BREAKING NEWS | 24 ವರ್ಷ ಹಳೆಯ ಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಬಂಧನ

Date:

ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರನ್ನು ಬಂಧಿಸಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ.

- Advertisement -

2010ರಲ್ಲಿ ದಾಖಲಾದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಧಾ ಪಾಟ್ಕರ್ ವಿರುದ್ಧ ಬುಧವಾರ ದೆಹಲಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಅನ್ನು ಹೊರಡಿಸಿದೆ. ಶುಕ್ರವಾರ ದೆಹಲಿ ಪೊಲೀಸರು ಬಂಧಿಸಿದ್ದು, ಬಳಿಕ ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? 24 ವರ್ಷ ಹಳೆಯ ಮಾನನಷ್ಟ ಪ್ರಕರಣ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

ಈ ಪ್ರಕರಣದಲ್ಲಿ ಮೇಧಾ ಅವರನ್ನು ದೋಷಿ ಎಂದು ದೆಹಲಿ ನ್ಯಾಯಾಲಯ ಕಳೆದ ವರ್ಷ ಮೇ ತಿಂಗಳಲ್ಲಿ ಹೇಳಿದೆ. ಅದಾದ ಬಳಿಕ ಶಿಕ್ಷೆ ಘೋಷಿಸಿದ ನ್ಯಾಯಾಲಯ, 5 ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿದೆ ಹಾಗೂ 10 ಲಕ್ಷ ರೂ ಮೊತ್ತವನ್ನು ಪಾವತಿಸುವಂತೆ ತಿಳಿಸಿದೆ.

ಬಳಿಕ ಮೇಧಾ ಅವರಿಗೆ ವಿಧಿಸಿದ್ದ ಶಿಕ್ಷೆ ಮಾರ್ಪಾಡುಗೊಳಿಸಿದ್ದು ಜೈಲು ಶಿಕ್ಷೆಯನ್ನು ತೆರವುಗೊಳಿಸಲಾಗಿದೆ. ಹಾಗೆಯೇ ದಂಡದ ಮೊತ್ತವನ್ನೂ ಕಡಿಮೆಗೊಳಿಸಲಾಗಿದೆ. ಈ ಆದೇಶವನ್ನು ಏಪ್ರಿಲ್ 8ರಂದು ನ್ಯಾಯಾಲಯ ಹೊರಡಿಸಿದೆ.

ಇದನ್ನು ಓದಿದ್ದೀರಾ? ಮಾನನಷ್ಟ ಮೊಕದ್ದಮೆ | ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ಗೆ 5 ತಿಂಗಳ ಜೈಲು ಶಿಕ್ಷೆ

ಆದರೆ ದಂಡದ ಮೊತ್ತವನ್ನು ಪಾವತಿಸದೆ ಮೇಧಾ ಅವರು ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುತ್ತಿದ್ದಾರೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಶಾಲ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದರು. ಮೇಧಾ ಪಾಟ್ಕರ್ ಮಾರ್ಪಾಡುಗೊಂಡ ತೀರ್ಪು ಪ್ರಕಾರ ಒಂದು ಲಕ್ಷ ರೂಪಾಯಿಯನ್ನು ದಂಡವಾಗಿ ಪಾವತಿಸಬೇಕಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...