ಅಗತ್ಯ ವಸ್ತುಗಳ ಬೆಲೆ ಏರಿಕೆ: ಸರ್ಕಾರಕ್ಕೆ ಖರ್ಗೆ ತರಾಟೆ

Date:

Advertisements

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಸರ್ಕಾರದ ಅವಧಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ‘ಅಭಿವೃದ್ಧಿ ಹೊಂದಿದ ಭಾರತ’ವೇ ಎಂದು ಪ್ರಶ್ನಿಸಿದ್ದಾರೆ.

ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಹಣದುಬ್ಬರವನ್ನು ಬೊಟ್ಟು ಮಾಡಿ ತೋರಿಸಲು ಹಾಲು, ಈರುಳ್ಳಿ, ಟೊಮ್ಯಾಟೊ ಮತ್ತು ಸಕ್ಕರೆಯಂತಹ ಅಗತ್ಯ ವಸ್ತುಗಳ 2014 ರ ಬೆಲೆಗಳನ್ನು ಅವುಗಳ ಪ್ರಸ್ತುತ ಬೆಲೆಗಳೊಂದಿಗೆ ಹೋಲಿಸುವ ವಿಡಿಯೋ ದೃಶ್ಯವನ್ನು ಮಲ್ಲಿಕಾರ್ಜುನ ಖರ್ಗೆ ಹಂಚಿಕೊಂಡಿದ್ದಾರೆ.

ಹಣದುಬ್ಬರ-ನಾಮಕವಸ್ತೆ ಅರ್ಥಶಾಸ್ತ್ರ. ಇದು ಯಾವ ರೀತಿಯ ‘ಅಭಿವೃದ್ಧಿ ಹೊಂದಿದ ಭಾರತ’? ಬಿಜೆಪಿಗೆ ಇದು ಲೂಟಿ ಮಾಡುವಲ್ಲಿ ಪರಿಣತಿ ಹೊಂದಿದ ಅರ್ಥಶಾಸ್ತ್ರವಾಗಿದೆ. ಸರ್ಕಾರವು ಆರ್ಥಿಕತೆಯ ನಿರ್ವಹಣೆಯ ಮೇಲೆ ದಾಳಿ ಮಾಡುತ್ತಿದೆ. ಇದರಿಂದ ನಿರುದ್ಯೋಗ ಮತ್ತು ಬೆಲೆ ಏರಿಕೆ ಹೆಚ್ಚಾಗುತ್ತಿದೆ”ಎಂದು ತಿಳಿಸಿದ್ದಾರೆ.

Advertisements

ಡಿಸೆಂಬರ್ 21 ರಂದು ಕಾಂಗ್ರೆಸ್‌ ಕಾರ್ಯಾಕಾರಿಣಿ ಸಭೆ

2024ರ ಸಾರ್ವತ್ರಿಕ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಲು ಮತ್ತು ಬಿಜೆಪಿಯನ್ನು ಎದುರಿಸಲು ತನ್ನ ಚುನಾವಣಾ ಪ್ರಚಾರಕ್ಕೆ ಕಾರ್ಯ ಯೋಜನೆಯನ್ನು ರೂಪಿಸಲು ಕಾಂಗ್ರೆಸ್ ಪಕ್ಷವು ಡಿಸೆಂಬರ್ 21 ರಂದು ಕಾರ್ಯಕಾರಿಣಿಯನ್ನು ಕರೆದಿದೆ ಎಂದು ಮೂಲಗಳು ತಿಳಿಸಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಭೆಯು ಡಿಸೆಂಬರ್ 19 ರಂದು ಇಂಡಿಯಾ ಒಕ್ಕೂಟದ ಸಭೆ ನಡೆದ ಎರಡು ದಿನಗಳ ನಂತರ ಹಮ್ಮಿಕೊಳ್ಳಲಾಗುತ್ತದೆ. ಸಭೆಯಲ್ಲಿ ಸೀಟು ಹಂಚಿಕೆ ಮತ್ತು ಪ್ರಚಾರವು ಅಜೆಂಡಾದ ಪ್ರಮುಖ ಅಂಶಗಳಾಗಿರಲಿದೆ.

2024ರ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಅವರು ನಿರುದ್ಯೋಗ ಮತ್ತು ಬೆಲೆ ಏರಿಕೆಯ ಪ್ರಮುಖ ಯೋಜನೆಗಳಾಗಿ ಕೈಗೊಳ್ಳಬಹುದಾದ ಯಾತ್ರೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಉತ್ತರದಲ್ಲಿ ನಡೆದ ಅಧಿವೇಶನದಲ್ಲಿ ಸಿಕ್ಕ ಉತ್ತರವೇನು?

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X