ಅಣ್ಣಾ ಹಜಾರೆಗೆ ಸ್ಪಂದಿಸಿದ್ದ ಮನಮೋಹನ್ ಸರ್ಕಾರ: ಮೋದಿ ಸರ್ಕಾರಕ್ಕೆ ಮಾನವೀಯತೆ ಇಲ್ಲವೇ, ಓಮರ್ ಕಿಡಿ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಗುರುವಾರ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ವಾಂಗ್ಚುಕ್ ಅವರ ಹೋರಾಟ 19ನೇ ದಿನಕ್ಕೆ ಕಾಲಿಟ್ಟಿದ್ದರೂ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅವರು, ರಾಜಕೀಯದಲ್ಲೂ “ಮಾನವೀಯತೆ” ಮತ್ತು ಸಹಾನುಭೂತಿಗೆ ಅವಕಾಶವಿರಬೇಕು ಎಂದು ಕೇಂದ್ರಕ್ಕೆ ಆಗ್ರಹಿಸಿದ್ದಾರೆ.

- Advertisement -

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಹಗರಣ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮಗಳಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂಬ ಏಕೈಕ ಬೇಡಿಕೆಯನ್ನು ಮುಂದಿಟ್ಟುಕೊಂಡು ವಾಂಗ್ಚುಕ್ ಅವರು ಜೂನ್ 28 ರಿಂದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸುದ್ದಿಗಾರರೊಂದಿಗೆ ಮಾತನಾಡಿದ ಓಮರ್ ಅಬ್ದುಲ್ಲಾ, ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಅಣ್ಣಾ ಹಜಾರೆ ಅವರ ಜನ್ ಲೋಕಪಾಲ್ ಆಂದೋಲನವನ್ನು ನೆನಪಿಸಿಕೊಂಡರು. “ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವು ಅಣ್ಣಾ ಹಜಾರೆ ಅವರೊಂದಿಗೆ ಮಾತುಕತೆ ನಡೆಸಲು ಸಚಿವರನ್ನು ನಿಯೋಜಿಸುವ ಮೂಲಕ ಪ್ರಜಾಪ್ರಭುತ್ವದ ಆಶಯ ಎತ್ತಿಹಿಡಿದಿತ್ತು. ಆದರೆ ಪ್ರಸ್ತುತ ಕೇಂದ್ರ ಸರ್ಕಾರವು ಸೋನಮ್ ವಾಂಗ್‌ಚುಕ್ ಅವರ ಜೀವನ್ಮರಣ ಹೋರಾಟದ ಬಗ್ಗೆ ಸಂಪೂರ್ಣ ಉದಾಸೀನತೆ ತೋರುತ್ತಿದೆ. ಸೋನಮ್ ವಾಂಗ್‌ಚುಕ್ ಅವರ ತೂಕ ಗಣನೀಯವಾಗಿ ಇಳಿಕೆಯಾಗಿದ್ದರೂ ಕೇಂದ್ರವು ಉಪವಾಸ ಕೈಬಿಡುವಂತೆ ಅವರಿಗೆ ಮನವಿ ಮಾಡುವ ಸೌಜನ್ಯವನ್ನೂ ತೋರಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ, ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್, ಉಪವಾಸ ಸತ್ಯಾಗ್ರಹದ ಅವಧಿಯಲ್ಲಿ ಅವರಿಗೆ ಪ್ರತಿದಿನ ವೈದ್ಯಕೀಯ ತಪಾಸಣೆ ನಡೆಸಬೇಕು ಮತ್ತು ಸರ್ಕಾರಿ ವೈದ್ಯರ ಸಲಹೆಯಂತೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಬೇಕು ಎಂದು ಆಡಳಿತಕ್ಕೆ ನಿರ್ದೇಶನ ನೀಡಿದೆ.

ಸೋನಮ್ ವಾಂಗ್‌ಚುಕ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ. ಸತೀಶ್ ಲಾಂಬಾ ಅವರು ವಾಂಗ್ಚುಕ್ ಆರೋಗ್ಯದ ಕುರಿತು ಗಂಭೀರ ಎಚ್ಚರಿಕೆ ನೀಡಿದ್ದಾರೆ. “19 ದಿನಗಳ ನಿರಂತರ ಉಪವಾಸದಿಂದಾಗಿ ವಾಂಗ್ಚುಕ್ 9 ಕೆಜಿಗಿಂತ ಹೆಚ್ಚು ತೂಕ ಕಳೆದುಕೊಂಡಿದ್ದು, ಪ್ರಸ್ತುತ 56.9 ಕೆಜಿ ತೂಕ ಹೊಂದಿದ್ದಾರೆ. ಅವರ ದೇಹವು ದೀರ್ಘಕಾಲದ ಉಪವಾಸದ ಎರಡನೇ ಹಂತವನ್ನು ತಲುಪಿದ್ದು, ಇದೇ ರೀತಿ ಮುಂದುವರಿದರೆ ಮಲ್ಟಿ-ಆರ್ಗನ್ (ಹಲವು ಅಂಗಾಂಗಗಳ ವೈಫಲ್ಯ) ಸಮಸ್ಯೆ ಎದುರಾಗಬಹುದು” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...