ಮಣಿಪುರ ಹಿಂಸಾಚಾರ: ಅಧಿಕೃತ ಸಾವಿನ ಸಂಖ್ಯೆ 306ಕ್ಕೆ ಏರಿಕೆ, ಇಂದಿಗೂ 49 ಮಂದಿ ಸುಳಿವಿಲ್ಲ

Date:

ಮಣಿಪುರದಲ್ಲಿ ಮೇ 2023ರಲ್ಲಿ ಆರಂಭವಾದ ಜನಾಂಗೀಯ ಸಂಘರ್ಷದಲ್ಲಿ ಈವರೆಗೆ ಕನಿಷ್ಠ 306 ಜನರು ಪ್ರಾಣ ಕಳೆದುಕೊಂಡಿದ್ದಾರೆ. 49 ಜನರು ಇಂದಿಗೂ ನಾಪತ್ತೆಯಾಗಿದ್ದಾರೆ ಎಂದು ರಾಜ್ಯದ ಗೃಹ ಸಚಿವ ಗೋವಿಂದಾಸ್ ಕೊಂಥೌಜಮ್ ವಿಧಾನಸಭೆಗೆ ತಿಳಿಸಿದ್ದಾರೆ.

- Advertisement -

ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಗುರುವಾರ, ಬಿಜೆಪಿ ಶಾಸಕ ಸಪಮ್ ರಂಜನ್ ಸಿಂಗ್ ಕೇಳಿದ ಪ್ರಶ್ನೆಗೆ ಗೃಹ ಸಚಿವರು ಲಿಖಿತ ಉತ್ತರ ನೀಡಿದರು. “2023ರ ಮೇ 3ರಿಂದ ಆರಂಭವಾದ ಹಿಂಸಾಚಾರದಲ್ಲಿ 2026ರ ಆಗಸ್ಟ್ 31ರ ವೇಳೆಗೆ ಒಟ್ಟು 306 ಜನರು ಅಸಹಜವಾಗಿ ಮೃತಪಟ್ಟಿದ್ದಾರೆ. 49 ಜನರು ನಾಪತ್ತೆಯಾಗಿದ್ದಾರೆ ಎಂಬುದು ಅಧಿಕೃತ ದಾಖಲೆಗಳಿಂದ ತಿಳಿದುಬಂದಿದೆ” ಎಂದು ಸಚಿವರು ಸದನಕ್ಕೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿ: ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಮಹಿಳೆ ಸೇರಿ ಕುಕಿ ಸಮುದಾಯದ ಮೂವರ ಹತ್ಯೆ

ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ST) ಸ್ಥಾನಮಾನ ನೀಡಬೇಕೆಂಬ ಬೇಡಿಕೆಯನ್ನು ಪ್ರತಿಭಟಿಸಿ, ಮಣಿಪುರದಲ್ಲಿ ‘ಬುಡಕಟ್ಟು ಐಕ್ಯತಾ ಮೆರವಣಿಗೆ’ ಆಯೋಜಿಸಿದ ಬಳಿಕ ಮೈತೇಯಿ ಹಾಗೂ ಕುಕಿ-ಜೋ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತ್ತು.

ಮಣಿಪುರದ ಒಟ್ಟು ಜನಸಂಖ್ಯೆಯಲ್ಲಿ ಶೇ. 53ರಷ್ಟಿರುವ ಮೈತೇಯಿ ಸಮುದಾಯದವರು ಮುಖ್ಯವಾಗಿ ಇಂಫಾಲ ಕಣಿವೆಯಲ್ಲಿ ವಾಸಿಸುತ್ತಿದ್ದರೆ, ಶೇ. 40ರಷ್ಟಿರುವ ಕುಕಿ ಮತ್ತು ನಾಗಾ ಬುಡಕಟ್ಟು ಜನರು ಬೆಟ್ಟದ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಈ ಸಂಘರ್ಷವು ರಾಜ್ಯದಲ್ಲಿ ವ್ಯಾಪಕ ಆಸ್ತಿಪಾಸ್ತಿ ಹಾನಿ ಹಾಗೂ ಸಾವಿರಾರು ಜನರ ಸ್ಥಳಾಂತರಕ್ಕೆ ಕಾರಣವಾಯಿತು.

ಹಿಂಸಾಚಾರದ ತೀವ್ರತೆಯಿಂದಾಗಿ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸರ್ಕಾರ ರಾಜೀನಾಮೆ ನೀಡಿದರು. ಅದಾದ ಬಳಿಕ 2025ರ ಫೆಬ್ರವರಿಯಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು. ತರುವಾಯ 2026ರ ಫೆಬ್ರವರಿಯಲ್ಲಿ ರಾಷ್ಟ್ರಪತಿ ಆಡಳಿತ ಹಿಂಪಡೆದು, ವೈ. ಖೇಮ್‌ಚಂದ್ ಸಿಂಗ್ ನಾಯಕತ್ವದಲ್ಲಿ ಬಿಜೆಪಿ ನೂತನ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇಂದಿಗೂ ಬಿಜೆಪಿ ಸರ್ಕಾರಕ್ಕೆ ಈ ಹಿಂಸಾಚಾರವನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಈಗ ನಾಗಾ ಹಾಗೂ ಕುಕಿ ಸಮುದಾಯದ ನಡುವೆ ಆಗಾಗೇ ಹಿಂಸಾಚಾರ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...