ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಿಂದ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಶಿವಕಾಶಿ ಬಳಿ ನಡೆದಿದೆ. ಈ ಭೀಕರ ಸ್ಫೋಟದಲ್ಲಿ ಮೂವರು ಗಾಯಗೊಂಡಿದ್ದಾರೆ.
ತಮಿಳುನಾಡಿನ ನರನಪುರಂ ಜಿಲ್ಲೆಯಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ತಯಾರಿಸುತ್ತಿರುವಾಗಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಮೊದಲು ಒಂದು ಕೋಣೆಯಲ್ಲಿ ಸ್ಫೋಟ ಸಂಭವಿಸಿದ್ದು, ಬಳಿಕ ಬೆಂಕಿ ಪಸರಿಸಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ; ನಾಲ್ವರು ಸಾವು
ಇನ್ನು ಸ್ಫೋಟದ ಸದ್ದು ನೂರು ಮೀಟರ್ಗಳವರೆಗೂ ಕೇಳಿಸಿದೆ. ಸ್ಥಳಕ್ಕೆ ಕೂಡಲೇ ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿದ್ದು ಬೆಂಕಿ ನಂದಿಸುವ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ ಎಂದು ಹೇಳಲಾಗಿದೆ.
#JUSTIN சிவகாசி அருகே ஆண்டியாபுரத்தில் பட்டாசு ஆலையில் வெடி விபத்து
— Petti Kadai Media (@PettiKadaimedia) July 21, 2025
தீயணைப்பு வாகனங்கள் விரைந்துள்ளதாக தகவல்#Sivakasi #FireAccident pic.twitter.com/EKmggqFhlA
ಮೃತ ಮೂವರು ಕಾರ್ಮಿಕರ ಪೈಕಿ ಇಬ್ಬರು ಮಹಿಳೆಯರು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯಲಿದೆ ಎಂದು ವರದಿ ಉಲ್ಲೇಖಿಸಿದೆ.
