ಮೆಸ್ಸಿ ಕಾರ್ಯಕ್ರಮ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ರಾಜೀನಾಮೆ

Date:

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಲಿಯೋನೆಲ್ ಮೆಸ್ಸಿ ಅವರ GOAT ಟೂರ್ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ಅವ್ಯವಸ್ಥೆ ಮತ್ತು ಗಲಾಟೆ ಕುರಿತು ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಆದೇಶಿಸಿದೆ. ಈ ನಡುವೆ, ಘಟನೆಯ ನೈತಿಕ ಹೊಣೆಹೊತ್ತು ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

- Advertisement -

ಅವ್ಯವಸ್ಥೆಗೆ ಸಂಬಂಧಿಸಿದಂತೆ ಬಿಸ್ವಾಸ್‌ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿವೆ. ಈ ಬೆನ್ನಲ್ಲೇ, ಬಿಸ್ವಾಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೈಬರಹದಲ್ಲಿ ರಾಜೀನಾಮೆ ಪತ್ರ ಬರೆದಿದ್ದಾರೆ. “ಘಟನೆ ಕುರಿತು ಮುಕ್ತ ಮತ್ತು ನ್ಯಾಯಯುತ ತನಿಖೆ ನಡೆಯುವುದನ್ನು ಖಾತ್ರಿಪಡಿಸಲು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ. ಅವರ ರಾಜೀನಾಮೆಯನ್ನು ಮಮತಾ ಬ್ಯಾನರ್ಜಿ ಅಂಗೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಶನಿವಾರ ಬೆಳಗ್ಗೆ, ಕೋಲ್ಕತ್ತಾದ ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಮೆಸ್ಸಿ ಅವರ 2 ಗಂಟೆಗಳ ಕಾರ್ಯಕ್ರಮ ಅಯೋಜಿಸಲಾಗಿತ್ತು. ಮೆಸ್ಸಿ ಅವರನ್ನು ಕ್ರೀಡಾಂಗಣದಲ್ಲಿ ಸುತ್ತು ಹಾಕುವಾಗ, ಅವರನ್ನು ಹಲವು ರಾಜಕಾರಣಿಗಳು ಮತ್ತು ಪ್ರಭಾವಿಗಳು ಸುತ್ತುವರಿದಿದ್ದರು. ಪರಿಣಾಮ, ಕ್ರೀಡಾಂಗಣಕ್ಕೆ ಟಿಕೆಟ್‌ ಪಡೆದು ಬಂದಿದ್ದ ಅಭಿಮಾನಿಗಳು ಮೆಸ್ಸಿಯನ್ನು ನೋಡಲು ಸಾಧ್ಯವಾಗದೆ ಗಲಾಟೆ ನಡೆಸಿದರು. ಈ ಬೆನ್ನಲ್ಲೇ, ಕ್ರೀಡಾಂಗಣದ ಕಾರ್ಯಕ್ರಮವು ಕೇವಲ 20 ನಿಮಿಷದಲ್ಲೇ ಮೊಟಕುಗೊಂಡಿತ್ತು. ಮೆಸ್ಸಿ ಕ್ರೀಡಾಂಗಣದಲ್ಲಿ ಹೊರಹೋದರು. ಕೋಪಗೊಂಡ ಅಭಿಮಾನಿಗಳು ಸ್ಟೇಡಿಯಂನಲ್ಲಿದ್ದ ಕುರ್ಚಿಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದರು.

ಈ ಲೇಖನ ಓದಿದ್ದೀರಾ?: ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ಘಟನೆ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಅಸಿಮ್ ಕುಮಾರ್ ರಾಯ್ ನೇತೃತ್ವದ ವಿಚಾರಣಾ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಪ್ರಾಥಮಿಕ ವರದಿ ಸಲ್ಲಿಸಿದ್ದು, ಸರ್ಕಾರವು ಹಿರಿಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅಂತೆಯೇ, ಬಿಧಾನ್ನಗರ ಪೊಲೀಸ್ ಮುಖ್ಯಸ್ಥರು ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೂ ನೋಟಿಸ್‌ ನೀಡಲಾಗಿದ್ದು, 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ಉಪ ಪೊಲೀಸ್ ಆಯುಕ್ತ ಅನೀಶ್ ಸರ್ಕಾರ್ ಅವರನ್ನು ಅಮಾನತು ಮಾಡಲಾಗಿದೆ.

ಮಮತಾ ಅವರ ಅತ್ಯಂತ ವಿಶ್ವಾಸಾರ್ಹರೂ, ಟಿಎಂಸಿಯ ಪ್ರಭಾವಿ ನಾಯಕರೂ ಆಗಿರುವ ಬಿಸ್ವಾಸ್ ಅವರ ರಾಜೀನಾಮೆಯು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಪ್ರಭಾವ ಬೀರುವ ಸಾಧ್ಯತೆ ಇದೆ. ಈ ರಾಜೀನಾಮೆಯನ್ನು ನೈತಿಕತೆ ಮತ್ತು ಹೊಣೆಗಾರಿಕೆಯನ್ನು ಪ್ರದರ್ಶಿಸಿದ ಪಕ್ಷವೆಂದು ಜನರ ಗಮನ ಸೆಳೆಯಲೂ ಟಿಎಂಸಿಗೆ ಇದು ಅವಕಾಶ ನೀಡಬಹುದು ಎನ್ನಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...