ಹೊತ್ತಿ ಉರಿದ ಮಿನಿ ಬಸ್; ನಾಲ್ವರು ಸಜೀವ ದಹನ

Date:

ಖಾಸಗಿ ಕಂಪನಿಯೊಂದರ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಜೀವಂತವಾಗಿ ಸುಟ್ಟುಹೋಗಿರುವ ದುರ್ಘಟನೆ ಮಹಾರಾಷ್ಟ್ರದ ಪುಣೆ ಬಳಿ ನಡೆದಿದೆ.

- Advertisement -

ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬುಧವಾರ ಬೆಳಗ್ಗೆ 7:30ರ ಸುಮಾರಿಗೆ ಘಟನೆ ನಡೆದಿದೆ. ಸಾವನ್ನಪ್ಪಿದ ಉದ್ಯೋಗಿಗಳು ‘ವ್ಯೋಮಾ ಗ್ರಾಫಿಕ್ಸ್‌’ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಂಪನಿಗೆ ಸೇರಿದ ಮಿನಿ ಬಸ್‌ ಕಂಪನಿಯ 12 ಉದ್ಯೋಗಿಗಳನ್ನು ವಾರ್ಜೆಯಿಂದ ಹಿಂಜೆವಾಡಿ ಕರೆದೊಯ್ಯುತ್ತಿತ್ತು. ಈ ವೇಳೆ, ಚಾಲಕನ ಪಾದದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಅದನ್ನು ಗಮನಿಸಿದ ಚಾಲಕ ಕೂಡಲೇ ವಾಹನವನ್ನು ನಿಲ್ಲಿಸಿದ್ದಾರೆ. ವಾಹನದಲ್ಲಿದ್ದ ಕೆಲವರು ಮುಂಭಾಗದ ಬಾಗಿಲಿನಿಂದ ತಕ್ಷಣ ಇಳಿದಿದ್ದಾರೆ. ಆದರೆ, ಹಿಂಭಾಗದಲ್ಲಿ ಕುಳಿತಿದ್ದವರು ತುರ್ತು ಬಾಗಿಲನ್ನು ತೆರೆಯಲು ಯತ್ನಿಸಿದ್ದಾರೆ. ಆದರೆ, ಬಾಗಿಲು ತೆರೆದುಕೊಂಡಿಲ್ಲ ಎಂದು ವರದಿಯಾಗಿದೆ.

ತುರ್ತು ಬಾಗಿಲು ತೆರೆದುಕೊಳ್ಳಲ ಕಾರಣ, ವಾಹನದಲ್ಲಿದ್ದ ಉದ್ಯೋಗಿಗಳಿಗೆ ಬೆಂಕಿ ತಗುಲಿದೆ. ನಾಲ್ವರು ಜೀವಂತವಾಗಿ ಸುಟ್ಟುಹೋಗಿದ್ದಾರೆ. ಉಳಿದ ಐವರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಬೀದರ್‌ನಲ್ಲೂ ಮತ್ತೊಂದು ಘಟನೆ

ತಾಪಮಾನದ ಕಾರಣಕ್ಕೆ ಬೆಂಕಿ ಹೊತ್ತಿಕೊಂಡು ಕೆಎಸ್‌ಆರ್‌ಟಿಸಿ ಬಸ್‌ ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನಲ್ಲಿ ನಡೆದಿದೆ. ಬೀದರ್‌ನಿಂದ ಔರಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌, ಔರಾದ್‌ ತಾಲೂಕಿನ ಕಪ್ಪಿಕೆರೆ ಗ್ರಾಮದ ಬಳಿ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮೊದಲಿಗೆ ಎಂಜಿನ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಇಡೀ ಬಸ್‌ಗೆ ಬೆಂಕಿ ವ್ಯಾಪಿಸಿದೆ. ಬಸ್‌ ಸಂಪೂರ್ಣವಾಗಿ ಸುಟ್ಟುಹೋಗಿದೆ.

ಬಸ್‌ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು. ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್‌ ನಲ್ಲಿಸಿದ್ದು, ಪ್ರಯಾಣಿಕರನ್ನು ಬಸ್‌ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಬಸ್‌ನಲ್ಲಿದ್‌ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...