ಕೇರಳ | ವಯನಾಡ್‌ನಲ್ಲಿ ಭೀಕರ ಭೂಕುಸಿತ: 7 ಮಂದಿ ಮೃತ್ಯು; 400 ಕುಟುಂಬ ಅತಂತ್ರ

Date:

Advertisements

ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿರುವುದಾಗಿ ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ.

ವಯನಾಡ್ ಜಿಲ್ಲೆಯ ಮೇಪ್ಪಾಡಿ, ಮುಂಡಕೈ ಪಟ್ಟಣ ಮತ್ತು ಚೂರಲ್ ಮಲ ಎಂಬ ಮೂರು ಪ್ರದೇಶದಲ್ಲಿ ಇಂದು ಬೆಳಗ್ಗಿನ‌ ಜಾವ ಭಾರೀ ಭೂಕುಸಿತ ಸಂಭವಿಸಿದೆ.

ಮುಂಡಕೈ ಪೇಟೆಯಲ್ಲಿ ಬೆಳಗಿನ ಜಾವ ಸರಿಸುಮಾರು 4 ಗಂಟೆ ಸುಮಾರಿಗೆ ಸುರಿದ ಭಾರೀ ಮಳೆಗೆ ಮೊದಲ ಭೂಕುಸಿತ ಸಂಭವಿಸಿದೆ. ಇದರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಚೂರಲ್ ಮಲ ಶಾಲೆಯ ಬಳಿ ಎರಡನೇಯ ಭೂಕುಸಿತ ಸಂಭವಿಸಿದೆ.

Advertisements
1001122332

ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಯ ಪ್ರಕಾರ, ಶಾಲೆ ಕೂಡ ಭಾಗಶಃ ಕೊಚ್ಚಿ ಹೋಗಿವೆ. ಜಲಸ್ಪೋಟದಲ್ಲಿ ಬಂಡೆ ಕಲ್ಲುಗಳು ಕೊಚ್ಚಿಕೊಂಡು ಹೋಗಿದ್ದರಿಂದ ಹೆಚ್ಚಿನ ಪ್ರಮಾಣದ ನಾಶ, ನಷ್ಟ ಸಂಭವಿಸಿದೆ. ಅಂಗಡಿ, ಮನೆಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋದವು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಒಟ್ಟು ಮೂರು ಕಡೆಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಈವರೆಗೆ ಏಳು ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಈ ಪ್ರದೇಶದಲ್ಲಿ ಸುಮಾರು 400 ಕುಟುಂಬಗಳು ವಾಸಿಸುತ್ತಿದ್ದು, ಭೂಕುಸಿತ ಉಂಟುಮಾಡಿದ ನಾಶ, ನಷ್ಟದಿಂದಾಗಿ ಅಸಹಾಯಕ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಅನೇಕ ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದ್ದು, ಪ್ರದೇಶದ ಮುಖ್ಯ ರಸ್ತೆ ಮತ್ತು ಚೂರಲ್ ಮಲ ಪಟ್ಟಣದ ಸೇತುವೆ ಹಾನಿಗೊಳಗಾಗಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡಚಣೆಯಾಗಿದೆ.

1001122333

ಮುಂಡಕೈ ಅಟ್ಟಮಲ ಪ್ರದೇಶಕ್ಕೆ ಇದು ಏಕೈಕ ಸೇತುವೆಯಾಗಿದೆ. ಭೂ ಕುಸಿತದ ಬಳಿಕ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಕಾರ್ಯಾಚರಣೆ ನಡೆಸುವವರಿಗೂ ಕೂಡ ಭಾರೀ ಸಂಕಷ್ಟ ಎದುರಾಗಿದೆ.

ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಶಾಸಕ ಟಿ.ಸಿದ್ದೀಕ್ ಮತ್ತು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಈ ಪ್ರದೇಶದಲ್ಲಿ ಸಿಲುಕಿರುವ ಜನರನ್ನು ಸ್ಥಳಾಂತರಿಸುವ ಪ್ರಯತ್ನ ನಡೆಯುತ್ತಿದೆ. ಭಾರೀ ಶಬ್ದದೊಂದಿಗೆ ಭೂಕುಸಿತ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದು, ಸಾವನ್ನಪ್ಪಿದವರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X