ಮಣಿಪುರ ಹಿಂಸಾಚಾರ | ಸಚಿವರು, ಶಾಸಕರ ನಿವಾಸಕ್ಕೆ ದಾಳಿ; ಕರ್ಫ್ಯೂ ಜಾರಿ, ಇಂಟರ್‌ನೆಟ್ ಸ್ಥಗಿತ

Date:

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಹೆಚ್ಚಾಗುತ್ತಿದೆ. ನವೆಂಬರ್ 7ರಂದು ಜಿರಿಬಾಮ್ ಜಿಲ್ಲೆಯಲ್ಲಿ ನಾಪತ್ತೆಯಾದವರದ್ದು ಎನ್ನಲಾದ ಶವಗಳು ಜೀರಿ ನದಿಯಲ್ಲಿ ಪತ್ತೆಯಾದ ಬಳಿಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಶನಿವಾರ ಸಂಜೆ 4:30 ಗಂಟೆಯಿಂದ ಅನಿರ್ದಿಷ್ಟಾವಧಿಗೆ ಮಣಿಪುರದ ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

- Advertisement -

ಇನ್ನು ಪ್ರತಿಭಟನಾಕಾರರು ಇಂಫಾಲ್‌ನಲ್ಲಿ ಶಾಸಕರುಗಳು, ಸಚಿವರುಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಟಯರ್‌ಗಳನ್ನು ಸುಟ್ಟು ರಸ್ತೆ ತಡೆ ನಡೆಸಿದರು. ಕುಕಿ ಬಂಡುಕೋರರು ಆರು ಮಂದಿಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ವಿರುದ್ದ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಶನಿವಾರ ಮಣಿಪುರದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? ಮಣಿಪುರ ಜನಾಂಗೀಯ ದ್ವೇಷ: ಜೀರಿ ನದಿಯಲ್ಲಿ ಶವಗಳಾಗಿ ತೇಲಿದ ಮಹಿಳೆ – ಮಕ್ಕಳು

ಇತ್ತೀಚೆಗೆ ಬಂಡುಕೋರರು ಸಿಆರ್‌ಪಿಎಫ್ ಶಿಬಿರ ಮತ್ತು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದ್ದರು. ಇದಾದ ಬಳಿಕ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿತ್ತು. 10 ಕುಕಿ ಬಂಡುಕೋರರ ಹತ್ಯೆಯಾಗಿತ್ತು. ಈ ವೇಳೆ ನಿರಾಶ್ರಿತರ ಕೇಂದ್ರದಿಂದ ಆರು ಮಂದಿ ನಾಪತ್ತೆಯಾಗಿದ್ದರು. ಅವರನ್ನು ಅಪಹರಣ ಮಾಡಲಾಗಿದೆಯೇ ಅಥವಾ ಅವರು ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತ ಜಾಗಕ್ಕೆ ತಲುಪಿದ್ದಾರೆಯೇ ಎಂಬುದು ಖಚಿತವಾಗಿರಲಿಲ್ಲ.

ಶುಕ್ರವಾರ ಜಿರಿಬಾಮ್ ಜಿಲ್ಲೆಯ ನದಿಯಿಂದ ಮೂರು ಶವಗಳು ಪತ್ತೆಯಾಗಿದ್ದರೆ, ಶನಿವಾರ ಮತ್ತೆ ಮೂರು ಶವಗಳು ಪತ್ತೆಯಾಗಿವೆ. ಆರು ಮಂದಿ ಕೂಡಾ ಮೈತಿ ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ. ಈ ಮೃತದೇಹಗಳು ಅಪಹರಣಕ್ಕೊಳಗಾದವರ ಮೃತದೇಹ ಎಂದು ಹೇಳಲಾಗಿದೆ. ಅಪಹರಣಕ್ಕೆ ಒಳಗಾದ ಜನರನ್ನು ರಕ್ಷಿಸುವಲ್ಲಿ ರಾಜ್ಯ ಸರ್ಕಾರ ಮತ್ತು ಭದ್ರತಾ ಪಡೆಗಳು ವಿಫಲವಾಗಿವೆ ಎಂದು ಆರೋಪಿಸಿ ಮೈತಿ ಸಂಘಟನೆಗಳು ಪ್ರತಿಭಟನೆ ಆರಂಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...