ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನೀಡಿ: ಮಾಯಾವತಿ

Date:

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಆಗ್ರಹಿಸಿದ್ದಾರೆ.

- Advertisement -

ಉತ್ತರ ಪ್ರದೇಶ ಲಕ್ನೋದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮಾಯಾವತಿ, “ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡುವ ಕ್ರಮವನ್ನು ತಮ್ಮ ಪಕ್ಷ ಸ್ವಾಗತಿಸುತ್ತದೆ. ಆದರೆ ಹಿಂದುಳಿದ ಸಮುದಾಯಗಳಿಗೆ ಮೀಸಲಾದ ಉಪ-ಕೋಟಾ ಇಲ್ಲದಿರುವುದು ಉದ್ದೇಶವನ್ನೇ ವಿಫಲಗೊಳಿಸುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಮೀಸಲಾತಿ ಮರೆಯಲ್ಲಿ ಮೋದಿ ಸರ್ಕಾರದ ಮಸಲತ್ತು!

“ನಮ್ಮ ಪಕ್ಷ ಶೇಕಡ 50ರಷ್ಟು ಮಹಿಳಾ ಮೀಸಲಾತಿಗೆ ಈ ಹಿಂದೆಯೇ ಆಗ್ರಹಿಸಿದೆ. ಆದರೆ ಶೇ.33ಕ್ಕೂ ಸ್ವಾಗತ. ಕೇಂದ್ರವು ಈ ವಿಷಯದ ಕುರಿತು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದೆ. ಆದರೆ ನಿರ್ದಿಷ್ಟ ಕೋಟಾಗಳು ಇಲ್ಲದೆ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳ ಮಹಿಳೆಯರು ಉದ್ದೇಶಿತ ಪ್ರಯೋಜನಗಳನ್ನು ಪಡೆಯುತ್ತಾರೆಯೇ” ಎಂದು ಮಾಯಾವತಿ ಕಳವಳ ವ್ಯಕ್ತಪಡಿಸಿದರು.

“ಮಹಿಳಾ ಮೀಸಲಾತಿ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸದೆ, ಮಹಿಳೆಯರ ಘನತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಶೀಘ್ರವಾಗಿ ಜಾರಿಗೆ ತರಬೇಕು” ಎಂದು ಕರೆ ಇತರೆ ರಾಜಕೀಯ ಪಕ್ಷಗಳಿಗೆ ಕರೆ ನೀಡಿದರು.

2023ರಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮ (ಮಹಿಳಾ ಮೀಸಲಾತಿ ಕಾಯಿದೆ, 2023) ಅನ್ನು ಅಂಗೀಕರಿಸಲಾಗಿದೆ. ಆದರೆ ಈವರೆಗೂ ಜಾರಿಗೆ ಬಂದಿಲ್ಲ. ಜಾರಿಗೆ ವಿಪಕ್ಷಗಳು ಒತ್ತಾಯಿಸಿದಾಗ ಈ ಕಾಯಿದೆಯು ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯ ನಂತರ ಜಾರಿಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿತ್ತು.

ಇದೀಗ ಚುನಾವಣೆಯ ನಡುವೆ ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಏಪ್ರಿಲ್ 16-18ರವರೆಗೆ ವಿಶೇಷ ಅಧಿವೇಶನ ಕರೆದಿರುವುದು ಸದ್ಯ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಚುನಾವಣೆ ಲಾಭ ಪಡೆಯಲೆಂದೇ ಕೇಂದ್ರ ಸರ್ಕಾರ ಜನಗಣತಿ ಮತ್ತು ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆ ಪೂರ್ಣವಾಗದೆಯೇ ವಿಶೇಷ ಅಧಿವೇಶನ ನಡೆಸುತ್ತಿರುವುದನ್ನು ವಿಪಕ್ಷಗಳು ಪ್ರಶ್ನಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...