ಅಪಘಾತದ ನಂತರ ಗೆಳತಿಗೆ 40 ಬಾರಿ ಕರೆ ಮಾಡಿದ್ದ ಮುಂಬೈ ಹಿಟ್ ಆ್ಯಂಡ್ ರನ್ ಪ್ರಕರಣದ ಆರೋಪಿ

Date:

ಬಿಎಂಡಬ್ಲ್ಯು ಕಾರಿನ ಮೂಲಕ 45 ವರ್ಷದ ಮಹಿಳೆಯೊಬ್ಬರ ಸಾವಿಗೆ ಕಾರಣನಾಗಿದ್ದ ಮುಂಬೈ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾ ಜುಲೈ 7 ರಂದು ಅಪಘಾತ ನಡೆಸಿದ ನಂತರ ತನ್ನ ಗೆಳತಿಗೆ 40 ಬಾರಿ ಕರೆ ಮಾಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

- Advertisement -

ಅಪಘಾತ ನಡೆಸಿದ ನಂತರ ಬಂಧನವಾಗುವುದಕ್ಕೂ ಮುನ್ನ ಮಿಹಿರ್‌ ಶಾ ಮಹಾರಾಷ್ಟ್ರದ ಹಲವು ಕಡೆ ಸಂಚರಿಸಿ ರೆಸಾರ್ಟ್‌ಗಳಲ್ಲಿ ಅಡಗಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅಪಘಾತದ ಬಗ್ಗೆ ತಿಳಿದ ನಂತರ ಮಿಹಿರ್‌ ಶಾ ಗೆಳತಿ ಆರೋಪಿಯ ಸಹೋದರಿಗೆ ಕರೆ ಮಾಡಿದ್ದಾರೆ. ನಂತರ ಮಿಹಿರ್‌ನನ್ನು ಸಹೋದರಿ ಗೊರೆಗಾವ್‌ನಿಂದ ಬೊರಿವಾಲಿಯ ಮನೆಗೆ ಕರೆದೊಯ್ದಿದ್ದಾರೆ.

ಮನೆಗೆ ಬಂದ ನಂತರ ಮಿಹಿರ್‌ ಶಾ ತನ್ನ ಸ್ನೇಹಿತನೊಂದಿಗೆ ಥಾಣೆಯ ರೆಸಾರ್ಟ್‌ಗೆ ತೆರಳಿದ. ಕೆಲವು ಗಂಟೆಗಳ ನಂತರ ಮುರ್ಬಾದ್‌ನ ಮತ್ತೊಂದು ರೆಸಾರ್ಟ್‌ಗೆ ಹೋಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣ ಅಕ್ರಮ ವರ್ಗಾವಣೆ ಕರಾಳ ಕಾಯಿದೆ; ಮೇಲ್ಮನವಿಗಳ ವಿಲೇವಾರಿ ಮಾಡಲಿ ಸುಪ್ರೀಮ್ ಕೋರ್ಟ್‌

ಒಂದು ದಿನದ ನಂತರ ಆರೋಪಿ ಮತ್ತು ಆತನ ಸ್ನೇಹಿತ ಶಹಾಪುರ್‌ನ ಬೇರೊಂದು ರೆಸಾರ್ಟ್‌ಗೆ ತೆರಳಿದರು. ಅಂತಿಮವಾಗಿ 72 ಗಂಟೆಯ ನಂತರ ಮಿಹಿರ್ ಶಾನನ್ನು ಬಂಧಿಸಲಾಯಿತು. ಬಂಧನಕ್ಕೂ 15 ನಿಮಿಷ ಮುನ್ನ ಆರೋಪಿಯ ಫೋನ್‌ ಸ್ವಿಚ್‌ ಆಫ್ ಆಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈನ ವಾರ್ಲೆ ಪ್ರದೇಶದಲ್ಲಿ ಜುಲೈ 7ರಂದು ಮೀನು ಮಾರಾಟಗಾರರಾದ ದಂಪತಿ ಪ್ರದೀಪ್‌ ನಖ್ವಾ ಹಾಗೂ ಕಾವೇರಿ ನಖ್ವಾ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಮಿಹಿರ್ ಶಾ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದಿದೆ. ಸ್ಕೂಟರ್‌ನಿಂದ ಪ್ರದೀಪ್‌ ನಕ್ವಾ ಅವರು ಕೆಳಗೆ ಬಿದ್ದ ನಂತರ ಕಾವೇರಿ ನಖ್ವಾ ಅವರು ಕಾರಿನಡಿ ಸಿಲುಕಿದ್ದಾರೆ. ಕಾವೇರಿ ಅವರನ್ನು 100 ಮೀಟರ್‌ವರೆಗೂ ಕಾರು ಎಳೆದೊಯ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಬಿಎಂಡಬ್ಲ್ಯು ಕಾರು ಆರೋಪಿ ತಂದೆ ಏಕ್‌ನಾಥ್ ಶಿಂಧೆ ಬಣದ ನಾಯಕ ರಾಜೇಶ್ ಶಾ ಹೆಸರಿನಲ್ಲಿ ನೋಂದಣಿಯಾಗಿದ್ದು, ಪೊಲೀಸರು ಮೊದಲು ರಾಜೇಶ್ ಶಾ ಹಾಗೂ ಚಾಲಕನನ್ನು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...