ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ. ಪರಿಹಾರ

Date:

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹರಿಯಾಣದ ಕಾನೂರೈ ಗಡಿಯಲ್ಲಿ ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ 21 ವರ್ಷದ ರೈತ ಶುಭಕರನ್ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರ 1 ಕೋಟಿ ರೂ. ಪರಿಹಾರ ನೀಡಿದೆ. ಜೊತೆಗೆ ರೈತನ ಸಹೋದರಿಯೊಬ್ಬರಿಗೆ ಸರ್ಕಾರಿ ಕೆಲಸ ನೀಡುವುದಾಗಿ ಸರ್ಕಾರ ತಿಳಿಸಿದೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ತಿಳಿಸಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ “ರೈತರ ಪ್ರತಿಭಟನೆ ಸಂದರ್ಭದಲ್ಲಿ ಹುತಾತ್ಮರಾದ ಶುಭಕರನ್ ಸಿಂಗ್ ಅವರಿಗೆ ಪಂಜಾಬ್‌ ಸರ್ಕಾರದ ವತಿಯಿಂದ 1 ಕೋಟಿ ರೂ. ನೆರವು ನೀಡಲಾಗುವುದು ಹಾಗೂ ರೈತನ ಕಿರಿಯ ಸಹೋದರಿಗೆ ಸರ್ಕಾರಿ ಕೆಲಸ ನೀಡಲಾಗುವುದು. ಅಲ್ಲದೆ ಅಪರಾಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ” ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ರೈತ ನಾಯಕರು ಸಹ ಮೃತನ ಕುಟುಂಬಕ್ಕೆ ಹಣಕಾಸು ನೆರವು, ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ಹಾಗೂ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು.

ಶುಭಕರನ್ ಸಿಂಗ್ ಕುಟುಂಬಕ್ಕೆ ಹುತಾತ್ಮ ಸ್ಥಾನಮಾನ ನೀಡುವಂತೆ ರೈತ ನಾಯಕರು ಬೇಡಿಕೆಯಿಟ್ಟಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಮೃತ ರೈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಪಾಟಿಯಾಲದ ರಾಜೇಂದ್ರ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು.

ಮರಣೋತ್ತರ ಪರೀಕ್ಷೆಯ ನಂತರ ದೂರನ್ನು ದಾಖಲಿಸಲಾಗಿದೆ. ಮೃತನ ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಂಜಾಬ್ ಸಿಎಂ ತಿಳಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಹಾಗೂ ಕಿಸಾನ್ ಮಜ್ದೂರ್ ಮೋರ್ಚಾ(ಕೆಎಂಎಂ) ಸಂಘಟನೆಗಳು ಎಂಎಸ್‌ಪಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿವೆ. ರೈತನ ಸಾವಿನಿಂದಾಗಿ ಎರಡು ದಿನ ಪ್ರತಿಭಟನೆಯನ್ನು ಸ್ಥಗಿತಗೊಳಿಸಲು ರೈತ ನಾಯಕರು ನಿರ್ಧರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...