ಮರ್ಯಾದೆಗೇಡು ಹತ್ಯೆ: ಯುವತಿಗೆ ವಿದ್ಯುತ್ ಸ್ಪರ್ಶಿಸಿ ಕೊಲೆ; ದುರುಳ ತಂದೆ-ಮಗನ ಬಂಧನ

Date:

ಕುಟುಂಬದ ದೂರದ ಸಂಬಂಧಿಯನ್ನು ಮದುವೆಯಾಗಲು ಬಯಸಿದ್ದ 19 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ಸಹೋದರ ಹತ್ಯೆಗೈದಿರುವ ‘ಮರ್ಯಾದೆಗೇಡು ಹತ್ಯೆ’ ಪ್ರಕರಣ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳು ಯುವತಿಗೆ ವಿದ್ಯುತ್‌ ಸ್ಪರ್ಶಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಗೊಂಡಾ ಜಿಲ್ಲೆಯ ಥೋರ್ಹಾನ್ಸ್ ಗ್ರಾಮದಲ್ಲಿ ಘಟನೆ ನಡೆದಿದೆ. ಅಪರಿಚಿತರೊಬ್ಬರು 112ಗೆ ಕರೆ ಮಾಡಿದ್ದು, ಗ್ರಾಮದಲ್ಲಿ ಯುವತಿಯ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಶ್ವಾನ ದಳದ ಸಹಾಯದಿಂದ ತಾಂತ್ರಿಕ ಪುರಾವೆಗಳನ್ನು ಸಂಗ್ರಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿಯು ಆಕೆ ವಿದ್ಯುತ್‌ ಆಘಾತದಿಂದ ಮೃತಪಟ್ಟಿದ್ದಾರೆ ಎಂಬುದನ್ನು ದೃಢಪಡಿಸಿದೆ. ಆ ವರದಿ, ಇತರ ಸಾಕ್ಷ್ಯಗಳು ಮತ್ತು ಯುವತಿಯ ಭಾವಿ ಪತಿ ಪರಮೇಶ್ವರ ಪಾಠಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಯುವತಿಯ ತಂದೆ ಚಂದ್ರ ಪ್ರಕಾಶ್ ಮತ್ತು ಸಹೋದರ ರಾಹುಲ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ” ಎಂದು ಜೈಸ್ವಾಲ್ ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಅಂದು ಸಿದ್ಧಾರ್ಥ, ಇಂದು ರಾಯ್‌; ಸಾಲು ಸಾಲು ಉದ್ಯಮಿಗಳ ಆತ್ಮಹತ್ಯೆ ಹಿಂದಿರುವ ಸತ್ಯವೇನು?

“ಯುವತಿಯು ತನ್ನ ತಂದೆ ಮತ್ತು ಸಹೋದರನ ಇಚ್ಛೆಗೆ ವಿರುದ್ಧವಾಗಿ ದೂರದ ಸಂಬಂಧಿ ಪಾಠಕ್ ಅವರನ್ನು ಮದುವೆಯಾಗಲು ಉದ್ದೇಶಿಸಿದ್ದರು. ಜನವರಿ 30 ರಂದು, ಊರು ತೊರೆಯಲು ನಿರ್ಧರಿಸಿದ್ದರು. ಅದನ್ನು ಅರಿತ ಆರೋಪಿಗಳು ಆಕೆಯನ್ನು ಕೋಣೆಯಲ್ಲಿ ಬಂಧಿಸಿದ್ದಾರೆ. ಆಕೆಯ ಕೈಕಾಲುಗಳನ್ನು ಕಟ್ಟಿ, ಆಕೆಯ ಬಾಯಿಯನ್ನು ಮುಚ್ಚಿ, ವಿದ್ಯುತ್ ಕೇಬಲ್‌ನಿಂದ ವಿದ್ಯುತ್ ಸ್ಪರ್ಷಿಸಿದ್ದಾರೆ” ಎಂದು ವಿವರಿಸಿದ್ದಾರೆ.

ಪರಮೇಶ್ವರ್ ಪಾಠಕ್ ಅವರು ತನಗೆ ಯುವತಿ ಬರೆದ ಹಲವಾರು ಪತ್ರಗಳನ್ನು ಪೊಲೀಸರಿಗೆ ಒದಗಿಸಿದ್ದಾರೆ. ಅದರಲ್ಲಿ; ಆಕೆ ತನ್ನ ತಂದೆ ಮತ್ತು ಸಹೋದರನ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಯುವತಿಯ ಮೃತದೇಹದ ಬಳಿ ಇಸ್ತ್ರಿ ಯಂತ್ರವನ್ನು ಇಟ್ಟು, ಘಟನೆಯು ಅಪಘಾತವೆಂದು ಬಿಂಬಿಸಲು ಪ್ರಯತ್ನಿಸಿದರು. ಆದರೆ, ತನಿಖೆಯಲ್ಲಿ ಸತ್ಯ ಬಯಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಆರೋಪಿಗಳು ಒದಗಿಸಿದ ಮಾಹಿತಿಯ ಆಧಾರದ ಮೇಲೆ, ಮಫ್ಲರ್, ದುಪಟ್ಟಾ ಮತ್ತು ಕೊಲೆಗೆ ಬಳಸಲಾದ ಮೊಬೈಲ್ ಫೋನ್ ಸೇರಿದಂತೆ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...