ಮ್ಯಾನುಯಲ್ ಸ್ಕ್ಯಾವೆಂಜಿಂಗ್ | ಕೊಳಚೆ ಸ್ವಚ್ಛಗೊಳಿಸಲು ಗುಂಡಿಗೆ ಇಳಿದಿದ್ದ ನಾಲ್ವರು ಕಾರ್ಮಿಕರು ಸಾವು

Date:

ಕೈಯಲ್ಲಿ ಮಲ ಬಾಚುವಿಕೆ, ಮಲದ ಗುಂಡಿಗಳಿಗೆ ಪೌರ ಕಾರ್ಮಿಕರನ್ನು ಇಳಿಸುವುದನ್ನು ಕಾನೂನಾತ್ಮಕವಾಗಿ ನಿಷೇಧಿಸಿದ್ದರೂ, ಈ ಅನಿಷ್ಟ ಪದ್ದತಿ ಇನ್ನೂ ಜೀವಂತವಾಗಿದೆ. ಸರ್ಕಾರಿ ಅಧಿಕಾರಿಗಳು ಸೇರಿದಂತೆ ಪ್ರಬಲರು ಪೌರ ಕಾರ್ಮಿಕರನ್ನು ಕೊಳಚೆ ಗುಂಡಿಗಳಿಗೆ ಇಳಿಸಿ, ಕೆಲಸ ಮಾಡಿಸುವುದು ಈಗಲೂ ಅಲ್ಲಲ್ಲಿ ವರದಿಯಾಗುತ್ತಿದೆ.

ಅಂಥದ್ದೇ ದುರ್ಘಟನೆಯೊಂದು ಬಿಹಾರ ರಾಜ್ಯದಲ್ಲಿ ನಡೆದಿದೆ. ಅಲ್ಲಿನ ಸೂರತ್ ಜಿಲ್ಲೆಯ ಪಲ್ಸಾನಾ ಪ್ರದೇಶದಲ್ಲಿ ಸೆಪ್ಟಿಕ್‌ ಟ್ಯಾಂಕ್‌ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಇಳಿಸಲಾಗಿದ್ದು, ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಪಲ್ಸಾನಾ-ಕಟೋದರ ರಸ್ತೆಯಲ್ಲಿರುವ ಕಾರ್ಖಾನೆಯಲ್ಲಿ ಮಂಗಳವಾರ ಘಟನೆ ನಡೆದಿದೆ. ಕಾರ್ಖಾನೆಯ ಡೈಯಿಂಗ್ ಘಟಕದಲ್ಲಿ ಸೆಪ್ಟಿಕ್ ಟ್ಯಾಂಕ್‌ಗೆ ಕಾರ್ಮಿಕರನ್ನು ಇಳಿಸಲಾಗಿದ್ದು, ಟ್ಯಾಂಕ್‌ನಲ್ಲಿಯೇ ನಾಲ್ವರೂ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಇಬ್ಬರು ಕಾರ್ಮಿಕರು ಪ್ರಜ್ಞಾಹೀನರಾಗಿದ್ದರು. ಅವರನ್ನು ರಕ್ಷಿಸಲು ಇನ್ನಿಬ್ಬರು ಟ್ಯಾಂಕ್‌ಗೆ ಇಳಿದಿದ್ದು, ಅವರೂ ಮೂರ್ಛೆ ಹೋಗಿದ್ದರು ಎಂದು ಪನ್ಸಾಲಾ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಲ್ವರನ್ನೂ ಟ್ಯಾಂಕ್‌ನಿಂದ ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರು ಸಾವನ್ನಪ್ಪಿದ್ದಾರೆಂದು ವೈದ್ಯರು ಖಾತ್ರಿಪಡಿಸಿದರು ಎಂದು ಅವರು ತಿಳಿಸಿದ್ದಾರೆ.

ಮೃತರು ಬಿಹಾರ ಮೂಲದವರಾಗಿದ್ದು, ಅವರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಲ ಬಾಚುವ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013ಯ ಮೂಲಕ ಕೈಗಳಲ್ಲಿ ಮಲ ಬಾಚುವಿಕೆಯನ್ನು ನಿಷೇಧಿಸಲಾಗಿದೆ. ರಕ್ಷಣಾತ್ಮಕ ಸಾಧನಗಳಿಲ್ಲದೆ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಕೈಗಳಿಂದ ಸ್ವಚ್ಛಗೊಳಿಸುವುದು ಮತ್ತು ಸ್ವಚ್ಛಗೊಳಿಸುವಂತೆ ಮಾಡುವುದು ಅಪರಾಧವಾಗಿದೆ. 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳು ಪತ್ತೆ

ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ ಐಸ್‌ಕ್ರೀಂ ಒಳಗೆ ಮನುಷ್ಯನ ಬೆರಳು ಪತ್ತೆಯಾಗಿರುವ...

ನೀಟ್ ಫಲಿತಾಂಶ ವಿವಾದ: 1563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಸುಪ್ರೀಂಗೆ ತಿಳಿಸಿದ ಕೇಂದ್ರ

ಈ ವರ್ಷದ ನೀಟ್‌ ಯುಜಿ ಪ್ರವೇಶ ಪರೀಕ್ಷೆಯಲ್ಲಿ 1563 ಅಭ್ಯರ್ಥಿಗಳು ಪಡೆದುಕೊಂಡಿದ್ದ...

ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ

ಲೋಕಸಭೆ ಚುನಾವಣೆ ಬಳಿಕ ಮಹಾರಾಷ್ಟ್ರದ ಮಹಾಯುತಿ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಕೇಂದ್ರ...

ಮೂರನೇ ಬಾರಿ ಅರುಣಾಚಲ ಪ್ರದೇಶ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣವಚನ

ಅರುಣಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪೆಮಾ ಖಂಡು...