‘ಮುಟ್ಟಿನ ಆರೋಗ್ಯವು ಮೂಲಭೂತ ಹಕ್ಕಿನ ಭಾಗ’; ಶಾಲಾ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ ವಿತರಣೆಗೆ ಸುಪ್ರೀಂ ಆದೇಶ

Date:

ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಜೈವಿಕವಾಗಿ ಕೊಳೆಯುವ ಮುಟ್ಟಿನ ನೈರ್ಮಲ್ಯ ಪ್ಯಾಡ್‌ಗಳನ್ನು (ಸ್ಯಾನಿಟರಿ ಪ್ಯಾಡ್‌) ಉಚಿತವಾಗಿ ನೀಡಬೇಕು. ಶಾಲೆಗಳು ಸ್ಯಾನಿಟರಿ ಪ್ಯಾರ್‌ಗಳನ್ನು ಒದಗಿಸುತ್ತಿವೆಯೇ ಎಂಬುದನ್ನು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಳಿತ ಪ್ರದೇಶಗಳು ಖಚಿತಪಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ. ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜೀವನದ ಮೂಲಭೂತ ಹಕ್ಕಿನ ಭಾಗವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

- Advertisement -

6 ರಿಂದ 12ನೇ ತರಗತಿಯವರೆಗಿನ ಬಾಲಕಿಯರಿಗಾಗಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಕೇಂದ್ರ ಸರ್ಕಾರದ ‘ಶಾಲಾ ಬಾಲಕಿಯರಿಗೆ ಮುಟ್ಟಿನ ನೈರ್ಮಲ್ಯ ನೀತಿ’ಯನ್ನು ದೇಶಾದ್ಯಂತ ಜಾರಿಗೆ ತರಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜೆ ಬಿ ಪಾರ್ದಿವಾಲಾ ಮತ್ತು ಆರ್ ಮಹಾದೇವನ್ ಅವರ ಪೀಠವು ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಮುಟ್ಟಿನ ಆರೋಗ್ಯದ ಹಕ್ಕು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಬದುಕುವ ಹಕ್ಕಿನ ಭಾಗವಾಗಿದೆ. ಶಾಲೆಗಳು ಈ ಸೌಲಭ್ಯಗಳನ್ನು ಒದಗಿಸಲು ವಿಫಲವಾದರೆ, ಸರ್ಕಾರಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ” ಎಂದು ಹೇಳಿದೆ.

“ಸರ್ಕಾರಿ ಸ್ವಾಮ್ಯದ ಅಥವಾ ಖಾಸಗಿ ವಲಯಕ್ಕೆ ಸೇರಿವೆ ಎಂಬುದನ್ನು ಲೆಕ್ಕಿಸದೆ ಎಲ್ಲ ಶಾಲೆಗಳಲ್ಲಿ ಬಾಲಕಿ ಮತ್ತು ಬಾಲಕರಿಗೆ ಪ್ರತ್ಯೇಕ ಶೌಚಾಲಯಗಳನ್ನು ಒದಗಿಸಬೇಕು. ಅವು ಅಂಗವಿಕಲ ಸ್ನೇಹಿಯೂ ಆಗಿಬೇಕು” ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನ ಮರಣ ನೋಂದಣಿ, ತಡ ಮಾಡಿದರೆ ಕೋರ್ಟ್ ಗೆ ಅಲೆಯಬೇಕಾದೀತು!

ಜನನ ಮತ್ತು ಮರಣಗಳ ವಿಳಂಬ ನೋಂದಣಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ನಿಯಮಗಳನ್ನು...

ಇಳಿ ಮೂವತ್ತರಲ್ಲೇ ಮಹಿಳೆಯರ ಹೃದಯಕ್ಕೆ ಮುಪ್ಪು; ಪುರುಷರಿಗಿಂತ 10 ವರ್ಷ ಮುನ್ನವೇ ಆರಂಭ!

ಮಹಿಳೆಯರ ಹೃದಯದ ಆರೋಗ್ಯದ ಕುರಿತಂತೆ ಇದುವರೆಗೆ ಇದ್ದ ಸಾಮಾನ್ಯ ನಂಬಿಕೆಗಳನ್ನು ಸಂಪೂರ್ಣವಾಗಿ...

ಹವಾಮಾನ ವೈಪರೀತ್ಯ: ತೀವ್ರ ಶಾಖದ ಅಪಾಯಕ್ಕೆ ತುತ್ತಾಗುತ್ತಿರುವವರಲ್ಲಿ ಭಾರತೀಯರೇ ಹೆಚ್ಚು

ಮಾನವ ಕೃತ್ಯಗಳಿಂದಾಗಿ ಭಾರೀ ಹವಾಮಾನ ವೈಪರೀತ್ಯ‌ ಎದುರಾಗಿದೆ. ಉಳ್ಳವರ ಕೃತ್ಯಕ್ಕೆ ಇಡೀ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...