ಮಾವೋವಾದಿ ಸಂಪರ್ಕ ಪ್ರಕರಣ: ಪ್ರೊ. ಜಿ.ಎನ್ ಸಾಯಿಬಾಬಾ ನಿರ್ದೋಷಿ: ಬಾಂಬೆ ಹೈಕೋರ್ಟ್

Date:

ಮಾವೋವಾದಿಗಳ ಜೊತೆ ನಂಟು ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್ ಸಾಯಿಬಾಬಾ ಮತ್ತು ಐವರನ್ನು ಬಾಂಬೆ ಹೈಕೋರ್ಟ್‌ ಪ್ರಕರಣದಿಂದ ಖುಲಾಸೆಗೊಳಿಸಿದೆ. ಅವರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಗೊಳಿಸಿದೆ.

- Advertisement -

ಪ್ರಕರಣದ ವಿಚಾಣೆ ನಡೆಸಿದ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠದ ನ್ಯಾಯಮೂರ್ತಿ ವಿನಯ್ ಜೋಶಿ ಮತ್ತು ವಾಲ್ಮೀಕಿ ಎಸ್‌ಎ ಮೆನೇಜಸ್ ಅವರು ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲರನ್ನೂ ಖುಲಾಸೆಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಎಲ್ಲ ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಮಂಜಸವಾದ ಸಾಕ್ಷ್ಯಗಳೊಂದಿಗೆ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಪೀಠವು ಹೇಳಿದೆ. ಸಾಯಿಬಾಬಾ ಅವರನ್ನು ದೂಷಿ ಎಂದು ನಿರ್ಧಿಸಿ 2017ರಲ್ಲಿ ನಾಗ್ಪುರ ಸೆಷನ್‌ ನ್ಯಾಯಾಲಯ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.

ಸಾಯಿಬಾಬಾ ಮತ್ತು ಇತರರ ವಿರುದ್ಧ ಕಟ್ಟುನಿಟ್ಟಾದ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ (ಯುಎಪಿಎ) ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಸಲ್ಲಿಸಿರುವ ದಾಖಲೆಗಳು ‘ಶೂನ್ಯ ಮತ್ತು ಮತ್ತು ಅನೂರ್ಜಿತ’ ಎಂದು ಪೀಠವು ಪರಿಗಣಿಸಿದೆ.

2022ರ ಅಕ್ಟೋಬರ್ 14ರಂದು ಬಾಂಬೆ ಹೈಕೋರ್ಟ್‌ನ ಮತ್ತೊಂದು ಪೀಠವು ಸಾಯಿಬಾಬಾ ಅವರನ್ನು ದೋಷಮುಕ್ತಗೊಳಿಸಿತ್ತು. ಆ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.  ಹೈಕೋರ್ಟ್‌ ಆದೇಶವನ್ನು ಸುಪ್ರೀಂ ಕೋರ್ಟ್‌ ತಡೆಹಿಡಿದಿತ್ತು. ಬಳಿಕ, 2023ರಲ್ಲಿ ಸಾಯಿಬಾಬಾ ಅವರು ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ, ಪ್ರಕರಣವನ್ನು ಹೊಸದಾಗಿ ಆಲಿಸಲು ಸುಪ್ರೀಂ ಕೋರ್ಟ್‌, ಬಾಂಬೆ ಹೈಕೋರ್ಟ್‌ಗೆ ನಿರ್ದೇಶನ ನೀಡಿತ್ತು.

ಈ ಸುದ್ದಿ ಓದಿದ್ದೀರಾ?: ಪ್ರಧಾನಿ ಎಂದರೆ ದೊಡ್ಡಣ್ಣನಿದ್ದಂತೆ: ಮೋದಿಯನ್ನು ಹೊಗಳಿದ ತೆಲಂಗಾಣ ಸಿಎಂ!

ಇದೀಗ, ಪ್ರಕರಣವನ್ನು ಮತ್ತೆ ಆಲಿಸಿದ ಹೈಕೋರ್ಟ್‌ನ ವಿಭಾಗೀಯ ಪೀಠ, ಅವರನ್ನು ನಿರ್ದೋಷಿಯೆಂದು ಹೇಳಿದೆ. ಪ್ರಕರಣವನ್ನು ಖುಲಾಸೆಗೊಳಿಸಿದೆ.

ದೈಹಿಕ ಅಸಾಮರ್ಥ್ಯತೆಗೆ ತುತ್ತಾಗಿರುವ 54 ವರ್ಷದ ಸಾಯಿಬಾಬಾ ಅವರು 2014ರಿಂದ ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ನಾಗ್ಪುರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...