ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

Date:

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು ನೀಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಸಿಮೆಂಟ್ ಹಾಕಿ ಮುಚ್ಚಿಟ್ಟಿದ್ದ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಸ್ತೋಗಿ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾಗೆ ಉತ್ತರ ಪ್ರದೇಶದ ಮೀರತ್‌ನ ಸ್ಥಳೀಯ ನ್ಯಾಯಾಲಯವು ಬುಧವಾರ ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ತೀರ್ಪು ನೀಡಿದೆ. ಎರಡು ವಾರಗಳ ಹಿಂದೆಯೇ ಇಬ್ಬರನ್ನೂ ದೋಷಿಗಳೆಂದು ಘೋಷಿಸಿದ್ದ ನ್ಯಾಯಾಲಯ, ಬುಧವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ. ಈ ಇಡೀ ಪ್ರಕರಣದಲ್ಲಿ ಕಾಂಕ್ರೀಟ್ ತುಂಬಿದ್ದ ನೀಲಿ ಡ್ರಮ್ ಅತ್ಯಂತ ಪ್ರಮುಖ ಸಾಕ್ಷ್ಯವಾಗಿ ಪರಿಣಮಿಸಿತ್ತು.

- Advertisement -

​ಒಟ್ಟು 126 ವಿಚಾರಣೆಗಳು ಹಾಗೂ 22 ಸಾಕ್ಷಿಗಳ ಹೇಳಿಕೆಗಳನ್ನು ಪರಿಶೀಲಿಸಿದ ಜಿಲ್ಲಾ ನ್ಯಾಯಾಧೀಶ ಅರವಿಂದ್ ಕುಮಾರ್ ಮಿಶ್ರಾ ಅವರು, ಮುಸ್ಕಾನ್ ಮತ್ತು ಸಾಹಿಲ್ ಸಂಚು ರೂಪಿಸಿ ಸೌರಭ್ ರಜಪೂತ್ ಅವರನ್ನು ಕೊಲೆ ಮಾಡಿದ್ದಾರೆ ಹಾಗೂ ಮೃತದೇಹವನ್ನು ತುಂಡರಿಸಿ ಡ್ರಮ್‌ನೊಳಗೆ ಮರಳು ಮತ್ತು ಸಿಮೆಂಟ್ ಬಳಸಿ ಬಚ್ಚಿಟ್ಟಿದ್ದಾರೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ. ಇಂತಹ ಘೋರ ಅಪರಾಧಗಳು ಇಡೀ ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುತ್ತವೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ. ವಿಶೇಷವೆಂದರೆ, ಮುಸ್ಕಾನ್ ಪೋಷಕರು ನ್ಯಾಯಾಲಯದಲ್ಲಿ ಹೇಳಿಕೆ ನೀಡಿ, “ಸೌರಭ್ ರಜಪೂತ್ ತುಂಬಾ ಒಳ್ಳೆಯ ವ್ಯಕ್ತಿಯಾಗಿದ್ದರು. ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿದರೆ ನಾವು ಅದನ್ನು ವಿರೋಧಿಸುವುದಿಲ್ಲ” ಎಂದು ತಿಳಿಸಿದ್ದರು. ಅಲ್ಲದೆ, ಮುಸ್ಕಾನ್ ಜೈಲು ಸೇರಿದಾಗಿನಿಂದ ಆಕೆಯ ಕುಟುಂಬಸ್ಥರು ಒಮ್ಮೆಯೂ ಆಕೆಯನ್ನು ಭೇಟಿಯಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

​ಪೊಲೀಸ್ ತನಿಖಾ ವರದಿಯ ಪ್ರಕಾರ, 2025ರ ಮಾರ್ಚ್ 3ರಂದು ಮೀರತ್‌ನ ಇಂದ್ರಾ ನಗರದ ನಿವಾಸದಲ್ಲಿ ಮುಸ್ಕಾನ್ ರಸ್ತೋಗಿ ತನ್ನ ಪತಿ ಸೌರಭ್ ರಜಪೂತ್ ಅವರ ಆಹಾರದಲ್ಲಿ ನಿದ್ರೆ ಬರುವ ಔಷಧ ಬೆರೆಸಿ ಪ್ರಜ್ಞೆ ತಪ್ಪಿಸಿದ್ದಳು. ಇದಾದ ಸ್ವಲ್ಪ ಸಮಯದಲ್ಲೇ ಅಲ್ಲಿಗೆ ಬಂದ ಪ್ರಿಯಕರ ಸಾಹಿಲ್ ಶುಕ್ಲಾ ಮತ್ತು ಮುಸ್ಕಾನ್ ಸೇರಿಕೊಂಡು ಸೌರಭ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಬಳಿಕ ಸ್ನಾನಗೃಹದಲ್ಲಿ ಮೃತದೇಹವನ್ನು ತುಂಡರಿಸಿದ್ದರು. ಶವ ಕೊಳೆತು ವಾಸನೆ ಬರುವುದನ್ನು ತಡೆಯಲು, ದೇಹದ ತುಂಡುಗಳನ್ನು ದೊಡ್ಡ ನೀಲಿ ಪ್ಲಾಸ್ಟಿಕ್ ಡ್ರಮ್‌ಗೆ ತುಂಬಿ, ಅದಕ್ಕೆ ಮರಳು, ನೀರು ಮತ್ತು ಸಿಮೆಂಟ್ ಮಿಶ್ರಣವನ್ನು ಸುರಿದು ಸೀಲ್ ಮಾಡಿದ್ದರು.

​ಕೊಲೆ ಮಾಡಿದ ಮರುದಿನವೇ ಆರೋಪಿಗಳಿಬ್ಬರೂ ಹಿಮಾಚಲ ಪ್ರದೇಶಕ್ಕೆ ಪರಾರಿಯಾಗಿದ್ದರು. ಅಲ್ಲಿಂದಲೇ ಮುಸ್ಕಾನ್, ಸೌರಭ್ ಅವರ ಮೊಬೈಲ್ ಫೋನ್ ಬಳಸಿ ಕುಟುಂಬದವರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದಳು. ಈ ಮೂಲಕ ಸೌರಭ್ ಜೀವಂತವಾಗಿದ್ದಾರೆ ಮತ್ತು ಕೆಲಸದ ನಿಮಿತ್ತ ಪ್ರಯಾಣಿಸುತ್ತಿದ್ದಾರೆ ಎಂಬ ಭ್ರಮೆಯನ್ನು ಹುಟ್ಟುಹಾಕಿದ್ದಳು. ಆದರೆ, ಸೌರಭ್ ಅವರ ಸುಳಿವು ಸಿಗದ ಕಾರಣ ಅನುಮಾನಗೊಂಡ ಸಂಬಂಧಿಕರು, 2025ರ ಮಾರ್ಚ್ 17ರಂದು ಸ್ಥಳೀಯ ಪೊಲೀಸರೊಂದಿಗೆ ಸೌರಭ್ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸೌರಭ್ ಮತ್ತು ಮುಸ್ಕಾನ್ ಅವರ ಆರು ವರ್ಷದ ಮಗಳು, “ಅಪ್ಪ ಡ್ರಮ್ ಒಳಗಿದ್ದಾರೆ” ಎಂದು ನೆರೆಹೊರೆಯವರಿಗೆ ತಿಳಿಸಿದ್ದಳು. ಪೊಲೀಸರು ಸೀಲ್ ಮಾಡಲಾಗಿದ್ದ ಆ ನೀಲಿ ಡ್ರಮ್ ಅನ್ನು ಕತ್ತರಿಸಿ ತೆಗೆದಾಗ ಸೌರಭ್ ಅವರ ಮೃತದೇಹದ ಅವಶೇಷಗಳು ಪತ್ತೆಯಾಗಿದ್ದವು. ಇದಾದ ಎರಡು ದಿನಗಳ ಬಳಿಕ ಪೊಲೀಸರು ಮುಸ್ಕಾನ್ ಮತ್ತು ಸಾಹಿಲ್‌ನನ್ನು ಬೆನ್ನಟ್ಟಿ ಬಂಧಿಸಿದ್ದರು.

​ವಿಚಾರಣೆಯ ವೇಳೆ ಪ್ರಾಸಿಕ್ಯೂಷನ್ ಪರ ವಕೀಲರು ಸಾಂದರ್ಭಿಕ, ತಾಂತ್ರಿಕ ಮತ್ತು ಭೌತಿಕ ಸಾಕ್ಷ್ಯಗಳ ಸರಮಾಲೆಯನ್ನೇ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಕೊಲೆಗೂ ಮುನ್ನ ಮುಸ್ಕಾನ್ ಮತ್ತು ಸಾಹಿಲ್ ಅವರಿಗೆ ನಿರ್ದಿಷ್ಟ ನೀಲಿ ಪ್ಲಾಸ್ಟಿಕ್ ಡ್ರಮ್, ಸಿಮೆಂಟ್ ಚೀಲಗಳು, ಮರಳು, ಮಾಂಸ ಕತ್ತರಿಸುವ ಕತ್ತಿ ಹಾಗೂ ಬ್ಲೇಡ್‌ಗಳನ್ನು ಮಾರಾಟ ಮಾಡಿದ್ದಾಗಿ ಸ್ಥಳೀಯ ಅಂಗಡಿ ಮಾಲೀಕರು ಸಾಕ್ಷ್ಯ ನುಡಿದಿದ್ದರು. ಇನ್ನು ಮೊಬೈಲ್ ಕರೆಗಳ ವಿವರ (CDR) ಮತ್ತು ಟವರ್ ಲೊಕೇಶನ್‌ಗಳು ಕೊಲೆ ನಡೆದ ಸಮಯದಲ್ಲಿ ಸಾಹಿಲ್ ಅದೇ ಮನೆಯಲ್ಲಿ ಇದ್ದುದನ್ನು ಹಾಗೂ ನಂತರ ಇಬ್ಬರೂ ಹಿಮಾಚಲ ಪ್ರದೇಶದ ಶಿಮ್ಲಾ ಮತ್ತು ಮನಾಲಿಯ ಹೋಟೆಲ್‌ಗಳಲ್ಲಿ ಒಟ್ಟಿಗೆ ತಂಗಿದ್ದನ್ನು ಖಚಿತಪಡಿಸಿದ್ದವು. ಮರಣೋತ್ತರ ಪರೀಕ್ಷೆಯ ವರದಿಯು ಸೌರಭ್ ಅವರನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ ಎಂಬುದನ್ನು ದೃಢಪಡಿಸಿತ್ತು. ಈ ಎಲ್ಲಾ ಪ್ರಬಲ ಸಾಕ್ಷ್ಯಾಧಾರಗಳನ್ನು ಪರಿಗಣಿಸಿದ ನ್ಯಾಯಾಲಯವು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಅಂದು ಯುವಕನ ಕಣ್ಣು ಹೋಯ್ತು, ಇಂದು ಯುವತಿಯ ಕಿವಿ ಹೋಯ್ತು’: ಪೊಲೀಸರ ವಿರುದ್ಧ ರಾಹುಲ್ ವಾಗ್ದಾಳಿ

ಮುಖ್ಯ ಚುನಾವಣಾ ಆಯುಕ್ತರ (ಸಿಇಸಿ) ವಿರುದ್ಧ ಹಾಗೂ ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...