ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಆಕಾಶ್ ಆನಂದ್‌ನನ್ನು ಪಕ್ಷದಿಂದಲೇ ಹೊರಹಾಕಿದ ಮಾಯಾವತಿ

Date:

ಬಹುಜನ ಸಮಾಜವಾದಿ ಪಾರ್ಟಿ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಅವರು ತಮ್ಮ ಸೋದರಸೊಸೆ ಹಾಗೂ ಮಾಜಿ ರಾಷ್ಟ್ರೀಯ ಸಂಚಾಲಕ ಆಕಾಶ್ ಆನಂದ್ ಅವರನ್ನು ಪಕ್ಷದ ಜವಾಬ್ದಾರಿಗಳಿಂದ ಮಾತ್ರವಲ್ಲದೆ, ಬಿಎಸ್‍ಪಿಯಿಂದಲೇ “ಸಂಪೂರ್ಣವಾಗಿ ಮುಕ್ತಗೊಳಿಸಲಾಗಿದೆ” ಎಂದು ಗುರುವಾರ ಪ್ರಕಟಿಸಿದ್ದಾರೆ. ಆಕಾಶ್ ಆನಂದ್ ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರು ರಾಜಕೀಯದಿಂದ ನಿವೃತ್ತಿ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಮಾಯಾವತಿ ಈ ಅಚ್ಚರಿಯ ನಿರ್ಧಾರ ಕೈಗೊಂಡಿದ್ದಾರೆ.

- Advertisement -

ಬುಧವಾರವಷ್ಟೇ ಹೇಳಿಕೆ ನೀಡಿದ್ದ ಮಾಯಾವತಿ, “ಅಶೋಕ್ ಸಿದ್ಧಾರ್ಥ್ ಸ್ವಾರ್ಥ ಬದಿಗಿಟ್ಟು ರಾಜಕೀಯದಿಂದ ಸಂಪೂರ್ಣವಾಗಿ ನಿವೃತ್ತರಾದರೆ ಮಾತ್ರ ಆಕಾಶ್ ಆನಂದ್‌ಗೆ ಬಿಎಸ್‍ಪಿಯಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯ ಮತ್ತು ಅವರ ಜವಾಬ್ದಾರಿಗಳನ್ನು ಮರಳಿ ನೀಡುವ ಬಗ್ಗೆ ಪರಿಶೀಲಿಸಲಾಗುವುದು” ಎಂದಿದ್ದರು. ಈ ಶರತ್ತಿಗೆ ಓಗೊಟ್ಟು ಅಶೋಕ್ ಸಿದ್ಧಾರ್ಥ್ ಗುರುವಾರ ಬೆಳಿಗ್ಗೆ ರಾಜಕೀಯದಿಂದ ನಿವೃತ್ತಿ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಯುಪಿ ಚುನಾವಣೆಗೆ ಮುನ್ನ ಬಿಎಸ್‌ಪಿ ಚುರುಕು: ಬೃಹತ್ ರ‍್ಯಾಲಿಗೆ ಮಾಯಾವತಿ ಸಜ್ಜು

ಆದಾಗ್ಯೂ, ತಮ್ಮ ಎಕ್ಸ್ (X) ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಮಾಯಾವತಿ, ಆಕಾಶ್ ಆನಂದ್ ಅವರ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾನು ಬುಧವಾರ ನೀಡಿದ್ದ ಪ್ರಕಟಣೆಯನ್ನು ಆಕಾಶ್ ಆನಂದ್ ತಮ್ಮ ಖಾತೆಯಲ್ಲಿ ರೀಪೋಸ್ಟ್ ಮಾಡಲಿಲ್ಲ. ಅವರು ಪಕ್ಷ ಮತ್ತು ಬಹುಜನ ಚಳವಳಿಗಿಂತ ತಮ್ಮ ಮಾವ ಹಾಗೂ ಕುಟುಂಬದ ಹಿತಾಸಕ್ತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ” ಎಂದು ಮಾಯಾವತಿ ಆರೋಪಿಸಿದ್ದಾರೆ.

“ಪಕ್ಷದ ಏಳಿಗೆಗಿಂತ ಕುಟುಂಬದ ಬಾಂಧವ್ಯಕ್ಕೇ ಹೆಚ್ಚು ಅಂಟಿಕೊಂಡಿರುವಾಗ, ಇಂತಹ ದ್ವಂದ್ವ ಮನಸ್ಥಿತಿಯಿಂದ ಅವರು ಪಕ್ಷಕ್ಕೆ ಹೇಗೆ ಒಳಿತು ಮಾಡಲು ಸಾಧ್ಯ? ಆದ್ದರಿಂದ ಸೆಪ್ಟೆಂಬರ್ 3 ರಂದು ಅವರನ್ನು ಹುದ್ದೆಯಿಂದ ಮುಕ್ತಗೊಳಿಸಿದಂತೆಯೇ, ಇಂದಿನಿಂದ ಅವರನ್ನು ಬಿಎಸ್‍ಪಿ ಪಕ್ಷದಿಂದಲೇ ಸಂಪೂರ್ಣವಾಗಿ ಮುಕ್ತಿಗೊಳಿಸಲಾಗುತ್ತಿದೆ” ಎಂದು ಮಾಯಾವತಿ ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್ ವಿಧಾನಸಭೆ ಚುನಾವಣೆಗಳು ಸಮೀಪಿಸುತ್ತಿರುವ ಈ ಹಂತದಲ್ಲಿ, ಪಕ್ಷದಲ್ಲಿ ಶಿಸ್ತು ಕಾಪಾಡಲು ಈ ನಿರ್ಧಾರ ಅಗತ್ಯವಾಗಿತ್ತು ಎಂದು ಮಾಯಾವತಿ ಪ್ರತಿಪಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...