ಮುಂದುವರೆದ ಹಿಂಸಾಚಾರ; ಫಲ ನೀಡದ ಮಾತುಕತೆಗಳು, ಮಣಿಪುರದಲ್ಲಿ ಹೆದ್ದಾರಿಗಳು ಬಂದ್‌

Date:

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕುಕಿ ಸಮುದಾಯದ ಮೇಲೆ ಮೈಥೇಯಿ ಸಮುದಾಯದ ದಾಳಿಗಳು ಮುಂದುರೆದಿವೆ. ಕುಕಿ ಸಮುದಾಯವು ಪ್ರತಿಭಟನೆ ನಡೆಸುತ್ತಿದೆ. ಹೆದ್ದಾರಿಗಳು ಬಂದ್‌ ಆಗಿವೆ. ಪರಿಸ್ಥಿತಿಯನ್ನು ತಿಳಿಗೊಳಿಸಿ, ಹೆದ್ದಾರಿಗಳಲ್ಲಿ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಡುತ್ತೇವೆಂದು ಸರ್ಕಾರಿ ಅಧಿಕಾರಿಗಳು ಹಲವು ದಿನಗಳಿಂದ ಹೇಳುತ್ತಲೇ ಇದ್ದಾರೆ. ಆದರೆ, ಎಷ್ಟೇ ಮಾತುಕತೆಗಳು ನಡೆದಿದ್ದರೂ, ಪರಿಸ್ಥಿತಿ ಹತೋಟಿಗೆ ಬಂದಿಲ್ಲ. ಹೆದ್ದಾರಿಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವ್ಯಾಪಾರ-ವಹಿವಾಟಿನ ಮೇಲೂ ಭಾರೀ ಪರಿಣಾಮ ಬೀರಿದೆ.

- Advertisement -

ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವ ಮಣಿಪುರದಲ್ಲಿ, ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮಾರ್ಚ್‌ 7ರಂದು ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ದಾಳಿಯಲ್ಲಿ ಕುಕಿ ಸಮುದಾಯದ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ. ಹಿಂಸಾಚಾರದ ವಿರುದ್ಧ ಕುಕಿ-ಝೋ ಪ್ರದೇಶದ ಜನರು ಪ್ರತಿಭಟನೆಗೆ ಇಳಿದಿದ್ದಾರೆ. ಹಿಂಸಾಚಾರ ಮತ್ತು ಪ್ರತಿಭಟನೆಯಿಂದಾಗಿ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು (NH-2 ಮತ್ತು NH-37) ಮಂಗಳವಾರ – ಸತತ ನಾಲ್ಕನೇ ದಿನವೂ ಬಂದ್‌ ಆಗಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಪರಿಣಾಮ, ಸರಕು ವಾಹನಗಳು ಸೇರಿದಂತೆ ಎಲ್ಲ ರೀತಿಯ ವಾಹನಗಳು ರಸ್ತೆಯಲ್ಲಿ ಸಂಚಾರಿಸಲಾಗದೆ, ನಿಂತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶೀಘ್ರವಾಗಿ ಪರಿಸ್ಥಿತಿಯನ್ನು ತಿಳಿಗೊಳಿಸುತ್ತೇವೆ. ಹೆದ್ದಾರಿಗಳಲ್ಲಿ ಎಲ್ಲ ರೀತಿಯ ವಾಹನಗಳ ಮುಕ್ತ ಸಂಚಾರವನ್ನು ಪುನರಾರಂಭಿಸುತ್ತೇವೆ ಎಂದು ಅಧಿಕಾರಿಗಳು ಭಾನುವಾರ ಭರವಸೆ ನೀಡಿದ್ದರು. ಪ್ರತಿಭಟನೆ ನಡೆಸುತ್ತಿರುವ ಕುಕಿ-ಝೋ ಸಂಘಟನೆಯ ಮುಖಂಡರೊಂದಿಗೆ ಮಾತಕತೆಯನ್ನೂ ನಡೆಸಿದ್ದರು. ಆದಾಗ್ಯೂ, ವಾಹನಗಳು ರಸ್ತೆಗಳಿಯಲು ಸಾಧ್ಯವಾಗುತ್ತಿಲ್ಲ ಎಂದು ವರದಿಯಾಗಿದೆ.

ಮಾತುಕತೆಯ ಬಳಿಕ ಕುಕಿ-ಝೋ ಸಂಘಟನೆಯು ಮಣಿಪುರ ರಾಜ್ಯ ಸಾರಿಗೆ (ಎಂಎಸ್‌ಟಿ) ಬಸ್‌ಗಳ ಸುಗಮ ಸಂಚಾರಕ್ಕೆ ಅವಕಾಶ ನೀಡುವುದಾಗಿ ಒಪ್ಪಿಕೊಂಡಿವೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ.

ಮೂರು ವರ್ಷಗಳ ಹಿಂದೆ, 2023ರ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಅಂದಿನಿಂದ ನಿರಂತರವಾಗಿ ದಾಳಿ, ಹಿಂಸೆ, ಹತ್ಯೆಗಳು ನಡೆಯುತ್ತಲೇ ಇವೆ. ರಾಜ್ಯದಲ್ಲಿ ಈವರೆಗೆ ಸುಮಾರು 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದಾಗ್ಯೂ, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ಮೋದಿ ಈವರೆಗೆ ಭೇಟಿ ನೀಡಿಲ್ಲ. ಹಿಂಸಾಚಾರ ತೆಡೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿಲ್ಲ. ಹಿಂಸಾಚಾರ ಆರಂಭವಾಗಿ ಬರೋಬ್ಬರಿ ಎರಡೂವರೆ ವರ್ಷಗಳ ಬಳಿಕ ಅಲ್ಲಿನ ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ಇತ್ತೀಚೆಗೆ ರಾಜೀನಾಮೆ ನೀಡಿದ್ದಾರೆ. ಇದೀಗ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. ಆದರೂ, ಹಿಂಸಾಚಾರಕ್ಕೆ ಕಣಿವಾಣ ಬಿದ್ದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...