ಹಿಂದೂಗಳು, ಜೈನರು ಆಚರಿಸುವ ಹಬ್ಬಗಳ ದಿನ ಮಾಂಸ ಮಾರಾಟ ನಿಷೇಧಿಸಿದ ಇಂದೋರ್ ಆಡಳಿತ!

Date:

ಹಿಂದೂಗಳು ಮತ್ತು ಜೈನರು ಆಚರಿಸುವ ಕೆಲವು ಹಬ್ಬಗಳ ದಿನಗಳಲ್ಲಿ ಮಾಂಸ ಮಾರಾಟವನ್ನು ಮಧ್ಯಪ್ರದೇಶದ ಇಂದೋರ್‌ನ ಆಡಳಿತವು ಸಂಪೂರ್ಣವಾಗಿ ನಿಷೇಧಿಸಿದೆ. ಈ ಬಗ್ಗೆ ಮಂಗಳವಾರ ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

- Advertisement -

ಗಣೇಶ ಚತುರ್ಥಿ (ಆಗಸ್ಟ್ 27), ಡೋಲ್ ಗ್ಯಾರಸ್(ಸೆಪ್ಟೆಂಬರ್ 3), ಹಿಂದೂಗಳು ಆಚರಿಸುವ ಅನಂತ ಚತುರ್ದಶಿ (ಸೆಪ್ಟೆಂಬರ್ 6) ಮತ್ತು ಜೈನರ ಪರ್ಯೂಷಣ್ ಹಬ್ಬದಂದು ಇಂದೋರ್‌ನಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಮೇಯರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಒಂದೇ ದಿನ 11 ಲಕ್ಷ ಸಸಿ ನೆಟ್ಟ ಭಾರತದ ಸ್ವಚ್ಛ ನಗರ ಇಂದೋರ್; ವಿಶ್ವ ದಾಖಲೆ

“ಈ ನಿಷೇಧವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾನು ಪುರಸಭೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಿಷೇಧವನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದೂ ಹೇಳಿದ್ದಾರೆ.

ಹಿಂದೂ ಮತ್ತು ಜೈನ ಸಮುದಾಯಗಳ ಅನೇಕ ಜನರು ತಮ್ಮ ಧಾರ್ಮಿಕ ಭಾವನೆಗಳನ್ನು ಕಾಪಾಡಲು ಹಬ್ಬದ ಅವಧಿಯಲ್ಲಿ ಮಾಂಸ ಮಾರಾಟವನ್ನು ನಿಷೇಧಿಸುವಂತೆ ಕೋರಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಎಲ್ಲಾ ಜನರ ಮೇಲೆ ಆಹಾರ ಹೇರಿಕೆ ಮಾಡುವುದರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಎರಡು ಧರ್ಮಗಳ ಆಚರಣೆಯನ್ನು ಎಲ್ಲಾ ಧರ್ಮಗಳ ಮೇಲೆ ಸರ್ಕಾರ ಹೇರುವುದು ಎಷ್ಟು ಸರಿ ಎಂದು ಪ್ರಶ್ನಿಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...