ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಇದಕ್ಕೆ ಮಹಿಳೆಯರಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ ಸ್ಮೃತಿ ಇರಾನಿ ಅವರು, “ಋತುಚಕ್ರವು ಮಹಿಳೆಯರ ಕೆಲಸಕ್ಕೆ ಎಂದೂ ಅಡ್ಡಿಯಾಗುವುದಿಲ್ಲ, ಅದು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆ” ಎಂದು ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆಯ ನೀತಿಗೆ ವಿರೋಧ ವ್ಯಕ್ತಪಡಿಸಿದರು.
ಮಹಿಳಾ ಉದ್ಯೋಗಿಗಳಿಗೆ ನಿರ್ದಿಷ್ಟ ಸಂಖ್ಯೆಯ ರಜೆಗಳನ್ನು ನೀಡಲು ಉದ್ಯೋಗದಾತರಿಗೆ ಕಡ್ಡಾಯ ನಿಬಂಧನೆಗಳನ್ನು ಜಾರಿಗೊಳಿಸಲು ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಝಾ ಕೇಳಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳಜಗಳದಲ್ಲಿ ಬಸವಳಿದ ಬಿಜೆಪಿ; ಕರ್ನಾಟಕಕ್ಕೆ ಬೇಕು ಸಮರ್ಥ ವಿರೋಧ ಪಕ್ಷ
“ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ಸಿದ್ಧಪಡಿಸಿದೆ. 10-19 ವಯೋಮಾನದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಕೇಂದ್ರವು ಈಗಾಗಲೇ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಇದಲ್ಲದೆ, ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ರೂಪಿಸಿದೆ” ಎಂದು ಇರಾನಿ ಅವರು ಸದನಕ್ಕೆ ತಿಳಿಸಿದರು.
“ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ರಾಜ್ಯ ಕಾರ್ಯಕ್ರಮ ಅನುಷ್ಠಾನ ಯೋಜನೆ ಮಾರ್ಗದ ಮೂಲಕ ಈ ಯೋಜನೆಯನ್ನು ರಾಷ್ಟ್ರೀಯ ಆರೋಗ್ಯ ಮಿಷನ್ ಬೆಂಬಲಿಸುತ್ತದೆ. ಮುಟ್ಟಿನ ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ” ಎಂದು ಇರಾನಿ ಹೇಳಿದರು.