‘ಹಾಗೇನಾದರೂ ನಡೆದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೆ’ ಎಂದಿದ್ದರಂತೆ ಮನಮೋಹನ್ ಸಿಂಗ್!

Date:

ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ವ್ಯಕ್ತಿತ್ವ ಮತ್ತು ಅಧಿಕಾರದ ಕುರಿತಾದ ಗೌರವದ ಬಗ್ಗೆ ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಎಸ್ ವೈ ಖುರೇಷಿ ಅವರು ತಮ್ಮ ಹೊಸ ಪುಸ್ತಕದಲ್ಲಿ ಒಂದು ರೋಚಕ ಘಟನೆ ಹಂಚಿಕೊಂಡಿದ್ದಾರೆ.

- Advertisement -

2012ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭವನ್ನು ಖುರೇಷಿ ತಮ್ಮ ‘ಇಂಡಿಯಾ ಅಂಡ್ ಐ: ಎ ಹಂಡ್ರೆಡ್ ಮೆಮೊರೀಸ್, ನಾಟ್ ಎ ಮೆಮೋಯಿರ್’ ಪುಸ್ತಕದಲ್ಲಿ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಏನದು ಘಟನೆ?

2012ರ ಉತ್ತರ ಪ್ರದೇಶ ಚುನಾವಣಾ ಪ್ರಚಾರದ ವೇಳೆ ಅಂದಿನ ಕೇಂದ್ರ ಸಚಿವ ಸಲ್ಮಾನ್ ಖುರ್ಶಿದ್ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಉದ್ಯೋಗದಲ್ಲಿ ಮೀಸಲಾತಿಯನ್ನು ಶೇ. 4.5ರಿಂದ ಶೇ. 9ಕ್ಕೆ ಹೆಚ್ಚಿಸಲಾಗುವುದು” ಎಂದು ಭರವಸೆ ನೀಡಿದ್ದರು. ಇದು ಚುನಾವಣಾ ನೀತಿ ಸಂಹಿತೆಯ (MCC) ಉಲ್ಲಂಘನೆ ಎಂದು ಬಿಜೆಪಿ ದೂರು ನೀಡಿತು. 4 ದಿನಗಳ ವಿಚಾರಣೆಯ ನಂತರ, ಚುನಾವಣಾ ಆಯೋಗವು ಸಲ್ಮಾನ್ ಖುರ್ಶಿದ್ ಅವರನ್ನು ತೀವ್ರವಾಗಿ ಖಂಡಿಸಿತು. ಇದರಿಂದ ಅಸಮಾಧಾನಗೊಂಡಿದ್ದ ಕಾಂಗ್ರೆಸ್‌ನ ಕೆಲ ನಾಯಕರು, ಚುನಾವಣಾ ಆಯೋಗವು “ಅಹಂಕಾರಿ ಅಥವಾ ನಿರಂಕುಶವಾಗಿ” ವರ್ತಿಸುತ್ತಿದೆ ಎಂದು ಟೀಕಿಸಿದ್ದರು.

ಪ್ರಧಾನಿಯೊಂದಿಗಿನ ಆ ಭಾವುಕ ಸಂಭಾಷಣೆ ಚುನಾವಣಾ ಆಯೋಗದ ಘನತೆಯನ್ನು ಹಾಳುಮಾಡುವ ಇಂತಹ ಟೀಕೆಗಳಿಂದ ತೀವ್ರ ನೋವು ಅನುಭವಿಸಿದ್ದ ಎಸ್.ವೈ. ಖುರೇಷಿ, ಈ ವಿಷಯವನ್ನು ಪ್ರಧಾನಿ ಮನ್ಮೋಹನ್ ಸಿಂಗ್ ಅವರ ಗಮನಕ್ಕೆ ತರಲು ನಿರ್ಧರಿಸಿದರು. ಅಂದಿನ ಪ್ರಧಾನಿ ಮಾಧ್ಯಮ ಸಲಹೆಗಾರ ಹರೀಶ್ ಖರೆ ಮೂಲಕ ವಿಷಯವನ್ನು ತಲುಪಿಸಿದ ನಂತರ, ಮನ್ಮೋಹನ್ ಸಿಂಗ್ ಅವರು ತಕ್ಷಣ ಖುರೇಷಿ ಅವರನ್ನು ಭೇಟಿಯಾಗಲು ಕರೆದರು.

ಖುರೇಷಿ ಭೇಟಿಯಾದಾಗ, ಮಾಜಿ ಪ್ರಧಾನಿ ಆತಂಕದ ಧ್ವನಿಯಲ್ಲಿ ಹೀಗೆಂದರು: “ಹರೀಶ್ ಅವರು ನೀವು ಹೇಳಿದ ವಿಷಯಗಳನ್ನು ತಿಳಿಸಿದರು. ನಿಮ್ಮ ಮನಸ್ಸಿನಲ್ಲಿ ಅಂತಹ ಭಾವನೆ ಇದ್ದರೆ, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ.”

ಪ್ರಧಾನಿಯವರ ಈ ಮಾತಿನಿಂದ ದಂಗಾದ ಖುರೇಷಿ, “ಸರ್, ನನ್ನ ಸಿಟ್ಟು ಸಚಿವರ ವರ್ತನೆಯ ಮೇಲೆಯೇ ಹೊರತು ನಿಮ್ಮ ಬಗ್ಗೆಯಲ್ಲ” ಎಂದು ಸ್ಪಷ್ಟನೆ ನೀಡಬೇಕಾಯಿತು. ತಮ್ಮ ಉದ್ದೇಶದ ಬಗ್ಗೆ ಚುನಾವಣಾ ಆಯುಕ್ತರಿಗೆ ಅನುಮಾನವಿದೆ ಎಂದು ಭಾವಿಸುವುದು ಮನ್ಮೋಹನ್ ಸಿಂಗ್ ಅವರಿಗೆ ಅಸಹನೀಯವಾಗಿತ್ತು.

ಇದನ್ನೂ ಓದಿ: ತಮಿಳುನಾಡು | ಗೋಹತ್ಯೆ ನಿಷೇಧಿಸಲು ಮದ್ರಾಸ್ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ತಡೆ

“ಚುನಾವಣಾ ಆಯೋಗ ಪ್ರಜಾಪ್ರಭುತ್ವದ ಆತ್ಮ” ಈ ವೇಳೆ ಮನಮೋಹನ್ ಸಿಂಗ್ ಅವರು, “ಚುನಾವಣಾ ಆಯೋಗವು ಕೇವಲ ಭಾರತದ ಹೆಮ್ಮೆಯಲ್ಲ; ಅದು ನಮ್ಮ ಪ್ರಜಾಪ್ರಭುತ್ವದ ಆತ್ಮ. ನಾವು ಅದನ್ನು ಕಳೆದುಕೊಂಡರೆ ಎಲ್ಲವನ್ನೂ ಕಳೆದುಕೊಂಡಂತೆ” ಎಂದು ಹೇಳುವ ಮೂಲಕ ಆಯೋಗಕ್ಕೆ ನೀಡಿದ್ದ ಅಗಾಧ ಗೌರವವನ್ನು ವ್ಯಕ್ತಪಡಿಸಿದ್ದರು. ಈ ಸಭೆಯ ನಂತರ, ಚುನಾವಣಾ ಆಯೋಗದ ವಿರುದ್ಧ ಬರುತ್ತಿದ್ದ ಟೀಕೆಗಳು ತಕ್ಷಣವೇ ನಿಂತವು ಎಂದು ಖುರೇಷಿ ಸ್ಮರಿಸಿಕೊಂಡಿದ್ದಾರೆ. “ನಾನು ನನ್ನ ಜೀವನದಲ್ಲಿ ಅನೇಕ ಶಕ್ತಿಶಾಲಿ ವ್ಯಕ್ತಿಗಳನ್ನು ನೋಡಿದ್ದೇನೆ, ಆದರೆ ಅಧಿಕಾರವನ್ನು ಅಷ್ಟು ಹಗುರವಾಗಿ, ಅದೇ ಸಮಯದಲ್ಲಿ ಅದರ ತೂಕವನ್ನು ಅಷ್ಟೊಂದು ಗಂಭೀರವಾಗಿ ಅನುಭವಿಸುತ್ತಿದ್ದ ಕೆಲವೇ ವ್ಯಕ್ತಿಗಳಲ್ಲಿ ಡಾ. ಮನಮೋಹನ್ ಸಿಂಗ್ ಒಬ್ಬರು” ಎಂದು ಖುರೇಷಿ ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಮ್ಮನ್ನು ದಮನಿಸುವ ಪೊಲೀಸ್ ಆದೇಶ ಕೂಡಲೇ ರದ್ದಾಗಲಿ’: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಲಿಂಗತ್ವ ಅಲ್ಪಸಂಖ್ಯಾತರು

ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಇತ್ತೀಚೆಗೆ ಹೊರಡಿಸಿರುವ...

ಎಸ್‌ಸಿ, ಎಸ್‌ಟಿ ಮೀಸಲಾತಿ ಶೇ.56ಕ್ಕೆ ಏರಿಕೆ ಮಾಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್!

ರಾಜ್ಯದ ಹಿಂದಿನ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರವು ಪರಿಶಿಷ್ಟ ಜಾತಿ (ಎಸ್‌ಸಿ)...

ದೆಹಲಿಯಲ್ಲಿ ಹೆಚ್ಚಿದ ಕಟ್ಟೆಚ್ಚರ: ಒಂದು ತಿಂಗಳು 20,000 ಅರೆಸೇನಾ ಸಿಬ್ಬಂದಿ ನಿಯೋಜನೆ

ಪ್ರತಿಪಕ್ಷ 'ಇಂಡಿಯಾ' ಒಕ್ಕೂಟದ ಪ್ರತಿಭಟನೆ ಹಾಗೂ ಮುಂಬರುವ ಹಬ್ಬದ ಋತುವಿನ ಹಿನ್ನೆಲೆಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...