ಮೆಸ್ಸಿ ಕ್ರೀಡಾಂಗಣ ತೊರೆಯಲು ‘ಅಪ್ಪುಗೆ’ಯೇ ಕಾರಣ: ಆಯೋಜಕ

Date:

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ, ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಹಿರನಡೆದರು. ಅವರನ್ನು ಕೆಲವರು ಅಪ್ಪಿಕೊಂಡಿದ್ದರಿಂದ ಅವರು ಕೋಪಗೊಂಡು ಕ್ರೀಡಾಂಗಣ ತೊರೆದರು ಎಂದು ಕಾರ್ಯಕ್ರಮದ ಪ್ರಮುಖ ಆಯೋಜಕ ಸತಾದ್ರು ದತ್ತಾ ಹೇಳಿರುವುದಾಗಿ ವರದಿಯಾಗಿದೆ..

- Advertisement -

ಡಿಸೆಂಬರ್ 13 ರಂದು ಕೋಲ್ಕತ್ತಾದಲ್ಲಿ ಮೆಸ್ಸಿ ಅವರ ಪ್ರತಿಮೆ ಅನಾವರಣ ಮತ್ತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೆಸ್ಸಿಯನ್ನು ನೋಡಲು ಅಭಿಮಾನಿಗಳು ಸಾವಿರಾರು ರೂಪಾಯಿ ಹಣತೆತ್ತು, ಟಿಕೆಟ್ ಖರೀದಿಸಿ ಕ್ರೀಡಾಂಗಣಕ್ಕೆ ಬಂದಿದ್ದರು. ಆದರೆ, ಮೆಸ್ಸಿ ಅವರನ್ನು ಕೆಲವು ಪ್ರಭಾವಿಗಳು ಮತ್ತು ರಾಜಕಾರಣಿಗಳು ಸುತ್ತುವರಿದಿದ್ದರಿಂದ ಅವರನ್ನು ನೋಡಲಾಗದೆ,ಅಭಿಮಾನಿಗಳು ಆಕ್ರೋಶಸ ವ್ಯಕ್ತಪಡಿಸಿದ್ದರು. ಕ್ರೀಡಾಂಗಣದ ಕುರ್ಚಿಗಳನ್ನು ಮುರಿದು, ಹಾನಿ ಮಾಡಿದ್ದರು. ಅಂದಿನ ಅವ್ಯವಸ್ಥೆ ಕುರಿತು ತನಿಖೆ ನಡೆಸಲು ಸರ್ಕಾರವು ಎಸ್‌ಐಟಿ ರಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಪ್ರಕರಣದ ತನಿಖೆ ಆರಂಭಿಸಿರುವ ಎಸ್‌ಐಟಿ, ಪ್ರಮುಖ ಆಯೋಜಕ ಸುತಾದ್ರು ದತ್ತಾ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದೆ. ಈ ವೇಳೆ, “ಕೆಲವರು ಮೆಸ್ಸಿ ಅವರನ್ನು ಟಚ್ ಮಾಡಿದ್ದರಿಂದ ಮತ್ತು ಅಪ್ಪಿಕೊಂಡಿದ್ದರಿಂದ ಅವರು ಆಕ್ರೋಶಗೊಂಡು ಅಲ್ಲಿಂದ ತೆರಳಿದರು” ಎಂದು ದತ್ತಾ ಹೇಳಿದ್ದಾರೆಂದು ಪಿಟಿಐ ವರದಿ ಮಾಡಿದೆ.

“ಮೆಸ್ಸಿ ಅವರಿಗೆ ತಮ್ಮ ಬೆನ್ನನ್ನು ಮುಟ್ಟುವುದು ಅಥವಾ ಅಪ್ಪಿಕೊಳ್ಳುವುದು ಇಷ್ಟವಿಲ್ಲ. ಈ ಬಗ್ಗೆ ಅವರೊಂದಿಗೆ ಬಂದಿದ್ದ ವಿದೇಶಿ ಭದ್ರತಾ ಅಧಿಕಾರಿಗಳು ಮುಂಚಿತವಾಗಿಯೇ ತಿಳಿಸಿದ್ದರು” ಎಂದು ದತ್ತಾ ವಿವರಿಸಿದ್ದಾರೆ.

“ಅತ್ಯಂತ ಪ್ರಭಾವಿ ವ್ಯಕ್ತಿಯೊಬ್ಬರು ಕ್ರೀಡಾಂಗಣಕ್ಕೆ ಬಂದ ಬಳಿಕ ಗ್ರೌಂಡ್ ಪಾಸ್‌ಗಳ ಸಂಖ್ಯೆಯನ್ನು ಮೂರುಪಟ್ಟು ಹೆಚ್ಚಿಸಲಾಯಿತು. ಹೀಗಾಗಿ ಕಾರ್ಯಕ್ರಮವು ಅವ್ಯವಸ್ಥೆಗೊಂಡಿತು. ಕಾರ್ಯಕ್ರಮದ ಸಂಪೂರ್ಣ ಫ್ಲೋಚಾರ್ಟ್ ತೊಂದರೆಗೀಡಾಯಿತು. ಅಭಿಮಾನಿಗಳನ್ನು ನಿಯಂತ್ರಿಸಲು ತಮಗೆ ಸಾಧ್ಯವಾಗಲಿಲ್ಲ ಎಂಬುದಾಗಿ ದತ್ತಾ ವಿವರಿಸಿದ್ದಾರೆ” ಎಂದು ಎಸ್‌ಐಟಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

“ಜನಸಮೂಹವನ್ನು ನಿಯಂತ್ರಿಸಲು ಪದೇ ಪದೇ ಸಾರ್ವಜನಿಕ ಘೋಷಣೆಗಳನ್ನು ಮಾಡಿದರೂ, ಯಾವುದೇ ಪರಿಣಾಮ ಬೀರಲಿಲ್ಲ. ಮೆಸ್ಸಿಯನ್ನು ಸುತ್ತುವರೆದು ಅಪ್ಪಿಕೊಂಡ ರೀತಿ ವಿಶ್ವಕಪ್ ವಿಜೇತ ಫುಟ್ಬಾಲ್ ಆಟಗಾರನಿಗೆ ಒಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ದತ್ತ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...