ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಪೊಲೀಸರು, ಸೈನಿಕರಿಗೆ ಗಾಯ

Date:

ಮಣಿಪುರದಲ್ಲಿ ಮಂಗಳವಾರ (ಜ.2) ಮರುಕಳಿಸಿದ ಹಿಂಸಾಚಾರದಲ್ಲಿ ಬಂಡುಕೋರರು ದಾಳಿ ನಡೆಸಿದ ಪರಿಣಾಮ ನಾಲ್ವರು, ಒರ್ವ ಬಿಎಸ್‌ಎಫ್‌ ಸೈನಿಕ ಒಳಗೊಂಡು ಸ್ಥಳೀಯ ಪೊಲೀಸರು ಗಾಯಗೊಂಡಿದ್ದಾರೆ

- Advertisement -

ಮಣಿಪುರದ ತೌಬಾಲ ಜಿಲ್ಲೆಯ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶದಲ್ಲಿ ಅಪರಿಚಿತರಿಂದ ನಾಲ್ವರು ಸ್ಥಳೀಯರು ಹತ್ಯೆಯಾದ ಮರುದಿನ ಈ ಘಟನೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಡಿ.30 ರಂದು ಮಣಿಪುರದ ಮೊರೆಯಲ್ಲಿ ಪೊಲೀಸ್ ಕಮಾಂಡೊಗಳು ಹಾಗೂ ಅಪರಿಚಿತ ಬಂದೂಕುದಾರಿಗಳ ನಡುವೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಒರ್ವ ಪೊಲೀಸ್‌ ತೀವ್ರವಾಗಿ ಗಾಯಗೊಂಡಿದ್ದರು. ಅದೇ ದಿನ ಕಂಗೋಪೊಕ್ಪಿ ಜಿಲ್ಲೆಯಲ್ಲಿ ಮೈತೇಯಿ ಹಾಗೂ ಕುಕಿ ಗುಂಪುಗಳ ನಡುವೆ ನಡೆದ ಇನ್ನೊಂದು ಹಿಂಸಾಚಾರ ಘಟನೆಯಲ್ಲಿ ಮೈತೇಯಿ ಸಮುದಾಯದ ಯುವಕನೊಬ್ಬ ಮೃತಪಟ್ಟಿದ್ದ.

ಡಿಸೆಂಬರ್‌ 4ರಂದು ತೆಂಗೋಪಾಲ್‌ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ 13 ಮಂದಿ ಸಾವಿಗೀಡಾಗಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ಇತ್ತೀಚಿಗೆ ಮತ್ತೆ ಮರುಕಳಿಸಿರುವ ಹಿಂಸಾಚಾರವನ್ನು ಖಂಡಿಸಿರುವ ಮಣಿಪುರ ಮುಖ್ಯಮಂತ್ರಿ ಎನ್‌ ಬಿರೇನ್‌ ಸಿಂಗ್‌ ಗಲಭೆಕೋರರನ್ನು ಬಂಧಿಸುವ ವಿಶ್ವಾಸವ್ಯಕ್ತಪಡಿಸಿದ್ದು ಕಾನೂನಿನ ನಿಯಮದಂತೆ ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಹಾಗೆಯೇ ಗಲಭೆಪೀಡಿತ ಪ್ರದೇಶಗಳಲ್ಲಿ ಶಾಂತಿಸ್ಥಾಪನೆಗೆ ಮನವಿ ಮಾಡಿದ್ದಾರೆ.

ಸದ್ಯ ಪೂರ್ವ ಇಂಪಾಲ್, ಪಶ್ಚಿಮ ಇಂಪಾಲ್, ಕಾಕ್ಚಿಂಗ್ ಹಾಗೂ ಬಿಷ್ಣೂಪುರ ಜಿಲ್ಲೆಗಳಲ್ಲಿ ಕರ್ಫ್ಯೂ ಮುಂದುವರೆಸಲಾಗಿದೆ.

ಕಳೆದ 6 ತಿಂಗಳಿನಿಂದ ಮಣಿಪುರದಲ್ಲಿ ನಡೆದ ಎರಡು ಕೋಮುಗಳ ನಡುವೆ ಘರ್ಷಣೆಯಲ್ಲಿ 200 ಕ್ಕೂ ಹೆಚ್ಚು ಮಂದಿ ಮೃತಪಟ್ಟು 60 ಸಾವಿರಕ್ಕೂ ಹೆಚ್ಚು ಮಂದಿ ವಸತಿಯಿಲ್ಲದೆ ನಿರಾಶ್ರಿತರಾಗಿದ್ದಾರೆ. ಹಿಂಸಾಚಾರದಿಂದ ವಸತಿ ಕಳೆದುಕೊಂಡಿರುವವರೆಗೆ ಹಾಗೂ ಸ್ಥಳಾಂತರವಾದವರು ಹಿಂತಿರುಗಲು ಸಿಎಂ ಬಿರೇನ್‌ ಸಿಂಗ್ ಆರ್ಥಿಕ ಪ್ಯಾಕೇಜ್‌ ಘೋಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...