ಮೇಘಾಲಯದ ಮುಖ್ಯಮಂತ್ರಿ ಕಚೇರಿ ಮೇಲೆ ಗುಂಪು ದಾಳಿ; ಭದ್ರತಾ ಸಿಬ್ಬಂದಿಗೆ ಗಾಯ

Date:

ಅಪರಿಚಿತ ದುಷ್ಕರ್ಮಿಗಳ ಗುಂಪು ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಕಚೇರಿಯ ಮೇಲೆ ದಾಳಿ ನಡೆಸಿರುವ ಘಟನೆ ಪಶ್ಚಿಮ ಮೇಘಾಲಯದ ತುರ ಪಟ್ಟಣದಲ್ಲಿ ನಡೆದಿದೆ.

ಕಚೇರಿಯ ಹೊರಗೆ ನೆರೆದಿದ್ದ ಉದ್ರಿಕ್ತರ ಗುಂಪು ಕಚೇರಿಯ ಮೇಲೆ ಕಲ್ಲು ತೂರಾಟ ನಡೆಸಿತು. ಕೆಲವರು ಒಳಗೆ ನುಗ್ಗಲೂ ಯತ್ನಿಸಿದರು. ಕೊನೆಗೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರಿಗೆ ಯಾವುದೇ ಪೆಟ್ಟಾಗಿಲ್ಲ. ಆದರೆ, ಐವರು ಪೊಲೀಸರು ಕಲ್ಲು ತೂರಾಟದಿಂದ ಗಾಯಗೊಂಡಿದ್ದಾರೆ. ನೂರಕ್ಕೂ ಅಧಿಕ ಸಂಖ್ಯೆಯ ಪ್ರತಿಭಟನಾಕಾರರು ಕಚೇರಿಯನ್ನು ಸುತ್ತುವರೆದಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಪಟ್ಟಣದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.        

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತುರ ಪಟ್ಟಣವನ್ನು ಚಳಿಗಾಲದ ರಾಜಧಾನಿ ಮಾಡಬೇಕು ಎಂದು ಒತ್ತಾಯಿಸಿ ಪಟ್ಟಣದ ವಿವಿಧೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಕಲ್ಲು ತೂರಾಟ ಮಾಡಿದವರು ಪ್ರತಿಭಟನಾನಿರತರಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಗ್ಮಾ ಅವರು ಗರೋ ಹಿಲ್ಸ್ ರಾಜ್ಯ ಜನಾಂದೋಲನ ಸಮಿತಿ, ಎಸಿಎಚ್‌ಐಕೆ ಸಂಘಟನೆಗಳ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾಗ ದಾಂಧಲೆ ಘಟನೆ ನಡೆದಿದೆ. ತುರ ಪಟ್ಟಣವನ್ನು ಮೇಘಾಲಯದ ಚಳಿಗಾಲದ ರಾಜಧಾನಿ ಮಾಡಬೇಕು ಎಂದು ಮಾತುಕತೆಗೆ ಬಂದಿದ್ದ ಗುಂಪು ಒತ್ತಾಯಿಸಿತ್ತು.

ಈ ಸುದ್ದಿ ಓದಿದ್ದೀರಾ: ಆರು ಮಂದಿ ಹೈಕೋರ್ಟ್‌ ನ್ಯಾಯಾಧೀಶರಿಗೆ ಜೀವ ಬೆದರಿಕೆ; ₹50 ಲಕ್ಷಕ್ಕೆ ಡಿಮಾಂಡ್     

‘ಮಾತುಕತೆ ಅಂತ್ಯವಾಗುವ ಹೊತ್ತಿನಲ್ಲಿ ಹೊರಗೆ ಗದ್ದಲ ಕೇಳಿಸಿತು. ನಾನು ಹೊರಗೆ ಬಂದು ಯಾವುದೇ ಅಹಿತಕರ ಘಟನೆಗೆ ಕಾರಣವಾಗದಂತೆ ಅವರಿಗೆ ಹೇಳಿದೆ. ಸರ್ಕಾರೇತರ ಸಂಸ್ಥೆಗಳ, ಸಂಘಟನೆಗಳ ಮುಖಂಡರೂ ಹೊರಗೆ ಬಂದು ಉದ್ರಿಕ್ತ ಗುಂಪಿನ ಜೊತೆ ಮಾತನಾಡಿದರು. ಆ ಗುಂಪಿನವರು ಯಾರು ಎನ್ನುವುದೇ ತಮಗೆ ತಿಳಿದಿಲ್ಲ ಎಂದು ಸಂಘಟನೆಗಳ ಮುಖಂಡರು ತಿಳಿಸಿದರು. ಆ ಗುಂಪು ತೊಂದರೆ ಉಂಟು ಮಾಡುವ ಉದ್ದೇಶದಿಂದಲೇ ಅಲ್ಲಿಗೆ ಬಂದಂತಿತ್ತು’ ಎಂದು ಮುಖ್ಯಮಂತ್ರಿಗಳು ವಿಡಿಯೋ ಹೇಳಿಕೆ ನೀಡಿದ್ದಾರೆ.

ಕಲ್ಲು ತೂರಾಟದಿಂದ ತೀವ್ರವಾಗಿ ಗಾಯಗೊಂಡಿರುವ ಐವರು ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಘೋಷಿಸಿದೆ. ಜೊತೆಗೆ ಅವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನೂ ಘೋಷಿಸಿದೆ.    

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಮಾಚಲ ಪ್ರದೇಶ | ವಿಧಾನಸಭೆಯಿಂದ 15 ಬಿಜೆಪಿ ಶಾಸಕರ ಅಮಾನತು; ಕಾಂಗ್ರೆಸ್‌ನ ಸಚಿವ ರಾಜೀನಾಮೆ

ಹಿಮಾಚಲ ಪ್ರದೇಶ ಸುಖ್ವಿಂದರ್ ಸಿಂಗ್‌ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು...

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದ ಅಪರಾಧಿ ಸಾವು

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಬಳಿಕ ಬಿಡುಗಡೆಗೊಂಡಿದ್ದ...

6 ಕಾಂಗ್ರೆಸ್ ಶಾಸಕರನ್ನು ಕರೆದೊಯ್ದ ಸೇನೆ: ಬಿಜೆಪಿ ವಿರುದ್ಧ ಹಿಮಾಚಲ ಪ್ರದೇಶ ಸಿಎಂ ಆರೋಪ

ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್‌ ಬೆಂಗಾವಲೊಂದಿಗೆ ಕಾಂಗ್ರೆಸ್‌ನ ಐದರಿಂದ ಆರು...