ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

Date:

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯು ಜಾಗತಿಕ ಮಟ್ಟದಲ್ಲಿ ಮಹತ್ವದ ಬದಲಾವಣೆಗಳಿಗೆ ಕಾರಣವಾಗುತ್ತಿದೆ. ಅಮೆರಿಕವು ಇರಾನ್‌ ಮೇಲಿನ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಡಿಸಿದ ಬೆನ್ನಲ್ಲೇ, ಭಾರತ ಮತ್ತು ಇತರ ಏಷ್ಯಾದ ತೈಲ ಸಂಸ್ಕರಣಾ ಕಂಪನಿಗಳು ಇರಾನ್‌ನಿಂದ ಕಚ್ಚಾ ತೈಲ ಖರೀದಿಸಲು ಮುಂದಾಗಿದೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಈಗಾಗಲೇ ಸಾಗಣೆಯಲ್ಲಿರುವ ಇರಾನ್ ತೈಲವನ್ನು ಖರೀದಿಸಲು ಟ್ರಂಪ್ ಆಡಳಿತವು 30 ದಿನಗಳ ವಿನಾಯಿತಿಯನ್ನು ನೀಡಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸ್ಸನ್ ಶುಕ್ರವಾರ ತಿಳಿಸಿದ್ದಾರೆ. ಭಾರತೀಯ ತೈಲ ಕಂಪನಿಗಳು ಈ ಕುರಿತು ಸರ್ಕಾರದ ಮಾರ್ಗಸೂಚಿಗಳು ಮತ್ತು ವಾಷಿಂಗ್ಟನ್‌ನಿಂದ ಪಾವತಿ ನಿಯಮಗಳ ಸ್ಪಷ್ಟನೆಗಾಗಿ ಕಾಯುತ್ತಿವೆ. ಇದಕ್ಕೂ ಮುನ್ನ, ಅಮೆರಿಕ ನೀಡಿದ್ದ ಅಲ್ಪಾವಧಿಯ ವಿನಾಯಿತಿಯನ್ನು ಬಳಸಿಕೊಂಡು ಭಾರತವು ರಷ್ಯಾದ ತೈಲವನ್ನು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮತ್ತೊಂದೆಡೆ, ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ಯುದ್ಧ ಸಾರಿ ಮೂರು ವಾರಗಳು ಕಳೆಯುತ್ತಿದ್ದು, ಇದರ ಬಿಸಿ ದುಬೈನ ಸ್ಥಿರಾಸ್ತಿ (ರಿಯಲ್ ಎಸ್ಟೇಟ್) ಮಾರುಕಟ್ಟೆಗೆ ತಟ್ಟಲಾರಂಭಿಸಿದೆ. ವಹಿವಾಟು ಪ್ರಮಾಣದಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಕೆಲವು ರಿಯಲ್ ಎಸ್ಟೇಟ್ ಏಜೆಂಟ್‌ಗಳು ಬೆಲೆ ಕಡಿತದ ವರದಿ ನೀಡುತ್ತಿದ್ದಾರೆ. ಇಸ್ರೇಲ್, ಅಮೆರಿಕದ ಸೇನಾ ನೆಲೆಗಳು ಮತ್ತು ಯುಎಇ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಮೇಲೆ ಇರಾನ್ ನಡೆಸಿದ ಪ್ರತಿದಾಳಿಗಳಿಂದಾಗಿ, ಜಾಗತಿಕ ಹೂಡಿಕೆದಾರರ ಪಾಲಿಗೆ ‘ಸುರಕ್ಷಿತ ತಾಣ’ ಎಂಬ ದುಬೈನ ಖ್ಯಾತಿಗೆ ಭಾರಿ ಧಕ್ಕೆಯಾಗಿದೆ.

ತೈಲ ಬೆಲೆ ಏರಿಕೆಯ ಭೀತಿಯು ವಿಮಾನಯಾನ ವಲಯವನ್ನೂ ತೀವ್ರವಾಗಿ ಕಾಡುತ್ತಿದೆ. ಯುನೈಟೆಡ್ ಏರ್‌ಲೈನ್ಸ್ ಸಿಇಒ ಸ್ಕಾಟ್ ಕಿರ್ಬಿ ಅವರು ತಮ್ಮ ಸಿಬ್ಬಂದಿಗೆ ಬರೆದ ಪತ್ರದಲ್ಲಿ,2027ರ ಅಂತ್ಯದವರೆಗೆ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಕ್ಕಿಂತ ಹೆಚ್ಚಿರುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 175 ಡಾಲರ್ ವರೆಗೆ ತಲುಪುವ ಸಾಧ್ಯತೆಯ ಬಗ್ಗೆಯೂ ವಿಮಾನಯಾನ ಸಂಸ್ಥೆ ಎಚ್ಚರಿಕೆ ವಹಿಸಿದೆ. ಫೆಬ್ರವರಿ ಅಂತ್ಯದಿಂದ ವಿಮಾನಯಾನ ಇಂಧನ ಬೆಲೆಗಳು ಬಹುತೇಕ ದುಪ್ಪಟ್ಟಾಗಿದ್ದು, ಹೀಗೆಯೇ ಮುಂದುವರಿದರೆ ಸಂಸ್ಥೆಯ ವಾರ್ಷಿಕ ಇಂಧನ ವೆಚ್ಚವು ಹನ್ನೊಂದು ಬಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಬಹುದು. ಈ ಹಿನ್ನೆಲೆಯಲ್ಲಿ ಕಡಿಮೆ ಲಾಭದಾಯಕ ಮಾರ್ಗಗಳನ್ನು ಕಡಿತಗೊಳಿಸಲು ಸಂಸ್ಥೆ ಯೋಜಿಸಿದ್ದು, ಟೆಲ್ ಅವಿವ್ ಮತ್ತು ದುಬೈಗೆ ವಿಮಾನ ಹಾರಾಟ ಸ್ಥಗಿತಗೊಳಿಸುವುದನ್ನು ಮುಂದುವರಿಸಲಿದೆ.

ಇದನ್ನು ಓದಿದ್ದೀರಾ? ಟ್ರಂಪ್‌ಗೆ ಚಿತ್ತಭ್ರಮೆಯೇ?; ಅಮೆರಿಕ ಅಧ್ಯಕ್ಷರ ಮಾನಸಿಕ ಆರೋಗ್ಯದ ಸುತ್ತ ಅನುಮಾನದ ಹುತ್ತ

ಈ ಎಲ್ಲಾ ಉದ್ವಿಗ್ನತೆಗಳ ನಡುವೆಯೂ, ಇರಾನ್ ಕೆಲವು ಸರಕು ಹಡಗುಗಳಿಗೆ ಹಾರ್ಮುಜ್ ಜಲಸಂಧಿಯನ್ನು ದಾಟಲು ಸೀಮಿತ ಅವಕಾಶ ನೀಡಿದೆ. ಮಾರ್ಚ್ 2ರ ನಂತರ ಮೊದಲ ಬಾರಿಗೆ, ಗ್ರೀಕ್ ಒಡೆತನದ ಬೃಹತ್ ಹಡಗೊಂದು ತನ್ನ ಆಟೋಮ್ಯಾಟಿಕ್ ಐಡೆಂಟಿಫಿಕೇಶನ್ ಸಿಸ್ಟಮ್ (AIS) ಆನ್ ಇಟ್ಟುಕೊಂಡೇ ಜಲಸಂಧಿ ದಾಟಲು ಇರಾನ್ ಅನುಮತಿ ನೀಡಿದೆ ಎಂದು ‘ಲಾಯ್ಡ್ಸ್ ಲಿಸ್ಟ್’ ಮತ್ತು ‘ಫೈನಾನ್ಷಿಯಲ್ ಟೈಮ್ಸ್’ ವರದಿ ಮಾಡಿವೆ. ಮಾರ್ಚ್ 15 ಮತ್ತು 16ರ ನಡುವೆ ಕನಿಷ್ಠ ಆರು ಹಡಗುಗಳು ಇರಾನ್‌ನ ಖುಜೆಸ್ತಾನ್ ಪ್ರಾಂತ್ಯದ ಖೊಮೇನಿ ಬಂದರಿನಲ್ಲಿ ಸರಕುಗಳನ್ನು ಇಳಿಸಿ, ಹಾರ್ಮುಜ್ ಜಲಸಂಧಿಯನ್ನು ದಾಟಿವೆ.

ಇದೇ ವೇಳೆ, ಹಾರ್ಮುಜ್ ಜಲಸಂಧಿಯನ್ನು ಮರುತೆರೆಯಲು ಸಹಾಯ ಮಾಡಲು ವಿಶ್ವಸಂಸ್ಥೆ ಸಿದ್ಧವಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. 2022ರಲ್ಲಿ ಕಪ್ಪು ಸಮುದ್ರದ ಮೂಲಕ ಉಕ್ರೇನಿಯನ್ ಧಾನ್ಯ ಸಾಗಣೆಗೆ ಮಾಡಿಕೊಂಡ ಒಪ್ಪಂದದ ಮಾದರಿಯಲ್ಲೇ, ಹಾರ್ಮುಜ್ ಜಲಸಂಧಿಯಲ್ಲೂ ಹಿಂದಿನಂತಹುದೇ ವಾತಾವರಣ ನಿರ್ಮಿಸಲು ಕೊಲ್ಲಿ ರಾಷ್ಟ್ರಗಳು ಮತ್ತು ಯುರೋಪಿಯನ್ ಕೌನ್ಸಿಲ್‌ನೊಂದಿಗೆ ವಿಶ್ವಸಂಸ್ಥೆಯು ಮಾತುಕತೆ ನಡೆಸುತ್ತಿದೆ ಎಂದು ಅವರು ‘ಪೊಲಿಟಿಕೊ’ಗೆ ನೀಡಿದ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...