ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

Date:

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಗಂಭೀರ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ‘ಮತ ಕಳ್ಳತನ’ದ ಕಾರ್ಯವಿಧಾನವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು ಜನರ ಮುಂದೆ ಯಥಾವತ್ತಾಗಿ ಬಹಿರಂಗಪಡಿಸುವುದಾಗಿ ಅವರು ಹೇಳಿದ್ದಾರೆ.

- Advertisement -

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್‌ ಗಾಂಧಿ, ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆಯ್ದುಕೊಂಡು ಆಳವಾದ ಅಧ್ಯಯನ ನಡೆಸಿದ್ದೇವೆ. ನಮಗೆ ಕಾಗದದ ಮೇಲಿನ ಪಟ್ಟಿಯನ್ನು ನೀಡಲಾಗಿತ್ತು. ಆದರೆ ಕಾಗದದ ಪಟ್ಟಿಯೊಂದಿಗೆ ವಿಶ್ಲೇಷಣೆ ಸಾಧ್ಯವಿಲ್ಲ. ಆದ್ದರಿಂದ, ಅದನ್ನು ಡಿಜಿಟಲ್‌ ರೂಪಕ್ಕೆ ಪರಿವರ್ತಿಸಿ, ಆರು ತಿಂಗಳ ಕಾಲ ವಿಶ್ಲೇಷಣೆ ನಡೆಸಿದೆವು,” ಎಂದು ಅವರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ವಿಶ್ಲೇಷಣೆಯಿಂದ ಮತದಾರರ ಪಟ್ಟಿಯಲ್ಲಿ ಅಕ್ರಮಗಳು, ಹೊಸ ಮತದಾರರ ಸೇರ್ಪಡೆ, ಮತ್ತು ಅವರನ್ನು ಎಲ್ಲಿಂದ ಕರೆತರಲಾಗುತ್ತದೆ ಎಂಬ ಸಂಪೂರ್ಣ ಕಾರ್ಯವಿಧಾನವನ್ನು ಕಂಡುಹಿಡಿದಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಕುರಿತು ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಆದರೆ, ಯಾವ ಲೋಕಸಭಾ ಕ್ಷೇತ್ರದಲ್ಲಿ ಈ ಅಧ್ಯಯನ ನಡೆಸಲಾಗಿದೆ ಎಂಬುದನ್ನು ಬಹಿರಂಗಪಡಿಸಿಲ್ಲ.

ರಾಹುಲ್‌ ಗಾಂಧಿ ಅವರು, “ಕಾಂಗ್ರೆಸ್‌ ಪಕ್ಷವು ಈ ‘ಅಕ್ರಮದ ಆಟ’ವನ್ನು ತಿಳಿದುಕೊಂಡಿದೆ. ಇದು ಚುನಾವಣಾ ಆಯೋಗಕ್ಕೂ ಗೊತ್ತಾಗಿದೆ. ಆದ್ದರಿಂದಲೇ ಬಿಹಾರದಲ್ಲಿ ಎಸ್‌ಐಆರ್‌ ಮೂಲಕ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಭಾರತದಲ್ಲಿ ಇಡೀ ಚುನಾವಣೆಯನ್ನೇ ಕದಿಯಲಾಗುತ್ತಿದೆ. ಇದು ಭಾರತದ ವಾಸ್ತವ,” ಎಂದು ಆರೋಪಿಸಿದರು. ಎಸ್‌ಐಆರ್‌ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಹೋರಾಟ ನಡೆಸುವುದಾಗಿಯೂ ಅವರು ತಿಳಿಸಿದರು.

ಚುನಾವಣಾ ಆಯೋಗದಿಂದ ಉತ್ತರವಿಲ್ಲ

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಮತ್ತು ಮತದಾನದ ದಿನದ ವಿಡಿಯೊ ಚಿತ್ರೀಕರಣದ ದಾಖಲೆಗಳನ್ನು ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಆದರೆ, ಆಯೋಗವು ಈ ಮನವಿಗೆ ಸ್ಪಂದಿಸದೆ, ಮಾಹಿತಿ ನೀಡಲು ನಿರಾಕರಿಸಿತು ಮತ್ತು ಸಂಬಂಧಿತ ನಿಯಮಗಳನ್ನೇ ಬದಲಾಯಿಸಿತು ಎಂದು ರಾಹುಲ್‌ ಗಾಂಧಿ ದೂರಿದರು.

ಮಹಾರಾಷ್ಟ್ರದಲ್ಲಿ ಸುಮಾರು ಒಂದು ಕೋಟಿ ಹೊಸ ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಬಿಹಾರದಲ್ಲಿ ಮನೆ ಭೇಟಿಯ ಸಂದರ್ಭದಲ್ಲಿ 52 ಲಕ್ಷ ಮತದಾರರು ವಿಳಾಸದಲ್ಲಿ ಲಭ್ಯವಿಲ್ಲದಿರುವುದು ಮತ್ತು 18 ಲಕ್ಷ ಮತದಾರರು ಮೃತಪಟ್ಟಿರುವುದು ಪರಿಷ್ಕರಣೆ ವೇಳೆ ಗೊತ್ತಾಗಿದೆ. “ಈ ಸಮಸ್ಯೆ ಬಿಹಾರಕ್ಕೆ ಮಾತ್ರ ಸೀಮಿತವಲ್ಲ. ಮಹಾರಾಷ್ಟ್ರದಲ್ಲೂ ಇದೇ ರೀತಿಯ ಅಕ್ರಮಗಳು ನಡೆದಿವೆ. ಇದು ದೇಶದಲ್ಲಿ ‘ಮತ ಕಳ್ಳತನ’ ಹೇಗೆ ನಡೆಯುತ್ತಿದೆ ಎಂಬುದನ್ನು ತೋರಿಸುತ್ತದೆ,” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...