ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

Date:

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಆಮ್ ಜನತಾ ಉನ್ನಯನ್ ಪಾರ್ಟಿ (AJUP) ಸಂಸ್ಥಾಪಕ ಹಾಗೂ ಶಾಸಕ ಹುಮಾಯೂನ್ ಕಬೀರ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿರುದ್ಧ ಹೇಳಿಕೆ ನೀಡುವ ಮೂಲಕ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

- Advertisement -

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹುಮಾಯೂನ್ ಕಬೀರ್, “ಸುವೇಂದು ಅಧಿಕಾರಿ ಶೀಘ್ರದಲ್ಲೇ ಈ ಲೋಕದಿಂದ ನಿರ್ಗಮಿಸುವಂತೆ ಹಾಗೂ ಅಲ್ಲಾಹ್ ಅವರಿಗೆ ‘ಮೇಲಕ್ಕೆ ಹೋಗುವ ಟಿಕೆಟ್’ ಶೀಘ್ರದಲ್ಲೇ ಖಚಿತಪಡಿಸುವಂತೆ ನಾನು ಶುಕ್ರವಾರದ ಪ್ರಾರ್ಥನೆಯಲ್ಲಿ (ನಮಾಜ್) ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: 75ರ ಮೋದಿಗೆ ಜೈಕಾರ, 71ರ ದೀದಿಗೆ ನಿವೃತ್ತಿಯ ಪಾಠ: ಸುವೇಂದು ಅಧಿಕಾರಿಯ ದ್ವಂದ್ವ ನೀತಿ ಬಯಲು

ಪೊಲೀಸರು ಮತ್ತು ಆಡಳಿತ ಯಂತ್ರವು ತಮ್ಮ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ ಕಬೀರ್, ಅಹಂಕಾರ ಹೆಚ್ಚಾದಾಗ ನಾಯಕರ ಪತನ ಹೇಗಿರುತ್ತದೆ ಎಂಬುದಕ್ಕೆ ರಾಜಕೀಯ ಇತಿಹಾಸದ ಉದಾಹರಣೆಗಳನ್ನು ನೀಡಿದರು. “ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮಾಧವರಾವ್ ಸಿಂಧಿಯಾ ಹಾಗೂ ಅಜಿತ್ ಪವಾರ್ ಅವರಿಗೆ ಏನಾಯಿತು ಎಂಬುದನ್ನು ನೆನಪಿಸಿಕೊಳ್ಳಿ. ಅಧಿಕಾರದ ಗರ್ವ ಎಂದಿಗೂ ಶಾಶ್ವತವಲ್ಲ, ದೇವರೆಲ್ಲವನ್ನೂ ನೋಡಿಕೊಳ್ಳುತ್ತಿದ್ದಾನೆ” ಎಂದು ಸುವೇಂದು ಅಧಿಕಾರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಖಂಡನೆಗೆ ಗುರಿಯಾದ ಬೆನ್ನಲ್ಲೇ, ಕಬೀರ್ ತಮ್ಮ ಹೇಳಿಕೆಯನ್ನು ಬದಲಾಯಿಸಲು ಯತ್ನಿಸಿದರು. “ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ಪೊಲೀಸರ ಸರ್ವಾಧಿಕಾರಿ ವರ್ತನೆಯಿಂದಾಗಿ ಆ ರೀತಿ ಹೇಳಿದ್ದೆ” ಎಂದು ಸಮಜಾಯಿಷಿ ನೀಡಿದ ಅವರು, “ನಾನು ಸುವೇಂದು ಅವರಿಗೆ ದೀರ್ಘಾಯುಷ್ಯ ಬಯಸುತ್ತೇನೆ ಮತ್ತು ಅವರು ದೇಶದ ಪ್ರಧಾನಿಯಾಗಲಿ ಎಂದು ಹಾರೈಸುತ್ತೇನೆ” ಎಂದು ಹೇಳಿಕೆ ತಿರುಗಿಸಿದರು.

ಬಿಜೆಪಿ ಮುಖಂಡರು ಮತ್ತು ಸಚಿವರು ಹುಮಾಯೂನ್ ಕಬೀರ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ರಾಜಕೀಯ ಸೌಜನ್ಯದ ಅಧಃಪತನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೇಜಿನಗರ ಉಪಚುನಾವಣೆಯ ಪ್ರಚಾರದ ಕಾವು ಏರಿರುವ ಈ ವೇಳೆಯಲ್ಲಿ ಈ ವಿವಾದ ರಾಜಕೀಯ ರಂಗದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ಬೀದರ್‌ | ಸೆ.29ರಂದು ನೀರು, ಬರ, ಪರಿಸರ ಕುರಿತು ವಿಚಾರ ಸಂಕಿರಣ

ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ, ಸಿದ್ದಾರ್ಥ ಪದವಿ ಪೂರ್ವ ಕಾಲೇಜು, ಟೀಮ್...