ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸಹಕರಿಸಬೇಕು: ಡಿಕೆಶಿ

Date:

“ತಮಿಳುನಾಡಿನ 177 ಟಿಎಂಸಿ ನೀರಿನ ಹಕ್ಕಿನ ರಕ್ಷಣೆಯ ಜೊತೆಗೆ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮೇಕೆದಾಟು ಅಣೆಕಟ್ಟು ನಿರ್ಮಾಣದ ಜವಾಬ್ದಾರಿ ಕರ್ನಾಟಕದ್ದಾಗಿದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಹೇಳಿದರು.

- Advertisement -

ಶನಿವಾರ, ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, “ಬೆಂಗಳೂರಿನ ಕುಡಿಯುವ ನೀರಿನ ಅವಶ್ಯಕತೆಗಾಗಿ ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಅನುಮತಿ ಪಡೆದು ಯೋಜನೆಯನ್ನು ಮುಂದುವರೆಸುವುದಕ್ಕೆ ಕರ್ನಾಟಕವು ಬದ್ದವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾಲಜ್ಞಾನ ಸಾರಿದ ಮಂಟೇದಲಿಂಗಯ್ಯ’: ನೀಲಗಾರರ ಸ್ವರವಚನಗಳಲ್ಲಿ ಅಡಗಿರುವ ಜನಪದ...

ಕಾಲದ ಬದಲಾವಣೆಯನ್ನು ಗ್ರಹಿಸುವ ಕಾಲಜ್ಞಾನ, ಎಲ್ಲರೊಳಗೂ ಬೆಳಗುವ ಪರಂಜ್ಯೋತಿಯ ತತ್ವ, ಕಪಟ ಧಾರ್ಮಿಕ ಆಚರಣೆಗಳನ್ನು ಪ್ರಶ್ನಿಸುವ ಮಂಟೇಸ್ವಾಮಿಯ ನಿಲುವು ಮತ್ತು ತಲೆಮಾರುಗಳಿಂದ ಈ ಮಹಾಕಾವ್ಯವನ್ನು ಜೀವಂತವಾಗಿಟ್ಟಿರುವ ನೀಲಗಾರರ ಗಾಯನ ಪರಂಪರೆ ತಂಬೂರಿಯ ನಾದ ಮೊಳಗುತ್ತದೆ....

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ...

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ ಬಹಳವಾಗಿ ಪ್ರಭಾವಿಸಿದವು. ಸೋನಿಯಾ ಗಾಂಧಿ ಒಬ್ಬ ಮಹಿಳೆಯಾಗಿ, ಒಬ್ಬ ವಿಧವೆಯಾಗಿ, ಅಲ್ಪಸಂಖ್ಯಾತ ಕ್ರಿಶ್ಚಿಯನ್ ಧಾರ್ಮಿಕ ಹಿನ್ನೆಲೆಯ ಮಹಿಳೆಯಾಗಿ ಮತ್ತು ವಿದೇಶಿ...

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ತಮಿಳುನಾಡು ಸರ್ಕಾರದ ಆಕ್ಷೇಪಗಳ ಕುರಿತು ಮಾತನಾಡಿದ ಅವರು, “ತಮಿಳುನಾಡು ಸರ್ಕಾರವು ಅವರ ನಿಯೋಗವೊಂದನ್ನು ರಾಜ್ಯಕ್ಕೆ ಕಳುಹಿಸಲಿ, ಅವರಿಗೆ ಈ ಯೋಜನೆಯ ವಿವರಗಳನ್ನು ವಿವರಿಸಿ ಎರಡು ರಾಜ್ಯಗಳಿಗೂ ಅದರಿಂದಾಗುವ ಪ್ರಯೋಜನಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು. ಎರಡು ರಾಜ್ಯಗಳ ನಡುವೆ ರಾಜಕೀಯ ಬಿನ್ನಾಭಿಪ್ರಾಯಗಳಿದ್ದರೂ ಅಭಿವೃದ್ಧಿಯ ವಿಚಾರದಲ್ಲಿ ಪರಸ್ಪರ ಸಹಕಾರ ಅಗತ್ಯವಾಗಿದೆ.ರಾಜಕಾರಣದಲ್ಲಿ ನಾವು ಸ್ಪರ್ಧಿಸುತ್ತೇವೆ, ಅಭಿವೃದ್ದಿಗೆ ಸಹಕರಿಸುತ್ತೇವೆ” ಎಂದರು.

ಮೇಕೆದಾಟು ಯೋಜನೆಯು ಎರಡು ರಾಜ್ಯಗಳ ನಡುವೆ ಹಲವಾರು ವರ್ಷಗಳಿಂದ ವಿವಾದವಿದೆ. ಮೇಕೆದಾಟು ಯೋಜನೆಯಿಂದ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ನೀಗುತ್ತದೆ ಎಂದು ಕರ್ನಾಟಕ ಸರ್ಕಾರ ವಾದಿಸಿದರೆ, ರಾಜ್ಯ ರೈತರಿಗೆ ಇಂದರಿಂದಾಗಿ ತೊಂದರೆಯಾಗುತ್ತದೆ ಎಂದು ತಮಿಳುನಾಡು ಆತಂಕ ವ್ಯಕ್ತಪಡಿಸುತ್ತಿದೆ.

ಕರ್ನಾಟಕದ ಎಲ್ಲ ಪಕ್ಷಗಳು ಈ ಯೋಜನೆಯನ್ನು ಮುಂದುವರಿಸಬೇಕೆಂದು ಒಪ್ಪಿಕೊಂಡಿವೆ. ಅದಕ್ಕಾಗಿ ಕೇಂದ್ರದ ಸಚಿವಾಲಗಳಿಗೆ ಅಗತ್ಯ ದಾಖಲೆಗನ್ನು ಸಲ್ಲಿಸಲಾಗಿದೆ ಎಂದು ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಕ್ಕಳಲ್ಲಿ ಕಾವ್ಯಾಸಕ್ತಿ ಮೂಡಿಸುತ್ತಿದೆ ‘ಯುವ ಬೆಂಗಳೂರು’: ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ

ಕನ್ನಡವು ವಿಶಾಲವಾದ ಭಾಷೆಯಾಗಿದೆ. ಅದನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ...

ಕರ್ನಾಟಕ SIR | ಮುಸ್ಲಿಂ ಶಾಸಕರಿರುವ 10 ಕ್ಷೇತ್ರಗಳಲ್ಲಿ 27.59% ಮತದಾರರು ಡಿಲೀಟ್‌!

ರಾಜ್ಯದಲ್ಲಿ ನಡೆದ ಎಸ್‌ಐಆರ್‌ ಪ್ರಕ್ರಿಯೆಯ ವೇಳೆ, ಮುಸ್ಲಿಂ ಶಾಸಕರು ಪ್ರತಿನಿಧಿಸುವ 10...

2027 ಯುಪಿ ಚುನಾವಣೆ | ಬಿಟ್ಟುಹೋದ 40-80 ಲಕ್ಷ ಹಿಂದೂ ಮತದಾರರನ್ನೇ ಸೇರಿಸಲು ಯೋಗಿ ಸರ್ಕಾರದ ‘ಅಂತಿಮ್ ಮೌಕಾ’ ಅಭಿಯಾನ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿ...

ಶ್ರೀಕೃಷ್ಣನಿಗೆ ಅವಮಾನ: ಬಾಬಾ ಬಾಗೇಶ್ವರ ವಿರುದ್ಧ ತೀವ್ರಗೊಂಡ ಯಾದವರ ಪ್ರತಿಭಟನೆ!

ಶ್ರೀರಾಮ ಮತ್ತು ಶ್ರೀಕೃಷ್ಣನ ನಡುವೆ ತುಲನೆ ಮಾಡಿ ವಿವಾದಾತ್ಮಕ ಹೇಳಿಕೆ ನೀಡಿದ್ದ...