​’ಗ್ರಾಮೀಣ ಭಾಗದಲ್ಲಿ ಮನರೇಗಾ ಅದ್ಭುತ ಕೆಲಸ ಮಾಡಿದೆ’: ಉದ್ಯೋಗ ಖಾತರಿ ಯೋಜನೆ ಬೆನ್ನು ತಟ್ಟಿದ ಸುಪ್ರೀಂ ಪೀಠ

Date:

​’ಮನರೇಗಾ’ (MGNREGA) ಬದಲಿಗೆ ಜಾರಿಗೆ ಬಂದಿರುವ ‘ವಿಬಿ-ಜಿ ರಾಮ್ ಜಿ’ (VB-G RAM G) ನಂತಹ ಗ್ರಾಮೀಣ ಉದ್ಯೋಗ ಯೋಜನೆಗಳು ಅತ್ಯುತ್ತಮ ಉದ್ದೇಶಗಳನ್ನು ಹೊಂದಿವೆ. ಆದರೆ, ಇವುಗಳನ್ನು ಉದ್ಯೋಗದ ‘ಮೂಲಭೂತ ಹಕ್ಕು’ ಎಂಬ ಸ್ಥಾನಮಾನಕ್ಕೆ ಏರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ. ಕೆಲಸ ಮಾಡುವ ಹಕ್ಕು ಕೇವಲ ಪ್ರಜಾಸತ್ತಾತ್ಮಕ ಆಕಾಂಕ್ಷೆಯಾಗಿದೆಯೇ ಹೊರತು ಮೂಲಭೂತ ಹಕ್ಕಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.

- Advertisement -

​ಸಾಮಾಜಿಕ ಕಾರ್ಯಕರ್ತರಾದ ಅರುಣಾ ರಾಯ್, ನಿಖಿಲ್ ಡೇ ಮತ್ತು ಲಲಿತ್ ಮಾಥುರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ವೇಳೆ ಈ ಮಹತ್ವದ ವೀಕ್ಷಣೆ ಹೊರಬಿದ್ದಿದೆ. ಸಿಜೆಐ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ.ಮೋಹನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಕುರಿತು ಅರ್ಜಿದಾರರ ಪರ ವಕೀಲ ಪ್ರಶಾಂತ್ ಭೂಷಣ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

​”ಸಂವಿಧಾನವೂ ಸಹ ಉದ್ಯೋಗವನ್ನು ಮೂಲಭೂತ ಹಕ್ಕನ್ನಾಗಿ ಮಾಡಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಇದು ಸಂವಿಧಾನದ ಭಾಗ-4ರ (ರಾಜ್ಯ ನಿರ್ದೇಶಕ ತತ್ವಗಳು) ಅಡಿಯಲ್ಲಿ ಬರುವ ಪ್ರಜಾಸತ್ತಾತ್ಮಕ ಆಕಾಂಕ್ಷೆಯಾಗಿದೆ. ಸರ್ಕಾರವು ತನ್ನ ನೀತಿಯ ಮೂಲಕ ಕೆಲಸವನ್ನು ಖಾತರಿಪಡಿಸುತ್ತದೆ. ಹಾಗೆಂದ ಮಾತ್ರಕ್ಕೆ, ಈ ಯೋಜನೆಯನ್ನು ಮೂಲಭೂತ ಹಕ್ಕಿಗೆ ಸಮಾನವಾಗಿ ಪರಿಗಣಿಸಬಹುದೇ?” ಎಂದು ನ್ಯಾಯಪೀಠವು ವಿಚಾರಣೆ ವೇಳೆ ಪ್ರಶ್ನಿಸಿದೆ.

​ಈ ಗ್ರಾಮೀಣ ಉದ್ಯೋಗ ಯೋಜನೆಯನ್ನು ಸಂವಿಧಾನದ 21ನೇ ವಿಧಿಯಡಿ ‘ಬದುಕುವ ಹಾಗೂ ವೈಯಕ್ತಿಕ ಸ್ವಾತಂತ್ರ್ಯದ’ ಮೂಲಭೂತ ಹಕ್ಕಾಗಿ ಪರಿಗಣಿಸಬೇಕು ಎಂದು ವಕೀಲ ಪ್ರಶಾಂತ್ ಭೂಷಣ್ ವಾದಿಸಿದ್ದರು. ಕನಿಷ್ಠ ವೇತನ ಮತ್ತು ಸೂಕ್ತ ಸೌಲಭ್ಯಗಳಿಲ್ಲದೆ ದುಡಿಸಿಕೊಳ್ಳುವುದು ಜೀತಪದ್ಧತಿ ಹಾಗೂ ಕಾರ್ಮಿಕರ ಶೋಷಣೆಗೆ ಸಮಾನ. ಹೀಗಾಗಿ ಉದ್ಯೋಗಿಗಳಿಗೆ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಖಾತರಿಪಡಿಸಬೇಕು ಎಂದು ಅವರು ನ್ಯಾಯಾಲಯವನ್ನು ಆಗ್ರಹಿಸಿದ್ದರು.

​ನರೇಗಾ ಯೋಜನೆಯು ಗ್ರಾಮೀಣ ಭಾಗದಲ್ಲಿ ಅದ್ಭುತ ಕೆಲಸ ಮಾಡಿದೆ ಎಂಬುದನ್ನು ಮುಕ್ತಕಂಠದಿಂದ ಶ್ಲಾಘಿಸಿದ ಸಿಜೆಐ, “ಇದು ಉಚಿತ ಕೊಡುಗೆಯೂ ಅಲ್ಲ, ಶೋಷಣೆಯೂ ಅಲ್ಲ” ಎಂದರು. ಆದರೆ, ನ್ಯಾಯಾಲಯದ ನಿರ್ದೇಶನದ ಮೂಲಕ ಕನಿಷ್ಠ ವೇತನವನ್ನು ಕಡ್ಡಾಯಗೊಳಿಸುವುದು ಸರಿಯಲ್ಲ. ವೇತನವು ಕೆಲಸದ ಸ್ವರೂಪ ಹಾಗೂ ಸ್ಥಳೀಯ ಪರಿಸ್ಥಿತಿಗಳನ್ನು ಅವಲಂಬಿಸಿರುವುದರಿಂದ, ಇಂತಹ ಆದೇಶವು ಒಟ್ಟಾರೆ ಉದ್ಯೋಗಾವಕಾಶಗಳನ್ನೇ ಕುಗ್ಗಿಸುವ ಅಪಾಯವಿದೆ ಎಂದು ಪೀಠವು ಎಚ್ಚರಿಕೆ ನೀಡಿದೆ.

​ಈ ಅರ್ಜಿಯನ್ನು 2020ರಲ್ಲಿ ಸಲ್ಲಿಸಲಾಗಿತ್ತು. ಇದೀಗ ನರೇಗಾ ಕಾಯ್ದೆಯ ಬದಲಿಗೆ ಹೊಸದಾಗಿ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ಜಾರಿಯಲ್ಲಿರುವುದರಿಂದ, ಈ ಹೊಸ ಕಾನೂನಿನ ನಿಬಂಧನೆಗಳು ಮತ್ತು ನವೀಕೃತ ಅಂಕಿ-ಅಂಶಗಳನ್ನು ಉಲ್ಲೇಖಿಸಿ ಹೊಸ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ. ಇದಕ್ಕೆ ಸಮ್ಮತಿಸಿದ ಪ್ರಶಾಂತ್ ಭೂಷಣ್, ಕಾರ್ಮಿಕರ ಶಾಸನಬದ್ಧ ಕನಿಷ್ಠ ವೇತನದ ಹಕ್ಕಿಗೆ ಸಂಬಂಧಿಸಿದಂತೆ ಸಮಗ್ರ ದತ್ತಾಂಶಗಳೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...