವೆ ಹಿಂಸಾಚಾರ ನಡೆದಿದ್ದು, 280ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಈ ಸಮುದಾಯದ ನಡುವೆ ಹಿಂಸಾಚಾರ ಶಮನಗೊಂಡಿಲ್ಲ. ಈ ನಡುವೆ ನಾಗಾ ಮತ್ತು ಕುಕಿ ಸಮುದಾಯದ ನಡುವೆಯೂ ಹಿಂಸಾಚಾರ ಶುರುವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಿಡುಗಡೆ!

ಸಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿಯಾಗದಂತೆ ತಡೆಯಲು ಬಂಧಿಸಲಾಗಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠಿ...

ಗ್ಯಾನು ರಾಜೀನಾಮೆ ಕೊಡುವವರೆಗೂ ಕದಲುವುದಿಲ್ಲ; ಭಾನುವಾರವೂ ಮುಂದುವರೆದ ಸಿಜೆಪಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಬೇಕು, ಎಸ್‌ಐಆರ್...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...