ರಾಜೌರಿಯಲ್ಲಿ ಎಲ್‌ಒಸಿ ದಾಟಿ ಬಂದ ಪಾಕ್ ಆಕ್ರಮಿತ ಕಾಶ್ಮೀರದ ಅಪ್ರಾಪ್ತೆ ಬಂಧನ

Date:

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯನ್ನು (LoC) ದಾಟಿ ಭಾರತೀಯ ಗಡಿಯೊಳಗೆ ಪ್ರವೇಶಿಸಿದ್ದ ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (PoJK) 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳನ್ನು ಭಾರತೀಯ ಸೇನೆಯ ಯೋಧರು ವಶಕ್ಕೆ ಪಡೆದಿದ್ದಾರೆ.

- Advertisement -

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ವಲಯದಲ್ಲಿ ಎಲ್‌ಒಸಿ ಸಮೀಪ ಅನುಮಾನಾಸ್ಪದವಾಗಿ ಚಲಿಸುತ್ತಿದ್ದ ಬಾಲಕಿಯನ್ನು ಗಸ್ತು ತಿರುಗುತ್ತಿದ್ದ ಭಾರತೀಯ ಸೇನೆಯ ಯೋಧರು ತಡೆದು ವಶಕ್ಕೆ ಪಡೆದಿದ್ದಾರೆ. ಬಂಧಿತ ಅಪ್ರಾಪ್ತ ಬಾಲಕಿಯನ್ನು ಮಹಮ್ಮದ್ ಅಜೀಮ್ ಎಂಬವರ ಅವರ ಪುತ್ರಿ ಸಾಮಿಯಾ ಅಜೀಮ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಇದನ್ನೂ ಓದಿ: ಭಾರೀ ಪ್ರತಿಭಟನೆ: ಅಶಾಂತಿಯ ನಡುವೆಯೇ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಎರಡನೇ ಹಂತದ ಮತದಾನ!

ಪ್ರಾಥಮಿಕ ವಿಚಾರಣೆ ನಡೆಸಿದ ಸೇನಾ ಪಡೆಗಳು, ಬಳಿಕ ಮುಂದಿನ ಕಾನೂನು ಕ್ರಮ ಹಾಗೂ ಕೂಲಂಕುಷ ವಿಚಾರಣೆಗಾಗಿ ಬಾಲಕಿಯನ್ನು ನೌಶೇರಾ ಪೊಲೀಸರಿಗೆ ಒಪ್ಪಿಸಿವೆ. ವಿಚಾರಣೆ ವೇಳೆಯಲ್ಲಿ ತಾನು ದಾರಿ ತಪ್ಪಿ ಅಕಸ್ಮಾತ್ತಾಗಿ ಭಾರತೀಯ ಗಡಿಯೊಳಗೆ ಪ್ರವೇಶಿಸಿರುವುದಾಗಿ ಬಾಲಕಿ ತಿಳಿಸಿದ್ದಾಳೆ.

ಆದಾಗ್ಯೂ, ಗಡಿಭಾಗದಲ್ಲಿ ಭದ್ರತಾ ಕಾಳಜಿ ಹೆಚ್ಚಿರುವುದರಿಂದ, ಆಕೆಯ ಪ್ರವೇಶದ ಹಿಂದಿನ ನೈಜ ಸಂದರ್ಭ ಹಾಗೂ ಉದ್ದೇಶಗಳನ್ನು ಸ್ಪಷ್ಟಪಡಿಸಿಕೊಳ್ಳಲು ಭದ್ರತಾ ಪಡೆಗಳು ಹಾಗೂ ಸ್ಥಳೀಯ ಪೊಲೀಸರು ಜಂಟಿಯಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.

ಗಡಿ ನಿಯಂತ್ರಣ ರೇಖೆಯ ಬಳಿ ಈ ರೀತಿಯ ಘಟನೆಗಳು ಸಂಭವಿಸಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ, 2024ರ ಮೇ ತಿಂಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಜೀಶಾನ್ ಮಿರ್ (22) ಎಂಬ ಯುವಕ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗಿದ್ದ ತನ್ನ ಗೆಳತಿಯನ್ನು ಭೇಟಿಯಾಗುವ ಸಲುವಾಗಿ ಯಾವುದೇ ಸಿಂಧುತ್ವವಿಲ್ಲದೆ ಉತ್ತರ ಕಾಶ್ಮೀರದ ಉರಿ ವಲಯದ ಮೂಲಕ ಎಲ್‌ಒಸಿ ದಾಟಿ ಕಾಶ್ಮೀರಕ್ಕೆ ಪ್ರವೇಶಿಸಿದ್ದ. ಆಗ ಜಾಗರೂಕರಾಗಿದ್ದ ಭಾರತೀಯ ಸೇನಾ ಯೋಧರು ಆತನನ್ನು ಗಡಿಯಲ್ಲೇ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪ್ರೇಮಕ್ಕೆ ಒಳಗಾದ ಯುವತಿಯನ್ನು ಭೇಟಿಯಾಗಲು ಆತ ಗಡಿ ದಾಟಿರುವುದು ಸ್ಪಷ್ಟವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಕಾಂಗ್ರೆಸ್‌ಗೆ ಮರಳುವುದಿಲ್ಲ: ಚರಣ್‌ಜಿತ್‌ ಸಿಂಗ್‌ ಚನ್ನಿ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಅವರ ವಿರುದ್ಧ ಹಲವಾರು...

ವಿಜಯಪುರ |ಜೀವನಶೈಲಿ ಬದಲಾವಣೆಯಿಂದ ಮಧುಮೇಹ ಹೆಚ್ಚಳ;ಡಾ. ತೇಜಶ್ವಿನಿ ವಲ್ಲಭ

ಬದಲಾಗುತ್ತಿರುವ ಜೀವನಶೈಲಿಯಿಂದ ದೇಶದಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚುತ್ತಿದ್ದು, ಕಾಯಿಲೆ ಬಂದ ನಂತರ...

ಸರ್ಕಾರಿ ಉದ್ಯೋಗ ಪರೀಕ್ಷೆಗೆ ಇನ್ನು ಶುಲ್ಕವಿಲ್ಲ: ಬಂಗಾಳ ಸಿಎಂ ಸುವೇಂದು ಅಧಿಕಾರಿ ಘೋಷಣೆ!

ಪಶ್ಚಿಮ ಬಂಗಾಳದ ಯುವಜನತೆ ಮತ್ತು ಉದ್ಯೋಗ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ...

ಆಯೋಗವು ಧರ್ಮ/ಜಾತಿ ದತ್ತಾಂಶ ನಿರ್ವಹಿಸುವುದಿಲ್ಲ; ಯೋಗಿಯ ‘ಹಿಂದು ಮತಗಳ ಡಿಲೀಟ್’ ಆರೋಪಕ್ಕೆ ಚುನಾವಣಾಧಿಕಾರಿ ಪ್ರತಿಕ್ರಿಯೆ

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತಪಟ್ಟಿಯಿಂದ 1.27 ಕೋಟಿ ಹಿಂದು...