ನ್ಯಾಯಾಧೀಶರ ಪುತ್ರನ ಕಾರು ಅಪಘಾತ: ಬಾಲಕನ ಜಾಮೀನು ರದ್ದು ಕೋರಿ ಕೇರಳ ಹೈಕೋರ್ಟ್‌ಗೆ ಸಂತ್ರಸ್ತ ಕುಟುಂಬ ಅರ್ಜಿ

Date:

ಕೊಚ್ಚಿಯ ಚೇರಾನಲ್ಲೂರ್‌ನಲ್ಲಿ ನಡೆದ ಮರ್ಸಿಡಿಸ್ ಬೆಂಝ್ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ 17 ವರ್ಷದ ಬಾಲಕನಿಗೆ ಮಂಜೂರಾಗಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಸಂತ್ರಸ್ತನ ಕುಟುಂಬವು ಕೇರಳ ಹೈಕೋರ್ಟ್ ಮೆಟ್ಟಿಲೇರಿದೆ.

- Advertisement -

ಅಪ್ರಾಪ್ತ ಬಾಲಕನ ಜಾಮೀನು ರದ್ದುಗೊಳಿಸಲು ಇತ್ತೀಚೆಗಷ್ಟೇ ಸೆಷನ್ಸ್ ನ್ಯಾಯಾಲಯ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೃತ ಸ್ಕೂಟರ್ ಸವಾರ ಜಯಬಾಲಕೃಷ್ಣನ್ ಅವರ ಕುಟುಂಬ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಗುರುವಾರ ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ. ಜಯಚಂದ್ರನ್ ಅವರ ಪೀಠವು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಮುಂದಿನ ವಿಚಾರಣೆ ಮುಂದಿನ ವಾರ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಅಕ್ಟೋಬರ್ 25ರ ಮುಂಜಾನೆ ಕೊಚ್ಚಿಯ ಚೇರಾನಲ್ಲೂರ್ ಎಂಬಲ್ಲಿ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಝ್ ಕಾರು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಜಯಬಾಲಕೃಷ್ಣನ್ ಮೃತಪಟ್ಟಿದ್ದರು. ಕಾರು ಚಲಾಯಿಸುತ್ತಿದ್ದ ಆರೋಪಿ ಬಾಲಕ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರೊಬ್ಬರ ಪುತ್ರ ಎಂಬ ವಿಚಾರ ಬಹಿರಂಗವಾದ ಬಳಿಕ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಆರಂಭದಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 281 ಮತ್ತು 106(1) ರ ಅಡಿ ಅತಿವೇಗದ ಚಾಲನೆ ಮತ್ತು ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಆದರೆ, ಮೃತನ ಕುಟುಂಬಸ್ಥರು ಮತ್ತು ಸ್ಥಳೀಯರ ನಿರಂತರ ಪ್ರತಿಭಟನೆಯ ಬಳಿಕ, ಪೊಲೀಸರು ಮೋಟಾರು ವಾಹನ ಕಾಯ್ದೆ ಹಾಗೂ ಬಿಎನ್‌ಎಸ್ ಸೆಕ್ಷನ್ 105 (ಕೊಲೆಯಲ್ಲದ ನರಹತ್ಯೆ) ಸೇರಿದಂತೆ ಇನ್ನಷ್ಟು ಗಂಭೀರ ಸ್ವರೂಪದ ಕಾಯ್ದೆಗಳನ್ನು ಎಫ್‌ಐಆರ್‌ನಲ್ಲಿ ಸೇರ್ಪಡೆ ಮಾಡಿದ್ದರು.

ಅಕ್ಟೋಬರ್ 26ರಂದು ಬಾಲಾಪರಾಧಿ ನ್ಯಾಯ ಮಂಡಳಿಯು (JJB) ಆರೋಪಿ ಬಾಲಕನಿಗೆ ಜಾಮೀನು ಮಂಜೂರು ಮಾಡಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹಾಗೂ ಜಯಬಾಲಕೃಷ್ಣನ್ ಅವರ ಕುಟುಂಬಸ್ಥರು ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಎರ್ನಾಕುಲಂ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಕವಿತಾ ಗಂಗಾಧರನ್ ಅವರು ಕಳೆದ ವಾರ ಈ ಮೇಲ್ಮನವಿಯನ್ನು ವಜಾಗೊಳಿಸಿದ್ದರು. “ಕಾನೂನು ಸಂಘರ್ಷಕ್ಕೊಳಗಾದ ಮಗುವಿಗೆ (Child in Conflict with Law – CCL) ಜಾಮೀನು ನಿರಾಕರಿಸುವಂತಹ ಯಾವುದೇ ಸೂಕ್ತ ಕಾರಣಗಳು ಈ ಪ್ರಕರಣದಲ್ಲಿ ಕಂಡುಬರುತ್ತಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಅಲ್ಲದೆ, ಪ್ರಕರಣದ ಆರಂಭದಿಂದಲೂ ಪೊಲೀಸರು, ಬಾಲಾಪರಾಧಿ ನ್ಯಾಯ ಮಂಡಳಿ, ಸರ್ಕಾರಿ ಅಭಿಯೋಜಕರು (ಪ್ರಾಸಿಕ್ಯೂಷನ್) ಮತ್ತು ಮೃತನ ಕುಟುಂಬಸ್ಥರು ಈ ಪ್ರಕರಣವನ್ನು ನಿಭಾಯಿಸಿದ ರೀತಿಯ ಬಗ್ಗೆಯೂ ಸೆಷನ್ಸ್ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಬಾಲಕನ ವಿರುದ್ಧ ಹೊರಿಸಲಾದ ಆರೋಪಗಳು ‘ಘೋರ’ (heinous) ಅಪರಾಧಗಳ ವ್ಯಾಪ್ತಿಗೆ ಬರದಿದ್ದರೂ ಎಫ್‌ಐಆರ್ ಏಕೆ ದಾಖಲಿಸಲಾಗಿದೆ ಎಂದು ನ್ಯಾಯಾಲಯ ಪ್ರಶ್ನಿಸಿತ್ತು. ಅಪ್ರಾಪ್ತರು ಭಾಗಿಯಾದ ಇಂತಹ ಪ್ರಕರಣಗಳಲ್ಲಿ ಕಾನೂನಿನ ಅಡಿ ನಿಗದಿಪಡಿಸಲಾದ ‘ಮಕ್ಕಳ ಸ್ನೇಹಿ ತನಿಖಾ ವಿಧಾನ’ಗಳನ್ನು ಅನುಸರಿಸಬೇಕೇ ವಿನಃ, ನೇರವಾಗಿ ಎಫ್‌ಐಆರ್ ದಾಖಲಿಸುವ ಅಗತ್ಯವಿರಲಿಲ್ಲ ಎಂದು ನ್ಯಾಯಾಲಯ ಉಲ್ಲೇಖಿಸಿತ್ತು.

ಈ ಪ್ರಕರಣದ ಎಫ್‌ಐಆರ್‌ನಲ್ಲಿ ಆರೋಪಿ ಬಾಲಕನ ತಂದೆಯನ್ನೂ ಸಹ-ಆರೋಪಿಯನ್ನಾಗಿ ಹೆಸರಿಸಲಾಗಿದೆ. ಇವರು ಪ್ರಸ್ತುತ ತ್ರಿಶೂರ್ ಜಿಲ್ಲೆಯ ಇರಿಂಜಲಕುಡದ ‘ಮೋಟಾರು ವಾಹನ ಅಪಘಾತಗಳ ಕ್ಲೇಮುಗಳ ನ್ಯಾಯಮಂಡಳಿ’ಯಲ್ಲಿ (MACT) ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಕೇರಳ ಹೈಕೋರ್ಟ್ ಕಳೆದ ವಾರವಷ್ಟೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...