ವಿವಾಹಿತ ಪುರುಷ ಸಮ್ಮತಿಯ ಲಿವ್‌ಇನ್ ಸಂಬಂಧದಲ್ಲಿರುವುದು ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

Date:

ವಿವಾಹಿತ ಪುರುಷ ವಯಸ್ಕ ಮಹಿಳೆಯೊಂದಿಗೆ ಸಮ್ಮತಿಯ ಲಿವ್‌ಇನ್ ಸಂಬಂಧದಲ್ಲಿ ಇರುವುದು ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಜೆಜೆ ಮುನೀರ್ ಮತ್ತು ನ್ಯಾಯಮೂರ್ತಿ ತರುಣ್ ಸಕ್ಸೇನಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.

- Advertisement -

ಶಹಜಹಾನ್‌ಪುರ ಜಿಲ್ಲೆಯ ಜೈತಿಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ತಾಯಿ ಬಿಎನ್‌ಎಸ್‌ನ ಸೆಕ್ಷನ್ 87 (ಮದುವೆಯಾಗಲು ಒತ್ತಾಯಿಸಿ ಮಹಿಳೆಯನ್ನು ಅಪಹರಿಸುವುದು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜೋಡಿಯೊಂದು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಲಿವ್‌ಇನ್ ಸಂಗಾತಿಯನ್ನು ಕೊಂದು ಮೃತದೇಹವನ್ನು ಎಂಟು ತಿಂಗಳು ಫ್ರಿಡ್ಜ್‌ನಲ್ಲಿಟ್ಟ ದುರುಳ

ಜೋಡಿಯು ತಮಗೆ ಜೀವ ಬೆದರಿಕೆ ಇದೆ, ಭದ್ರತೆ ಒದಗಿಸಬೇಕು ಎಂದು ಕೋರಿದೆ. ಮಹಿಳೆಯ ಪೋಷಕರು ಮತ್ತು ಇತರ ಕುಟುಂಬ ಸದಸ್ಯರು ಜೀವ ಬೆದರಿಕೆ ಹಾಕಿದ್ದು, ಜೋಡಿಯು ಮರ್ಯಾದಾ ಹತ್ಯೆಯ ಆತಂಕವಿದೆ ಎಂದು ಹೇಳಿದೆ.

ಈ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, “ವಿವಾಹಿತ ಪುರುಷನು, ವಯಸ್ಕರಾದ ಇನ್ನೊಬ್ಬ ವ್ಯಕ್ತಿಯ ಒಪ್ಪಿಗೆಯೊಂದಿಗೆ ಲಿವ್ಇನ್ ಸಂಬಂಧದಲ್ಲಿದ್ದರೆ ಅದು ಅಪರಾಧವಾಗಲ್ಲ. ಅದು ಅಪರಾಧ ಎಂದು ಹೂಡಲು ಯಾವುದೇ ಮೊಕದ್ದಮೆ ಇಲ್ಲ. ನೈತಿಕತೆ ಮತ್ತು ಕಾನೂನನ್ನು ಪ್ರತ್ಯೇಕವಾಗಿ ಇಡಬೇಕು” ಎಂದು ಹೇಳಿದೆ.

“ಸ್ಪಷ್ಟವಾಗಿ, ಪೊಲೀಸ್ ವರಿಷ್ಠಾಧಿಕಾರಿಯ ಈ ದೂರಿನ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಒಟ್ಟಿಗೆ ವಾಸಿಸುವ ಇಬ್ಬರು ವಯಸ್ಕರನ್ನು ರಕ್ಷಿಸುವುದು ಪೊಲೀಸರ ಕರ್ತವ್ಯವಾಗಿದೆ” ಎಂದು ಹೇಳಿದೆ. ಹಾಗೆಯೇ ಈ ಪ್ರಕರಣದಲ್ಲಿ ಈ ಜೋಡಿಯನ್ನು ಬಂಧಿಸುವುದಕ್ಕೆ ಕೋರ್ಟ್ ನಿರ್ಬಂಧ ವಿಧಿಸಿದೆ.

ಮಹಿಳೆಯ ಪೋಷಕರು ಮತ್ತು ಅವರ ಕುಟುಂಬದ ಎಲ್ಲ ಸದಸ್ಯರು ಮಹಿಳೆಯ ಮನೆಗೆ ಪ್ರವೇಶಿಸುವಂತಿಲ್ಲ ಮತ್ತು ಸಂಪರ್ಕಿಸುವಂತಿಲ್ಲ ಅಥವಾ ಅವರಿಗೆ ಯಾವುದೇ ಹಾನಿ ಮಾಡುವುದನ್ನು ನಿರ್ಬಂಧಿಸಿದೆ. ಜೋಡಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ ಬದುಕುವ ಭಗತ್ ಸಿಂಗ್

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ...

ಬೀದರ್‌ | ಬರ : ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ರೈತರ ಸಾಲ ಮನ್ನಾಗೆ ಆಗ್ರಹಿಸಿ ರೈತರಿಂದ ಬೈಕ್‌ ರ‍್ಯಾಲಿ

ರೈತರು ಬೆಳೆಯುವ ಎಲ್ಲ ಬೆಳೆಗಳಿಗೆ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕಾನೂನುಬದ್ಧ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ – ಪತ್ರಿಕಾಧರ್ಮ ಅಡವಿಟ್ಟ ಮಾಧ್ಯಮಗಳು

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ...