ಯುಪಿಐ ಪಾವತಿ ಮೇಲೆ MDR ಶುಲ್ಕ: ಕೇಂದ್ರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ, ಸೆ. 28ರಂದು ವಿಚಾರಣೆ

Date:

₹2,000 ಕ್ಕಿಂತ ಹೆಚ್ಚಿನ ಮೌಲ್ಯದ ಯುಪಿಐ ಮರ್ಚೆಂಟ್ ಪಾವತಿಗಳ ಮೇಲೆ ‘ಮರ್ಚೆಂಟ್ ಡಿಸ್ಕೌಂಟ್ ರೇಟ್’ (ಎಂಡಿಆರ್) ಶುಲ್ಕ ವಿಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 28 ರಂದು (ಸೋಮವಾರ) ನಡೆಸಲಿದೆ.

- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ. ವಕೀಲ ಅಂಜನ್ ದತ್ತಾ ಎಂಬುವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಅನ್ನು ಪ್ರತಿವಾದಿಗಳನ್ನಾಗಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: ಉಚಿತವಾಗಿರಲಿ ಯುಪಿಐ; ಶುಲ್ಕ ಪ್ರಸ್ತಾಪ ಅಪಾಯಕಾರಿ: ಸಣ್ಣ ವ್ಯಾಪಾರಿಗಳಿಗೆ ಪೆಟ್ಟು ನೀಡದಿರಿ

ಯಾವುದೇ ಸೂಕ್ತ ಕಾನೂನು ರಕ್ಷಣೆ, ಪಾರದರ್ಶಕತೆ ಅಥವಾ ಸಾರ್ವಜನಿಕ ಸಮಾಲೋಚನೆ ಇಲ್ಲದೆ ಈ ಶುಲ್ಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ನಿಯಮದಿಂದಾಗಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳ ಮೇಲೆ ಆರ್ಥಿಕ ಹೊರೆ ಬೀಳಲಿದೆ. ಇದು ಪರೋಕ್ಷವಾಗಿ ಗ್ರಾಹಕರ ಮೇಲೆಯೂ ಪರಿಣಾಮ ಬೀರಬಹುದು ಎಂದು ಕಳವಳ ವ್ಯಕ್ತಪಡಿಸಲಾಗಿದೆ.

ಹಾಗೆಯೇ RuPay ಡೆಬಿಟ್ ಕಾರ್ಡ್ ಪಾವತಿಗಳಿಗೆ ಯಾವುದೇ ಪರಿಮಿತಿ ಇಲ್ಲದೆ ಉಚಿತ ಸೇವೆ ಮುಂದುವರಿಸಲಾಗಿದ್ದು, ಯುಪಿಐಗೆ ಮಾತ್ರ ನಿಯಮ ರೂಪಿಸಿರುವುದು ತಾರತಮ್ಯದಿಂದ ಕೂಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಸುಮಾರು ಆರು ವರ್ಷಗಳ ಉಚಿತ ಯುಪಿಐ ಸೇವೆಯ ನಂತರ, ಕೇಂದ್ರ ಸರ್ಕಾರವು ಅಕ್ಟೋಬರ್ 15 ರಿಂದ ಜಾರಿಗೆ ಬರುವಂತೆ ₹2,000 ಕ್ಕಿಂತ ಹೆಚ್ಚಿನ ಮರ್ಚೆಂಟ್ (P2M) ಪಾವತಿಗಳ ಮೇಲೆ 0.4% MDR ಶುಲ್ಕವನ್ನು ಘೋಷಿಸಿತ್ತು. ವ್ಯಕ್ತಿಯಿಂದ ವ್ಯಕ್ತಿಗೆ (P2P) ನಡೆಯುವ ದಿನನಿತ್ಯದ ವರ್ಗಾವಣೆಗಳಿಗೆ ಮತ್ತು ₹2,000 ಕ್ಕಿಂತ ಕಡಿಮೆ ಮೊತ್ತದ ಪಾವತಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಅಗತ್ಯ ಸೇವೆಗಳಾದ ರೈಲ್ವೆ, ಪೆಟ್ರೋಲ್, ಟೆಲಿಕಾಂ ಮುಂತಾದ ಕ್ಷೇತ್ರಗಳಲ್ಲಿ ₹2,000 ಕ್ಕಿಂತ ಹೆಚ್ಚಿನ ಪಾವತಿಗೆ ಫ್ಲಾಟ್ ₹5 ಶುಲ್ಕ ನಿಗದಿಪಡಿಸಲಾಗಿದೆ.

ಕೇಂದ್ರ ಸರ್ಕಾರದ ಈ ಹೊಸ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಹಾಗೂ ವ್ಯಾಪಾರಿಗಳಲ್ಲಿ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ನಾಳೆ ನೀಡಲಿರುವ ಆದೇಶ ತೀವ್ರ ಕುತೂಹಲ ಮೂಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...