ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿಯ ವಿರೂಪಗೊಂಡ ಮೃತದೇಹ ಪತ್ತೆ

Date:

ವೈದ್ಯಕೀಯ ಕಾಲೇಜು ಆಸ್ಪತ್ರೆ ಆವರಣದಲ್ಲಿರುವ ಹಾಸ್ಟೆಲ್ ಕೊಠಡಿಯಲ್ಲಿ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯ ವಿರೂಪಗೊಂಡ ಮೃತದೇಹ ಪತ್ತೆಯಾಗಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಕಲ್ಯಾಣಿಯಲ್ಲಿರುವ ಜೆಎನ್‌ಎಂ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿ ಪುಲಕ್ ಹಾಲ್ಡರ್ ಅವರ ಮೃತದೇಹವು ಹಾಸ್ಟೆಲ್‌ನಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮೂಲಗಳ ಪ್ರಕಾರ, ಸೋಮವಾರದಿಂದಲೂ ಆತ ಕಾಲೇಜು ಮತ್ತು ಕ್ಯಾಂಟೀನ್‌ನಲ್ಲಿ ಕಾಣಿಸಿಕೊಂಡಿರಲಿಲ್ಲ ಎಂದು ಹೇಳಲಾಗಿದೆ.

ಗುರುವಾರ, ಆತನ ಕೊಠಡಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಇತರ ವಿದ್ಯಾರ್ಥಿಗಳು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಬಂದು, ಬಾಗಿಲನ್ನು ಹೊಡೆದು, ವಿದ್ಯಾರ್ಥಿಯ ಮೃತದೇಹವನ್ನು ಹೊರತೆಗೆದಿದ್ದಾರೆ.

ಪುಲಕ್ ತನ್ನ ಕೊಠಡಿಯಲ್ಲಿ ಒಬ್ಬಂಟಿಯಾಗಿಯೇ ಇರುತ್ತಿದ್ದರು. ಮಾರ್ಚ್ 5ರಿಂದ ಆರಂಭವಾಗಲಿರುವ ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದರು ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಪೊಲೀಸ್ ಶವಾಗಾರಕ್ಕೆ ಕಳುಹಿಸಲಾಗಿದೆ. ಅಸ್ವಾಭಾವಿಕ ಸಾವು ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದೇ, ಫೆಬ್ರವರಿ 15 ರಂದು ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹಾಸ್ಟೆಲ್‌ನ ಸ್ನಾನಗೃಹದ ಸೀಲಿಂಗ್‌ಗೆ ವೈದ್ಯಕೀಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...