ಮಣಿಪುರ ಹಿಂಸಾಚಾರ: ವಿಶೇಷ ಸಿಬಿಐ ತಂಡದೊಂದಿಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ  

Date:

ಮಣಿಪುರ ಹಿಂಸಾಚಾರದ ಘಟನೆಗಳ ಬಗ್ಗೆ ಸಿಬಿಐ ತನಿಖೆ ನಡೆಸಲಿದ್ದು, ಮತ್ತು ತನಿಖೆಯ ಮೇಲ್ವಿಚಾರಣೆಯನ್ನು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಇಂಫಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇಡೀ ಘಟನೆಯ ಬಗ್ಗೆ ತನಿಖೆ ನಡೆಸಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಲಾಗುವುದು. ಕೇಂದ್ರ ಸರ್ಕಾರವು ಮಣಿಪುರ ರಾಜ್ಯಪಾಲರ ನೇತೃತ್ವದಲ್ಲಿ ಶಾಂತಿ ಸಮಿತಿಯನ್ನು ಸಹ ರಚಿಸುತ್ತದೆ. ಶಾಂತಿ ಸಮಿತಿಯಲ್ಲಿ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಸಂಘಟನೆಗಳು, ಕ್ರೀಡಾಪಟುಗಳು, ಕೈಗಾರಿಕೋದ್ಯಮಿಗಳು ಮತ್ತು ಇತರ ಪ್ರತಿನಿಧಿಗಳು ಇರುತ್ತಾರೆ. ಸಮಿತಿಯು ರಾಜ್ಯದ ಕೆಲವು ಭಾಗಗಳಿಗೆ ಭೇಟಿ ನೀಡಿ ಶಾಶ್ವತ ಶಾಂತಿಗಾಗಿ ಎಲ್ಲ ಗುಂಪುಗಳೊಂದಿಗೆ ಮಾತನಾಡಲಿದೆ. ಸಿಬಿಐ ತಂಡದಿಂದ ಒಟ್ಟು ಆರು ಪ್ರಕರಣಗಳನ್ನು ತನಿಖೆಗೆ ಗುರುತಿಸಲಾಗಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

“ಸಿಆರ್‌ಪಿಎಫ್ ನಿವೃತ್ತ ಡಿಜಿ ಕುಲದೀಪ್ ಸಿಂಗ್‌ ನೇತೃತ್ವದ ಇಂಟರ್-ಏಜೆನ್ಸಿ ಯುನಿಫೈಡ್ ಕಮಾಂಡ್ ಅನ್ನು ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಇತರ ಭದ್ರತಾ ಪಡೆಗಳ ನಡುವೆ ಉತ್ತಮ ಸಮನ್ವಯಕ್ಕಾಗಿ ಸ್ಥಾಪಿಸಲಾಗಿದೆ. ಸಿಂಗ್ ಅವರು ಪ್ರಸ್ತುತ ಮಣಿಪುರ ಸರ್ಕಾರದ ಕೇಂದ್ರದ ಭದ್ರತಾ ಸಲಹೆಗಾರರಾಗಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಪರಿಹಾರ ಮತ್ತು ಪುನರ್ವಸತಿಗಾಗಿ ವಿಶೇಷ ಪ್ಯಾಕೇಜ್‌ ಕೂಡ ನಾಳೆ ಘೋಷಿಸಲಾಗುವುದು” ಎಂದು ಅಮಿತ್ ಶಾ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಯಾರಿದು ಕನುಗೋಳು?

ಮೇ 3 ರಿಂದ ನಡೆದ ಗಲಭೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಮುಂದಿನ ಎರಡು ತಿಂಗಳಿಗೆ ಒಟ್ಟು 30,000 ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ಹಂಚಿಕೆ ಮಾಡಲಾಗಿದ್ದು, ಶೀಘ್ರದಲ್ಲೇ ವಿತರಣೆ ಮಾಡಲಾಗುವುದು. ಅಗತ್ಯ ವಸ್ತುಗಳ ನಿರಂತರ ಪೂರೈಕೆಗಾಗಿ ಎಲ್‌ಪಿಜಿ, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಮಣಿಪುರಕ್ಕೆ ಕಳುಹಿಸಲಾಗುತ್ತಿದೆ” ಎಂದು ಕೇಂದ್ರ ಗೃಹ ಸಚಿವರು ಹೇಳಿದರು.

ಸುಮಾರು ಒಂದು ತಿಂಗಳಿನಿಂದ ಪ್ರಕ್ಷುಬ್ಧ ಸ್ಥಿತಿಯಲ್ಲಿದ್ದ ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಕೇಂದ್ರದ ಪ್ರಯತ್ನಗಳ ಭಾಗವಾಗಿ ಅಮಿತ್ ಶಾ ಮೇ 29 ರಿಂದ ಮಣಿಪುರದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲ್ಯವಿವಾಹ | ಕರ್ನಾಟಕಕ್ಕೆ 2ನೇ ಸ್ಥಾನ: ನಾಚಿಕೆಗೇಡಿನ ಸಂಗತಿ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕಳೆದ ಮೂರು ವರ್ಷಗಳಲ್ಲಿ ಭಾರತದಲ್ಲಿ ಸಾವಿರಾರು ಬಾಲ್ಯವಿವಾಹಗಳು ನಡೆದಿವೆ. ಅತಿ ಹೆಚ್ಚು...

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ತಮಿಳುನಾಡಿನ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಯ...

ಟ್ರಂಪ್ ಮೇಲೆ ಗುಂಡಿನ ದಾಳಿ: ಸ್ನೇಹಿತನ ಬಗ್ಗೆ ಕಳವಳಗೊಂಡಿದ್ದೇನೆ ಎಂದ ಮೋದಿಗೆ ನೆಟ್ಟಿಗರ ಪಾಠ

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಉತ್ತರ ಪ್ರದೇಶ | 2027ರ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ ಸೋಲುತ್ತದೆ: ಬಿಜೆಪಿ ಶಾಸಕನ ವಿಡಿಯೋ ವೈರಲ್

"2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು ಸೋಲು ಕಾಣಲಿದೆ,...