ಕೇರಳ, ಕರ್ನಾಟಕಕ್ಕೆ ಮುಂಗಾರು ಪ್ರವೇಶ; ಹಲವೆಡೆ ಭಾರೀ ಮಳೆ

Date:

ಗುರುವಾರ ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು ಈ ವರ್ಷ ಮೂರು ದಿನಗಳ ಕಾಲ ವಿಳಂಬವಾಗಿದೆ. ಸದ್ಯ ಕೇರಳ ಬಹುತೇಕ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿಗೂ ಮುಂಗಾರು ಪ್ರವೇಶವಾಗಿದೆ.

- Advertisement -

ಈ ಹಿಂದೆ ಹವಾಮಾನ ಇಲಾಖೆಯು ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಅಂದಾಜಿಸಿತ್ತು. ಆದರೆ ಎಲ್‌ನಿನೋ ಮತ್ತು ಬಂಗಾಳ ಕೊಲ್ಲಿಯ ಚಂಡಮಾರುತದ ಪ್ರಭಾವದಿಂದಾಗಿ ಮೇ 26ರಂದು ಮುಂಗಾರು ಕಾಣಿಸಿಕೊಂಡಿರಲಿಲ್ಲ. ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗಬಹುದು ಎಂದು ಹವಾಮಾನ ಇಲಾಖೆ ಹೇಳಿತ್ತು. ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಇದನ್ನು ಓದಿದ್ದೀರಾ? ಮಳೆ ಇನ್ನಷ್ಟು ಕಡಿಮೆ: ಮುಂಗಾರು ಮುನ್ಸೂಚನೆ ಪರಿಷ್ಕರಿಸಿದ ಹವಾಮಾನ ಇಲಾಖೆ

ಗುರುವಾರ ಬೆಳಿಗ್ಗೆಯಿಂದಲೇ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆಯು ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಗುಡುಗು ಸಹಿತ ಭಾರೀ ಮಳೆಯಾಗಲಿದೆ, ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನೂ ನೀಡಿದೆ.

ಇಂದು ಮುಂಗಾರು ಕೇರಳದ ಇಡೀ ರಾಜ್ಯ, ಮಾಹೆ ಮತ್ತು ಲಕ್ಷದ್ವೀಪ ದ್ವೀಪಗಳನ್ನು ಆವರಿಸಿ ಕರ್ನಾಟಕ ಮತ್ತು ತಮಿಳುನಾಡಿನ ಕೆಲವು ಭಾಗಗಳಿಗೆ ತಲುಪಿದೆ ಎಂದೂ ಹವಾಮಾನ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯಕ್ಕೆ ಜೂನ್ 5ರಿಂದ 7ರ ನಡುವೆ ಮಳೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು. ಆದರೆ ಕೇರಳಕ್ಕೆ ಮುಂಗಾರು ಪ್ರವೇಶಿಸಿ ಕರ್ನಾಟಕದ ಕರಾವಳಿಗೂ ಪ್ರವೇಶಿಸಿದೆ. ರಾಜ್ಯದ ಕೆಲವೆಡೆಯೂ ಮಳೆಯಾಗುತ್ತಿದೆ.

ಇನ್ನು ಈಗಾಗಲೇ ಈ ವರ್ಷದ ಮುಂಗಾರು ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಪರಿಷ್ಕರಿಸಿದೆ. ಈ ಹಿಂದೆ ಅಂದಾಜು ಮಾಡಿದ್ದಕ್ಕಿಂತಲೂ ಈ ಬಾರಿ ಮಳೆಯ ಪ್ರಮಾಣ ಇನ್ನಷ್ಟೂ ಕಡಿಮೆಯಾಗಲಿದೆ ಎಂದು ತಿಳಿಸಿದೆ.

ಈ ಹಿಂದೆ ಏಪ್ರಿಲ್ 13ರಂದು ಹೊರಡಿಸಲಾದ ಮುಂಗಾರು ಮುನ್ಸೂಚನೆಯಲ್ಲಿ ದೀರ್ಘಾವಧಿಯ ಸರಾಸರಿ (LPA) ಮಳೆಯ ಶೇ.92ರಷ್ಟು ಮುಂಗಾರು ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿತ್ತು. ಆದರೆ ಈಗ ಈ ಶೇಕಡವಾರು ಪ್ರಮಾಣವನ್ನು ಹವಾಮಾನ ಇಲಾಖೆ ಇನ್ನಷ್ಟು ಕಡಿಮೆ ಮಾಡಿದೆ. ಈ ಮುಂಗಾರಿನಲ್ಲಿ ದೀರ್ಘಾವಧಿಯ ಸರಾಸರಿ ಮಳೆ ಪ್ರಮಾಣದ ಶೇ.90ರಷ್ಟು ಮಾತ್ರ ಮಳೆಯಾಗಲಿದೆ ಎಂದು ಹೇಳಿದೆ.

ಇನ್ನು ಐಎಂಡಿ ಪ್ರಕಾರ ಈಶಾನ್ಯ ಭಾರತದಲ್ಲಿ ಈ ಮುಂಗಾರಿನಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ. ಆದರೆ ದೇಶದ ಇತರ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...