ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ: 12 ಗಂಟೆಗಳ ಕಾಲ ಸಿಲುಕಿದ ಪ್ರಯಾಣಿಕರು

Date:

ಮುಂಬೈ–ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಪಾಲ್ಘರ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭಾರೀ ಸಂಚಾರ ದಟ್ಟಣೆಯಿಂದ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ನೂರಾರು ಪ್ರಯಾಣಿಕರು 12 ಗಂಟೆಗಳ ಕಾಲ ವಾಹನಗಳಲ್ಲಿ ಸಿಲುಕಿಕೊಂಡು ತೊಂದರೆ ಅನುಭವಿಸಿದರು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

- Advertisement -

ಮುಂಬೈ ಹಾಗೂ ಥಾಣೆ ಪ್ರದೇಶದ ವಿವಿಧ ಶಾಲೆಗಳ 5 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಮತ್ತು ಕೆಲವು ಕಾಲೇಜು ವಿದ್ಯಾರ್ಥಿಗಳನ್ನು ಹೊತ್ತಿದ್ದ 12 ಬಸ್‌ಗಳು ವಸೈ ಸಮೀಪ ಮಂಗಳವಾರ ಸಂಜೆ 5.30ರ ವೇಳೆಗೆ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡು ಬುಧವಾರ ಬೆಳಿಗ್ಗೆವರೆಗೆ ಹಾಗೆಯೇ ನಿಂತಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ವಿರಾರ್ ಬಳಿ ಶಾಲಾ ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದ ವಿದ್ಯಾರ್ಥಿಗಳು ಆಹಾರ ಮತ್ತು ನೀರಿಲ್ಲದೆ ಹಲವು ಗಂಟೆಗಳ ಕಾಲ ಬಸ್ಸುಗಳಲ್ಲಿ ಕಾಯಬೇಕಾಯಿತು.

ವಸೈ ಸಂಚಾರಿ ಉಪ ಪೊಲೀಸ್ ಆಯುಕ್ತೆ ಪೂರ್ಣಿಮಾ ಚೌಗಲೆ-ಶ್ರಿಂಗಿ, ಟ್ರಾಫಿಕ್ ಸಂಪೂರ್ಣವಾಗಿ ಇನ್ನೂ ತೆರವಾಗಿಲ್ಲ. ವಾಹನಗಳು ಅತಿ ನಿಧಾನವಾಗಿ ಮಾತ್ರ ಮುಂದೆ ಸಾಗುತ್ತಿವೆ ಎಂದು ಹೇಳಿದರು.

ಸ್ಥಳೀಯ ಸಾಮಾಜಿಕ ಸಂಘಟನೆಗಳ ಸದಸ್ಯರು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ, ಸಿಲುಕಿಕೊಂಡಿದ್ದ ಮಕ್ಕಳಿಗೆ ನೀರು ಮತ್ತು ಬಿಸ್ಕತ್ ವಿತರಿಸಿದರು ಹಾಗೂ ಚಾಲಕರಿಗೆ ವಾಹನಗಳ ಸಂಚಾರ ಸುಗಮವಾಗುವಂತೆ ಸಹಾಯ ಮಾಡಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

“ಮಕ್ಕಳು ಹಸಿವಿನಿಂದ ಮತ್ತು ಆಯಾಸದಿಂದ ಅಳುತ್ತಿದ್ದರು. ಅದನ್ನು ನೋಡಲು ತುಂಬಾ ಕಷ್ಟವಾಯಿತು. ಸರಿಯಾದ ಟ್ರಾಫಿಕ್ ನಿರ್ವಹಣೆ ಇಲ್ಲದ ಕಾರಣ ಈ ಸ್ಥಿತಿ ಉಂಟಾಗಿದೆ” ಎಂದು ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಥಾಣೆಯ ಘೋಡಬಂದರ್ ಹೆದ್ದಾರಿಯಲ್ಲಿ ನಡೆಯುತ್ತಿರುವ ದುರಸ್ತಿ ಕಾಮಗಾರಿಯ ಹಿನ್ನೆಲೆಯಲ್ಲಿ ಭಾರೀ ವಾಹನಗಳನ್ನು ಮುಂಬೈ–ಅಹಮದಾಬಾದ್ ಹೆದ್ದಾರಿಯ ಕಡೆಗೆ ತಿರುಗಿಸಿದ ಪರಿಣಾಮ ಈ ತೀವ್ರ ಸಂಚಾರದ ಸಮಸ್ಯೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮೀರಾ-ಭಾಯಂದರ್-ವಸೈ-ವಿರಾರ್ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿಗಳು, “ಟ್ರಾಫಿಕ್ ನಿಧಾನವಾಗಿ ಕಡಿಮೆಯಾಗುತ್ತಿದೆ. ಪರಿಸ್ಥಿತಿ ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ” ಎಂದಿದ್ದಾರೆ.

ಕೆಲವು ಬಸ್‌ಗಳು ಪರ್ಯಾಯ ಮಾರ್ಗಗಳನ್ನು ಹಿಡಿದು ಹೊರಬಂದರೆ, ಇನ್ನೂ ಕೆಲವು ನಿಧಾನವಾಗಿ ಟ್ರಾಫಿಕ್‌ನಿಂದ ಪಾರಾದವು. ಕೊನೆಯ ಬಸ್ ಬುಧವಾರ ಬೆಳಿಗ್ಗೆ 6 ಗಂಟೆಯ ವೇಳೆಗೆ ತಲುಪಿತು ಎಂದು ಮೂಲಗಳು ತಿಳಿಸಿವೆ.

“ನಮ್ಮ ಮಕ್ಕಳು ಹಲವು ಗಂಟೆಗಳ ಕಾಲ ಸಹಾಯವಿಲ್ಲದೆ ಬಸ್ಸಿನಲ್ಲಿ ಸಿಲುಕಿಕೊಂಡಿದ್ದರು. ಪೊಲೀಸರ ಸಹಾಯವಿಲ್ಲ, ಯಾವುದೇ ಮಾಹಿತಿ ಇಲ್ಲ” ಎಂದು ಸಿಲುಕಿಕೊಂಡಿದ್ದ ಮಕ್ಕಳ ಪೋಷಕರು ಮತ್ತು ಸ್ಥಳೀಯರು ಆಡಳಿತದ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...

SIR ಅಕ್ರಮ | ಕೂಡಲೇ ಗ್ಯಾನೇಶ್‌ ಕುಮಾರ್‌, ಮೋದಿ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳಾಗಿವೆ ಎಂದು...