ಮರ್ಯಾದಾಗೇಡು ಹತ್ಯೆ | ಅಂತರ್ಜಾತಿ ಪ್ರೀತಿ; ತಂದೆಯ ಕ್ರೌರ್ಯಕ್ಕೆ ಮಗಳು ಬಲಿ

Date:

ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ತಂದೆ ಮತ್ತು ಅಣ್ಣ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

- Advertisement -

ತೇಲಿ ಸಮುದಾಯದ ನೇಹಾ ರಾಥೋಡ್ ಮತ್ತು ಜಾಟ್ ಸಮುದಾಯದ ಸೂರಜ್ ಪರಸ್ಪರ ಪ್ರೀತಿಸಿದ್ದರು. ಅವರ ಪ್ರೀತಿಗೆ ಯುವತಿಯ ಕುಟುಂಬಸ್ಥರು ಒಪ್ಪಿರಲಿಲ್ಲ. ತನ್ನ ಮನೆ ತೊರೆದಿದ್ದ ಯುವತಿ ನೇಹಾ ಮತ್ತು ಸೂರಜ್ ಮಾರ್ಚ್ 11ರಂದು ಗಾಜಿಯಾಬಾದ್‌ನ ಆರ್ಯ ಸಮಾಜ ಮಂದಿರದಲ್ಲಿ ವಿವಾಹವಾಗಿದ್ದರು. ಹಾಪುರ್‌ನಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆದರೆ, ತಮ್ಮ ಮಗಳು ಬೇರೊಂದು ಜಾತಿಯ ಯುವಕನನ್ನು ಮದುವೆಯಾಗಿದ್ದು ಯುವತಿಯ ಕುಟುಂಬಸ್ಥರನ್ನು ಕುಪಿತಗೊಳಿಸಿತ್ತು. ಅಂತರ್ಜಾತಿ ವಿವಾಹವಾದ ಮಗಳ ಮೇಲೆ ಆಕೆಯ ತಂದೆಗೆ ದ್ವೇಷ ಬೆಳೆದಿತ್ತು. ಆಕೆಯನ್ನು ಹತ್ಯೆ ಮಾಡಬೇಕೆಂದು ಯುವತಿಯ ತಂದೆ ಮತ್ತು ಸಹೋದರ ಸಂಚು ರೂಪಿಸಿದ್ದರು ಎಂದು ವರದಿಯಾಗಿದೆ.

ಮಾರ್ಚ್‌ 12ರಂದು ಯುವತಿಯನ್ನು ಆಕೆಯ ತಂದೆ ಮತ್ತು ಸಹೋದರ ಹತ್ಯೆ ಮಾಡಿದ್ದಾರೆ. ಸಾಕ್ಷ್ಯನಾಶಕ್ಕಾಗಿ ಆಕೆಯ ಮೃತದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ನೋಯ್ಡಾ ಡಿಸಿಪಿ ಶಕ್ತಿ ಮೋಹನ್ ಅವಸ್ಥಿ ಹೇಳಿದ್ದಾರೆ.

ಯುವತಿಯ ತಂದೆ ಭಾನು ರಾಥೋಡ್ ಮತ್ತು ಸಹೋದರ ಹಿಮಾಂಶು ರಾಥೋಡ್‌ನನ್ನು ಬಂಧಿಸಲಾಗಿದೆ. ಪೊಲೀಸರು ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯ ನಡೆದ ಸ್ಥಳದ ಸುತ್ತ-ಮುತ್ತಲಿನ ಸಿಸಿ ಟಿವಿ ದೃಶ್ಯಾವಳಿಗಳನ್ನೂ ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...