ಮರಾಠ ಮೀಸಲಾತಿ | ಮೈದಾನ ಖಾಲಿ ಮಾಡುವಂತೆ ನೋಟಿಸ್‌, ಮಾತುಕತೆಗೆ ಸಿದ್ಧ ಎಂದ ಮನೋಜ್ ಜರಾಂಗೆ

Date:

ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಮನೋಜ್ ಜರಾಂಗೆ ಅವರು ಸರ್ಕಾರದ ಜೊತೆ ಮಾತುಕತೆಗೆ ಒಪ್ಪಿಗೆ ಸೂಚಿಸಿದ್ದಾರೆ.

- Advertisement -

ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಮರಾಠಿಗರಿಗೆ ಮೀಸಲಾತಿ ಒತ್ತಾಯಿಸಿ ಮನೋಜ್ ಜರಾಂಗೆ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಇಂದಿಗೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ಅವರಿಗೆ ಆಜಾದ್ ಮೈದಾನವನ್ನು ಖಾಲಿ ಮಾಡುವಂತೆ ಮುಂಬೈ ಪೊಲೀಸರು ಮಂಗಳವಾರ ನೋಟಿಸ್‌ ಜಾರಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮರಾಠಿಗರಿಗೆ ಮೀಸಲಾತಿ ಬೇಡಿಕೆಯನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವವರು ಬಾಂಬೆ ಹೈಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಪೊಲೀಸರು ವಿಧಿಸಿದ್ದ ಪ್ರತಿಭಟನೆ ಪೂರ್ವ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜರಾಂಗೆ ಅವರಿಗೆ ನೋಟಿಸ್ ನೀಡಲಾಗಿದೆ.

ಮನೋಜ್ ಜರಾಂಗೆ ಅಪಾರ ಬೆಂಬಲಿಗರು ನಗರದಲ್ಲಿ ಬೀಡು ಬಿಟ್ಟಿದ್ದಾರೆ. ಮೀಸಲಾತಿ ಆಂದೋಲನದಿಂದಾಗಿ ಇಡೀ ಮುಂಬೈ ನಗರ ಸ್ತಬ್ಧಗೊಂಡಿದೆ ಎಂದು ಬಾಂಬೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಜರಾಂಗೆ ಅವರ ಪ್ರತಿಭಟನೆಯು ಶಾಂತಿಯುತವಾಗಿಲ್ಲ ಮತ್ತು ಅವರ ಆಂದೋಲನವು ಎಲ್ಲ ಷರತ್ತುಗಳನ್ನು ಉಲ್ಲಂಘಿಸಿದೆ ಎಂದೂ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.

ತಮ್ಮ ಹೋರಾಟಕ್ಕೆ ಯಾವುದೇ ಪರಿಹಾರ ಸಿಗದೇ ಇರುವುದರಿಂದ ಜರಾಂಗೆ ಪಾಟೀಲ್ ಹೋರಾಟದ ಹಿನ್ನೆಲೆ ಇಂದಿನಿಂದ ನೀರು ಕೂಡ ತ್ಯಜಿ‌ಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...