ಮರಾಠಿ ಭಾಷೆ ಕಡ್ಡಾಯ: ಮುಂಬೈನಲ್ಲಿ ಆಟೋ ಚಾಲಕರ ಮೂರು ದಿನಗಳ ಮುಷ್ಕರ ಆರಂಭ

Date:

ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಕನಿಷ್ಠ ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ಆದೇಶವನ್ನು ವಿರೋಧಿಸಿ ಮುಂಬೈನ ಆಟೋ ಚಾಲಕರು ಸೋಮವಾರದಿಂದ ಮೂರು ದಿನಗಳ ಮುಷ್ಕರವನ್ನು ಆರಂಭಿಸಿದ್ದಾರೆ.

- Advertisement -

​ಈ ನಿಯಮವು ತಮ್ಮ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಹೇರಲಿದೆ ಎಂದು ಮರಾಠಿಯೇತರ ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾಷಾ ಕಡ್ಡಾಯ ನಿಯಮವನ್ನು ವಿರೋಧಿಸಿ ಕಾಂದಿವ್ಲಿ ಲಿಂಕ್ ರಸ್ತೆಯಲ್ಲಿ ಚಾಲಕರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಬಹುತೇಕ ವಯಸ್ಸಾದ ಚಾಲಕರು ಯಾವುದೇ ಔಪಚಾರಿಕ ಶಿಕ್ಷಣ ಪಡೆದಿಲ್ಲ, ಹೀಗಾಗಿ ಅವರಿಗೆ ಹೊಸದಾಗಿ ಭಾಷೆ ಕಲಿಯುವುದು ಮತ್ತು ಈ ನಿಯಮವನ್ನು ಪಾಲಿಸುವುದು ಕಷ್ಟವಾಗುತ್ತಿದೆ ಎಂದು ಪ್ರತಿಭಟನಾಕಾರರು ತಮ್ಮ ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​”ನಮಗೆ 55-60 ವರ್ಷ ವಯಸ್ಸಾಗಿದೆ. ನಾವು ಯಾವತ್ತೂ ಶಾಲೆಯ ಮೆಟ್ಟಿಲು ಹತ್ತಿದವರಲ್ಲ. ಈಗ ದಿಢೀರನೆ ನಾವು ಮರಾಠಿ ಮಾತನಾಡುವುದು ಹೇಗೆ? ನಾವೇನಾದರೂ ವಿದ್ಯಾವಂತರಾಗಿದ್ದರೆ ಯಾವುದಾದರೂ ಕಚೇರಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದೆವು” ಎಂದು ಚಾಲಕರೊಬ್ಬರು ಅಸಹಾಯಕತೆ ವ್ಯಕ್ತಪಡಿಸಿದರು.

​ಅನೇಕ ಚಾಲಕರು ಮುರಿದು ಮುರಿದು ಮರಾಠಿ ಮಾತನಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಸರ್ಕಾರ ಭಾಷೆ ಕಲಿಯಲು ಸೂಕ್ತ ಸಮಯಾವಕಾಶ ನೀಡುವ ಬದಲು ದಂಡ ವಿಧಿಸುತ್ತಿದೆ ಎಂದು ಅವರು ಆರೋಪಿಸಿದರು. “ನಾವು 15,000 ದಿಂದ 20,000 ರೂಪಾಯಿಗಳಷ್ಟು ಭಾರಿ ದಂಡವನ್ನು ಕಟ್ಟಲು ಸಾಧ್ಯವೇ? ನಮಗೆ ನ್ಯಾಯ ಸಿಗುವವರೆಗೂ ಈ ಮುಷ್ಕರವನ್ನು ಮುಂದುವರಿಸುತ್ತೇವೆ” ಎಂದು ಚಾಲಕರು ಎಚ್ಚರಿಕೆ ನೀಡಿದ್ದಾರೆ.

​ಭಾಷಾ ನಿಯಮದ ಬಗ್ಗೆ ಸಾರಿಗೆ ಕಾರ್ಮಿಕರ ಒಂದು ವರ್ಗದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಈ ಮುಷ್ಕರ ನಡೆದಿದೆ. ಭಾಷಾ ಕಡ್ಡಾಯ ನಿಯಮ ಹಾಗೂ ಅದಕ್ಕೆ ವಿಧಿಸುತ್ತಿರುವ ದಂಡದ ಬಗ್ಗೆ ಅಧಿಕಾರಿಗಳು ಮರುಪರಿಶೀಲನೆ ನಡೆಸಬೇಕು ಎಂದು ಚಾಲಕರು ಒತ್ತಾಯಿಸಿದ್ದಾರೆ. ಮುಂಬೈನಂತಹ ಮಹಾನಗರದಲ್ಲಿ ಆಟೋ ಚಾಲಕರಿಗೆ ಭಾಷಾ ಪ್ರಾವೀಣ್ಯತೆ ಕಡ್ಡಾಯವಾಗಿರಬೇಕೇ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಈ ದಿನ ಸಂಪಾದಕೀಯ | ರಾಜಧಾನಿ ದೆಹಲಿಗೆ ದಿಗ್ಬಂಧನ- ಸಹಸ್ರಾರು ಯುವಜನರ ಬಂಧನ, ಇದೇನು ತುರ್ತುಪರಿಸ್ಥಿತಿಯೇ?

ದೇಶದ ರಾಜಧಾನಿಗೇ ದಿಗ್ಬಂಧನ ಹಾಕಲಾಗಿದೆ. ಇದೇನು ತುರ್ತುಪರಿಸ್ಥಿತಿಯೇ? ಯುದ್ಧದ ಭೀತಿಯೇ? ಏನೂ...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...