ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

Date:

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ ಡಾ. ಸುಖ್‌ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರ ನಡುವೆ ಆಂತರಿಕ ಅಭಿಪ್ರಾಯ ಭೇದಗಳಿವೆ, ಪ್ರಮುಖ ನಿರ್ಧಾರಗಳನ್ನು ಸರ್ವಮತದಿಂದ ತೆಗೆದುಕೊಳ್ಳಲಾಗಿಲ್ಲ, ಗ್ಯಾನೇಶ್ ಕುಮಾರ್ ಅವರ ಏಕಪಕ್ಷೀಯ ನಿರ್ಧಾರವಾಗಿತ್ತು ಎಂಬ ವಿಷಯವು ಇತ್ತೀಚೆಗೆ ಬಹಿರಂಗವಾಗಿದೆ. ಈ ವಿಚಾರವು ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ, ಭಾರತ ಚುನಾವಣಾ ಆಯೋಗವು (ಇಸಿಐ) ಶನಿವಾರ ದೆಹಲಿಯ ನಿರ್ವಾಚನ ಸದನದಲ್ಲಿ ಪೂರ್ಣ ಆಯೋಗದ ಸಭೆ ನಡೆಸಿದೆ. ಅದಾದ ಬಳಿಕ ಸ್ಪಷ್ಟನೆಗಳನ್ನು ನೀಡಿದೆ.

- Advertisement -

ಆಯೋಗದ ಪ್ರಮುಖ ನಿರ್ಧಾರಗಳು ಮತ್ತು ಕಾರ್ಯವೈಖರಿಗಳ ಕುರಿತು ವ್ಯಕ್ತವಾಗಿದ್ದ ಅನುಮಾನಗಳಿಗೆ ಸ್ಪಷ್ಟನೆ ನೀಡಿರುವ ಆಯೋಗ, ದೇಶಾದ್ಯಂತ ಕೈಗೊಳ್ಳಲಾದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸೇರಿದಂತೆ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಮೂವರೂ ಆಯುಕ್ತರ ಸರ್ವಸಮ್ಮತಿಯಿಂದಲೇ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ಇದನ್ನೂ ಓದಿ: ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಆಯೋಗದ ಬಿಹಾರ, ಪಶ್ಚಿಮ ಬಂಗಾಳ ಸೇರಿದಂತೆ ದೇಶಾದ್ಯಂತ ಜಾರಿಗೆ ತರಲಾದ ಎಸ್‌ಐಆರ್‌ ಪ್ರಕ್ರಿಯೆಗೆ ಸಂಬಂಧಿಸಿದ ಆದೇಶಗಳನ್ನು ಮೂವರೂ ಆಯುಕ್ತರ ಸರ್ವಸಮ್ಮತಿಯ ಅನುಮೋದನೆಯೊಂದಿಗೆ ಹೊರಡಿಸಲಾಗಿತ್ತು. ಈ ಪ್ರಕ್ರಿಯೆಯನ್ನು ದೇಶದ ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ ಎಂದು ಆಯೋಗ ತಿಳಿಸಿದೆ.

ಆಡಳಿತಾತ್ಮಕ ಪತ್ರದ ಕುರಿತು ಸ್ಪಷ್ಟನೆ ನೀಡಿರುವ ಆಯೋಗ, ಕ್ಯಾಬಿನೆಟ್ ಕಾರ್ಯದರ್ಶಿಗೆ ಬರೆದ ಪತ್ರವು ಆಯೋಗದ ಯಾವುದೇ ನೀತಿ ನಿರ್ಧಾರ ಅಥವಾ ಐಟಿ ವಿಭಾಗದ ಪ್ರಕ್ರಿಯೆಗೆ ಸಂಬಂಧಿಸಿದ್ದಲ್ಲ; ಬದಲಿಗೆ ಡೆಪ್ಯುಟೇಶನ್‌ನಲ್ಲಿದ್ದ ಅಧಿಕಾರಿಯೊಬ್ಬರ ಕೆಲಸಕ್ಕೆ ಸಂಬಂಧಿಸಿದ್ದಾಗಿದೆ. ಐಟಿ ವಿಭಾಗದ ಮೇಲ್ವಿಚಾರಣೆಯನ್ನು ಎಂದಿಗೂ ಹಿಂಪಡೆದಿರಲಿಲ್ಲ ಎಂದು ಹೇಳಿದೆ.

ಚುನಾವಣಾ ವ್ಯವಸ್ಥೆಯ ಐಟಿ ಪೋರ್ಟಲ್ ‘ECINet’ ನ ಸುರಕ್ಷತೆ ಮತ್ತು ಕಾನೂನುಬದ್ಧತೆಯನ್ನು ಪರಿಶೀಲಿಸಲು ಹಿರಿಯ ಡೆಪ್ಯುಟಿ ಎಲೆಕ್ಷನ್ ಕಮಿಷನರ್ ನೇತೃತ್ವದಲ್ಲಿ ಐಐಟಿ/ಐಐಐಟಿಯ ಸ್ವತಂತ್ರ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಕ್ಷೇತ್ರಮಟ್ಟದ ಅಧಿಕಾರಿಗಳ ವೈ ಶಾಸನಬದ್ಧ ಅಧಿಕಾರಗಳಿಗೆ ಅನುಗುಣವಾಗಿ ರೋಲ್-ಬೇಸ್ಡ್ ಆಕ್ಸಸ್ ನೀಡಲಾಗಿದ್ದು, ಅಗತ್ಯಕ್ಕೆ ತಕ್ಕಂತೆ ಸುಧಾರಣೆಗಳನ್ನು ಮಾಡಲಾಗುವುದು ಎಂದು ಆಯೋಗ ಸ್ಪಷ್ಟಪಡಿಸಿದೆ.

ಆಯೋಗದ ಪ್ರತಿಯೊಂದು ಸಭೆಗೂ ಮುನ್ನವೇ ಅಜೆಂಡಾವನ್ನು ಹಂಚಿಕೊಳ್ಳಲಾಗುವುದು ಮತ್ತು ಸಭೆಯ ನಡಾವಳಿಗಳನ್ನು ಕಡ್ಡಾಯವಾಗಿ ಹೊರಡಿಸಲಾಗುವುದು. ಜೊತೆಗೆ, ಆಯುಕ್ತರು ನೀಡುವ ಎಲ್ಲಾ ಸೂಚನೆಗಳನ್ನು ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕೆಂದು ನಿರ್ದೇಶಿಸಲಾಗಿದೆ. ಗೋವಾದಲ್ಲಿ ಬಿಟ್ಟುಹೋಗಿದ್ದ 97 ಮತದಾರರ ಪೈಕಿ 81 ಮತದಾರರಿಗೆ ಬಿಎಲ್‌ಒಗಳೇ ಮನೆಗೆ ತೆರಳಿ ಫಾರ್ಮ್ 6 ಭರ್ತಿ ಮಾಡಿಸಿದ್ದು, ಎಲ್ಲರನ್ನೂ ಸೇರ್ಪಡೆಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...