‘ಮಾತಾಜಿ ಮಾತನಾಡುವುದರಲ್ಲಿ ನಿಪುಣರು’: ನಿರ್ಮಲಾ ಸೀತಾರಾಮನ್ ಕಾಲೆಳೆದ ಖರ್ಗೆ

Date:

ಬಜೆಟ್‌ನಲ್ಲಿ ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ಮಾತ್ರ ಹೆಚ್ಚು ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯವೆಸಗಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಬಜೆಟ್‌ ಬಗ್ಗೆ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ಇದು ಕುರ್ಚಿ ಉಳಿಸಿಕೊಳ್ಳುವ ಬಜೆಟ್‌ ಆಗಿದೆ. ಮೋದಿ ಸರ್ಕಾರದ ಬಜೆಟ್‌ನಲ್ಲಿ ಯಾವ ರಾಜ್ಯವು ಏನನ್ನು ಪಡೆದುಕೊಂಡಿಲ್ಲ. ಬಿಜೆಪಿಯನ್ನು ನಿರಾಕರಿಸಿದ ರಾಜ್ಯಗಳು ಈ ಬಜೆಟ್‌ನಲ್ಲಿ ಏನನ್ನು ಪಡೆದುಕೊಂಡಿಲ್ಲ. ಎಲ್ಲರ ತಟ್ಟೆ ಖಾಲಿಯಿದೆ. ಕೇವಲ ಎರಡು ರಾಜ್ಯಗಳ ತಟ್ಟೆಗಳಲ್ಲಿ ಮಾತ್ರ ಪಕೋಡ ಮತ್ತು ಜಿಲೇಬಿ ನೀಡಲಾಗಿದೆ” ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಈ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್‌ ಅವರಿಗೆ ಪ್ರತಿಕ್ರಿಯೆ ನೀಡಲು ಅನುಮತಿಸಬೇಕೆಂದು ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಕರ್ ಅವರು ಖರ್ಗೆ ಅವರಿಗೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಈ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಮಲ್ಲಿಕಾರ್ಜುನ ಖರ್ಗೆ, “ನಾನು ಮಾತನಾಡಿ ಮುಗಿಸುವುದಕ್ಕೆ ಬಿಡಿ. ಮಾತಾಜಿ ಅವರು ಮಾತನಾಡುವುದರಲ್ಲಿ ನಿಪುಣರು. ನನಗೆ ಈ ಬಗ್ಗೆ ತಿಳಿದಿದೆ” ಎಂದು ನಿರ್ಮಲಾ ಸೀತಾರಾಮನ್‌ ಅವರ ಕಾಲೆಳೆದರು.

ತಮಿಳುನಾಡಿಗಾಗಲೀ, ಕೇರಳವಾಗಲೀ, ಕರ್ನಾಟಕಕ್ಕಾಗಲೀ, ಮಹಾರಾಷ್ಟ್ರಕ್ಕಾಗಲೀ, ಪಂಜಾಬಾಗಲೀ, ಹರಿಯಾಣಕ್ಕಾಗಲಿ ಏನೂ ಸಿಕ್ಕಿಲ್ಲ. ದೆಹಲಿ ಮತ್ತು ಒಡಿಶಾಕ್ಕೂ ಏನನ್ನೂ ನೀಡಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಮೈತ್ರಿಕೂಟದ ಎಲ್ಲ ಪಕ್ಷಗಳು ಈ ಬಜೆಟ್ ಅನ್ನು ಖಂಡಿಸಿ ಪ್ರತಿಭಟಿಸಲಿವೆ ಎಂದು ಖರ್ಗೆ ಕೇಂದ್ರದ ತಾರತಮ್ಯ ನೀತಿಯ ಬಗ್ಗೆ ಖಂಡಿಸಿದರು.

ಮೋದಿ ಸರ್ಕಾರ ಇದೇ ರೀತಿ ತಾರತಮ್ಯವೆಸಗಿದರೆ ಏನನ್ನು ಸಾಧಿಸಲಾಗುವುದಿಲ್ಲ. ಇದು ಅಭಿವೃದ್ಧಿ ಹೇಗಾಗುತ್ತದೆ? ಇಂದು ನಿಮ್ಮ ಜೊತೆ ಇರುವವರು ನಾಳೆ ಬೇರೆಯವರ ಜೊತೆ ಇರುತ್ತಾರೆ ಎಂದು ಕೇಂದ್ರ ಸರ್ಕಾರಕ್ಕೆ ಖರ್ಗೆ ಎಚ್ಚರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...