ಭೋಪಾಲ್-ವಿದಿಶಾ ಹೆದ್ದಾರಿ ಭೀಕರ ಕುಸಿತ: 20 ಅಡಿ ಆಳದ ಕಂದಕ ಸೃಷ್ಠಿ; ವಿಡಿಯೋ ವೈರಲ್

Date:

ಭೋಪಾಲ್-ವಿದಿಶಾ ಹೆದ್ದಾರಿಯು (ರಾಜ್ಯ ಹೆದ್ದಾರಿ 18) ಭೀಕರವಾಗಿ ಕುಸಿದಿರುವ ಘಟನೆ ಮಧ್ಯಪ್ರದೇಶದ ಸುಖಿ ಸವಾನಿಯಾದಲ್ಲಿ ನಡೆದಿದೆ. ಹೆದ್ದಾರಿಯು ಭೋಪಾಲ್ ಪೂರ್ವ ಬೈಪಾಸ್‌ನ ಸುಮಾರು 50 ಮೀಟರ್ (164 ಅಡಿ) ಉದ್ದದ ರಸ್ತೆಯು ಇದ್ದಕ್ಕಿದ್ದಂತೆ ಕುಸಿದಿದೆ. ಕುಸಿತದಿಂದ 20 ಅಡಿ (6 ಮೀಟರ್) ಆಳದ ಗುಂಡಿ ನಿರ್ಮಾಣವಾಗಿದೆ. ರಸ್ತೆ ಕುಸಿತದಿಂದ ಚಾಲಕರು ರಸ್ತೆಯಲ್ಲಿ ಆತಂಕದಿಂದಲೇ ವಾಹನ ಚಲಾಯಿಸುವಂತಾಗಿದೆ.

- Advertisement -

ಅದೃಷ್ಟವಶಾತ್, ರಸ್ತೆ ಕುಸಿದು ಬಿದ್ದಾಗ, ಸ್ಥಳದಲ್ಲಿ ಯಾವುದೇ ವಾಹನಗಳು-ಜನರು ಇರಲಿಲ್ಲ. ಹೀಗಾಗಿ, ಯಾವುದೇ ಸಾವು-ನೋವು, ಹಾನಿ ಸಂಭವಿಸಿಲ್ಲ. ಒಂದು ವೇಳೆ, ಸಂಚಾರ ದಟ್ಟಣೆ ಇದ್ದಿದ್ದರೆ ಭೀಕರ ಅವಘಡ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಘಟನೆ ನಡೆದು ಗಂಟೆಗಳೇ ಕಳೆದರೂ, ಆಡಳಿತಾತ್ಮಕ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇಷ್ಟು ದೊಡ್ಡ ಅಪಘಾತದ ಹೊರತಾಗಿಯೂ, ಗಂಟೆಗಳ ಕಾಲ ಸ್ಥಳಕ್ಕೆ ಯಾವುದೇ ಅಧಿಕಾರಿಯಾಗಲೀ ಬಂದಿರಲಿಲ್ಲ, ಸುರಕ್ಷತಾ ವ್ಯವಸ್ಥೆಗಳನ್ನಾಗಲೀ ಮಾಡಿರಲಿಲ್ಲ. ಬ್ಯಾರಿಕೇಡ್‌ಗಳನ್ನೂ ಹಾಕಿರಲಿಲ್ಲ ಎಂದು ಆರೋಪಿಸಲಾಗಿದೆ.

ಹೆಚ್ಚು ವಾಹನ ದಟ್ಟಣೆ ಇರುವ ಈ ರಸ್ತೆಯಲ್ಲಿ ಪರಿಸ್ಥಿತಿ ನಿರ್ವಹಣೆಗೆ ಒಬ್ಬರೇ ಒಬ್ಬ ಪೊಲೀಸ್‌ ಮಾತ್ರವೇ ಇದ್ದರು. ಗಂಟೆಗಳ ಬಳಿಕ, ಮಧ್ಯಪ್ರದೇಶ ರಸ್ತೆ ಅಭಿವೃದ್ಧಿ ನಿಗಮ ಮತ್ತು ಸ್ಥಳೀಯ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಬಂದರು. ಬಳಿಕ, ಬ್ಯಾರಿಕೇಡ್‌ಗಳನ್ನು ಅಳವಡಿಸಿದರು ಎಂದು ವರದಿಯಾಗಿದೆ.

ಪದೇ ಪದೇ ಎಚ್ಚರಿಕೆ ನೀಡಿದ್ದರೂ, ಸಂಬಂಧಿತ ಇಲಾಖೆಗಳು ರಸ್ತೆ ದುರಸ್ತಿ ಮಾಡಲು ಮತ್ತು ಪರಿಶೀಲಿಸಲು ನಿರ್ಲಕ್ಷಿಸಿದ್ದರಿಂದ ಪದೇ-ಪದೇ ಅಪಘಾತಗಳು ಸಂಭವಿಸುತ್ತಿವೆ. ರಸ್ತೆಯನ್ನು ಮರುನಿರ್ಮಾಣ ಮಾಡಬೇಕು. ರಸ್ತೆ ಕುಸಿತಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

2013ರಲ್ಲಿ ‘ಮೆಸರ್ಸ್ ಟ್ರಾನ್ಸ್‌ಟ್ರಾಯ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಬಿಒಟಿ ಮಾದರಿಯಲ್ಲಿ ರಸ್ತೆಯನ್ನು ನಿರ್ಮಾಣ ಮಾಡಿತ್ತು. ಒಪ್ಪಂದದ ನಿಯಮಗಳನ್ನು ಪಾಲಿಸದ ಕಾರಣ ಕಂಪನಿಯ ಒಪ್ಪಂದವನ್ನು 2020ರಲ್ಲಿ ರದ್ದುಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸಲು ಸರ್ಕಾರವು ಎಂಪಿಆರ್‌ಡಿಸಿ ಮುಖ್ಯ ಎಂಜಿನಿಯರ್ ಬಿಎಸ್ ಮೀನಾ, ಜಿಎಂ ಮನೋಜ್ ಗುಪ್ತಾ ಮತ್ತು ಜಿಎಂ ಆರ್‌ಎಸ್ ಚಾಂಡೆಲ್ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದೆ. ವರದಿಯ ಆಧಾರದ ಮೇಲೆ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಮಧ್ಯಪ್ರದೇಶ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...