ಮರಾಠ ಮೀಸಲಾತಿ ವಿಚಾರ: ʼಇದು ನನಗೆ ಸರ್ಕಾರಿ ಉದ್ಯೋಗದ ಪ್ರಶ್ನೆʼ ಎಂದು ಬರೆದಿಟ್ಟು ಯುವಕ ಆತ್ಮಹತ್ಯೆ

Date:

Advertisements

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ ಮೀಸಲಾತಿ ವಿಚಾರವಾಗಿ ಮರಾಠಾ ಸಮುದಾಯದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮರ್ಲಾಕ್ ಗ್ರಾಮದ ನಿವಾಸಿ ದಾಜಿಬಾ ರಾಮದಾಸ್ ಕದಮ್ (23) ಯಾವುದೋ ಕೆಲಸಕ್ಕಾಗಿ ನಾಂದೇಡ್‌ಗೆ ಬಂದಿದ್ದರು. ಅವರು ನಗರದ ಝೆಂಡಾ ಚೌಕ್ ಪ್ರದೇಶದಲ್ಲಿ ವಿಷಕಾರಿ ಪದಾರ್ಥವನ್ನು ಸೇವಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದಾಜಿಬಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಸಂಬಂಧಿಕರಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Advertisements

ಆತನ ಬಳಿ ಚೀಟಿಯೊಂದು ಪೊಲೀಸರಿಗೆ ಸಿಕ್ಕಿದೆ. ಅದರಲ್ಲಿ, “ಇದು ನನಗೆ ಸರ್ಕಾರಿ ಉದ್ಯೋಗದ ಪ್ರಶ್ನೆ. ‘ಏಕ್ ಮರಾಠಾ, ಲಕ್ಷ ಮರಾಠಾ’ ಎಂದು ಬರೆಯಲಾಗಿತ್ತು” ಎಂದು ಹೇಳಿದ್ದಾರೆ.

ಭಾಗ್ಯನಗರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ಪ್ರಕರಣದ ದಾಖಲಿಸಲಾಗಿದೆ.

ಮಹಾರಾಷ್ಟ್ರದಲ್ಲಿ 30%ಗಿಂತ ಹೆಚ್ಚು ಜನಸಂಖ್ಯೆ ಇರುವ ಮರಾಠರು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಡಿಸೆಂಬರ್ 24ರೊಳಗೆ ಮೀಸಲಾತಿ ಘೋಷಣೆ ಮಾಡುವಂತೆ ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ರಾಜ್ಯ ಸರ್ಕಾರಕ್ಕೆ ಹೊಸ ಗಡುವು ನೀಡಿದ್ದಾರೆ.

ಮರಾಠಾ ಯುವಕರು ಮೀಸಲಾತಿಗಾಗಿ ಶಾಂತಿಯುತವಾಗಿ ಹೋರಾಟ ನಡೆಸಬೇಕು. ತೀವ್ರವಾದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಅವರು ಮನವಿ ಮಾಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X