ಮಣಿಪುರ ಹಿಂಸಾಚಾರ | ತನಿಖೆಗೆ 53 ಅಧಿಕಾರಿಗಳ ಸಿಬಿಐ ತಂಡ ರಚನೆ

Date:

ಮಣಿಪುರ ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ ಸಿಬಿಐ 53 ಮಂದಿ ಅಧಿಕಾರಗಳ ತಂಡ ರಚನೆ ಮಾಡಿದೆ. ತಂಡದಲ್ಲಿ 29 ಮಹಿಳಾ ಆಧಿಕಾರಿಗಳು ಇದ್ದಾರೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಸಂಖ್ಯೆಯ ಮಹಿಳಾ ಅಧಿಕಾರಿಗಳನ್ನು ಏಕಕಾಲದಲ್ಲಿ ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಜಂಟಿ ನಿರ್ದೇಶಕ ಘನಶ್ಯಾಮ್ ಉಪಾಧ್ಯಾಯ ಅವರ ಮೇಲ್ವಿಚಾರಣೆಯಲ್ಲಿ ತಂಡವನ್ನು ರಚಿಸಲಾಗಿದೆ. ಮೂವರು ಡಿಐಜಿಗಳಾದ ಲವ್ಲಿ ಕಟಿಯಾರ್, ನಿರ್ಮಲಾ ದೇವಿ ಮತ್ತು ಮೋಹಿತ್ ಗುಪ್ತಾ ಮತ್ತು ಪೊಲೀಸ್ ವರಿಷ್ಠಾಧಿಕಾರಿ ರಾಜ್‌ವೀರ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಸಿಬಿಐ ತನಿಖೆ ನಡೆಸುತ್ತಿರುವ ಈ ಹಲವು ಪ್ರಕರಣಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ತನಿಖೆಗೆ ಒಳಪಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆ ಪ್ರಕರಣಗಳನ್ನು ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಗಳು ತನಿಖೆ ಮಾಡಲಿದ್ದಾರೆ.

ಇಬ್ಬರು ಮಹಿಳಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಆರು ಮಹಿಳಾ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿ 53 ಸದಸ್ಯರ ತಂಡವನ್ನು ಪ್ರಕರಣದ ತನಿಖೆಗೆ ನಿಯೋಜಿಸಲಾಗಿದೆ.

ಇನ್ನು 16 ಇನ್ಸ್‌ಪೆಕ್ಟರ್‌ಗಳು ಮತ್ತು 10 ಸಬ್‌ ಇನ್‌ಸ್ಪೆಕ್ಟರ್‌ಗಳು ಸಹ ತಂಡದ ಭಾಗವಾಗಲಿದ್ದಾರೆ.ಸಾಮಾನ್ಯವಾಗಿ ಇಷ್ಟು ದೊಡ್ಡ ಪ್ರಕರಣಗಳನ್ನು ಸಿಬಿಐಗೆ ಹಸ್ತಾಂತರಿಸಿದಾಗ, ಅಧಿಕಾರಿಗಳನ್ನು ನಿಯೋಜಿಸಲು ಸಿಬಿಐ ಸಂಸ್ಥೆಯು ಇತರ ರಾಜ್ಯದ ಮೇಲೆ ಕೂಡ ಅವಲಂಬಿತವಾಗಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಹೊಲಗೇರಿ ಇದ್ದ ಕಡೆಗೆ ಊರಿನ ಜನ ಬಂದರೆ ಹೊರತು- ಊರು ಇದ್ದ ಕಡೆ ಹೊಲಗೇರಿ ಎಂದಿಗೂ ಹೋಗಿಲ್ಲ

ಮಣಿಪುರದ ಪ್ರಕರಣದಲ್ಲಿ, ತನಿಖೆಯಲ್ಲಿ ಪಕ್ಷಪಾತದ ಆರೋಪಗಳನ್ನು ತಪ್ಪಿಸಲು ಸ್ಥಳೀಯ ಅಧಿಕಾರಿಗಳ ಸಹಭಾಗಿತ್ವ ಕಡಿಮೆ ಮಾಡಲು ಪ್ರಯತ್ನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಬಿಐ ಈಗಾಗಲೇ ಎಂಟು ಪ್ರಕರಣಗಳನ್ನು ದಾಖಲಿಸಿದೆ, ಮೇ 4 ರಂದು ಮಹಿಳೆಯ ಬೆತ್ತಲೆ ಮಾಡಿದ ಪ್ರಕರಣ ಕೂಡ ಇದರಲ್ಲಿ ಸೇರಿದೆ.ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಇನ್ನೂ ಒಂಬತ್ತು ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐ ಸಿದ್ಧವಾಗಿದೆ. ಈ ಮೂಲಕ ಒಟ್ಟು 17 ಪ್ರಕರಣಗಳನ್ನು ಸಿಬಿಐ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...