ಚಂಡೀಗಢದಲ್ಲಿ ನಡೆದ ರೈತರು – ಕೇಂದ್ರದ ನಡುವೆ ‘ಸೌಹಾರ್ದಯುತ’ ಸಭೆ; ಪ್ರಮುಖ ಅಂಶಗಳು

Date:

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದ ಕೇಂದ್ರ ಸರ್ಕಾರದ ತಂಡ ಮತ್ತು ರೈತ ಪ್ರತಿನಿಧಿಗಳ ನಡುವೆ ಶುಕ್ರವಾರ ಸಂಜೆ ಮೊದಲ ಸುತ್ತಿನ ಸಭೆ ನಡೆದಿದೆ. ಇದು ಸೌಹಾರ್ದಯುತವಾಗಿ ನಡೆದಿದೆ ಎಂದು ಸಭೆಯಲ್ಲಿ ಭಾಗಿಯಾಗಿದ್ದವರು ಹೇಳಿದ್ದಾರೆ. ಮುಂದಿನ ಸುತ್ತಿನ ಸಭೆಯು ಫೆಬ್ರವರಿ 22ರಂದು ನಡೆಸಲು ರೈತರು ಮತ್ತು ಕೇಂದ್ರದ ಪ್ರತಿನಿಧಿಗಳು ನಿರ್ಧರಿಸಿದ್ದಾರೆ.

- Advertisement -

ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಕಾನೂನುಬದ್ಧ ಖಾತ್ರಿಯೊಂದಿಗೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತರು ಹಲವಾರು ತಿಂಗಳುಗಳಿಂದ ಪಂಬಾಜ್-ಹರಿಯಾಣದ ಶಂಭು ಮತ್ತು ಖನೌರಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ನಾಯಕ ಜಗಜಿತ್ ಸಿಂಗ್ ದಲ್ಲೇವಾಲ್ ಅವರು 60ಕ್ಕೂ ಹೆಚ್ಚು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದೀಗ, ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ, ಪ್ರತಿಭಟನಾನಿರತ ರೈತರೊಂದಿಗೆ ಸಭೆ ನಡೆಸುತ್ತಿದೆ. ಮೊದಲ ಸಭೆ ಚಂಡೀಗಢದಲ್ಲಿ ನಡೆದಿದೆ. ಸಭೆಯಲ್ಲಿ ರೈತ ಹೋರಾಟದ ನೇತೃತ್ವ ವಹಿಸಿದ್ದ ರೈತ ನಾಯಕರು, ಪಂಜಾಬ್ ಕೃಷಿ ಸಚಿವ ಗುರ್ಮೀತ್ ಸಿಂಗ್ ಖುಡಿಯನ್, ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಲಾಲ್ ಚಂದ್ ಕಟರುಚಕ್ ಮತ್ತು ಇತರ ರಾಜ್ಯ ಸರ್ಕಾರಿ ಪ್ರತಿನಿಧಿಗಳು ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಇದ್ದರು.

“ಬೆಳೆಗಳಿಗೆ ಎಂಎಸ್‌ಪಿ ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ರೈತರ ಸಮಸ್ಯೆಗಳ ಕುರಿತು ನಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದೇವೆ. ಕೇಂದ್ರ ತಂಡ ಎಣ್ಣೆಬೀಜಗಳು ಮತ್ತು ದ್ವಿದಳ ಧಾನ್ಯಗಳ ಬಗ್ಗೆಯೂ ಮಾತನಾಡಿದೆ” ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

“ಬೆಳೆ ಖರೀದಿ ಮತ್ತು ಕೃಷಿ ವಲಯಕ್ಕೆ ಬಜೆಟ್‌ನಲ್ಲಿ ಅನುದಾನ ಹೆಚ್ಚಳದ ಬಗ್ಗೆ ರೈತರಿಗೆ ಮಾಹಿತಿ ನೀಡಿದ್ದೇವೆ. ರೈತರ ಕಲ್ಯಾಣಕ್ಕಾಗಿ ಮೋದಿ ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ವಿವರಗಳನ್ನು ಹಂಚಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

“ಫೆಬ್ರವರಿ 22 ರಂದು ರೈತ ಪ್ರತಿನಿಧಿಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ಆ ಸಭೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಿಂಗ್ ಭಾಗವಹಿಸಲಿದ್ದಾರೆ” ಎಂದು ಜೋಶಿ ಹೇಳಿದ್ದಾರೆ. ಮುಂದಿನ ಸಭೆಯು ದೆಹಲಿಯಲ್ಲಿ ನಡೆಸಬೇಕು ಎಂದು ರೈತ ನಾಯಕ ದಲ್ಲೇವಾಲ್ ಒತ್ತಾಯಿಸಿದ್ದಾರೆ.

ಸಭೆಯ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, “ರೈತ ಹೋರಾಟ ಆರಂಭವಾಗಿ ಒಂದು ವರ್ಷದ ನಂತರ ಕೇಂದ್ರ ಸರ್ಕಾರವು ರೈತರನ್ನು ಭೇಟಿಯಾಗಲು ಮುಂದಾಗಿದೆ. ಇದು ಅವರು (ಕೇಂದ್ರ) ಪಂಜಾಬಿಗಳನ್ನು ಎಷ್ಟು ಪ್ರೀತಿಸುತ್ತಾರೆ ಎಂಬುದನ್ನು ತೋರಿಸುತ್ತದೆ. ರೈತರು ಉಪವಾಸ ಸತ್ಯಾಗ್ರಹ ಮಾಡಬಹುದು ಅಥವಾ ಕಷ್ಟಗಳನ್ನು ಎದುರಿಸಬಹುದು. ಆದರೂ, ಕೇಂದ್ರ ಸರ್ಕಾರ ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...