ಗುಜರಾತ್ | 15 ವರ್ಷದ ಬಾಲಕಿ ಮೇಲೆ ಮೂರು ದಿನ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ ದುರುಳರು

Date:

ಸುಮಾರು 15 ವರ್ಷದ ಬಾಲಕಿ ಮೇಲೆ ದುರುಳರು ಮೂರು ದಿನ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಗುಜರಾತ್‌ನ ಮೆಹ್‌ಸಾನ ಜಿಲ್ಲೆಯ ವಿಸ್‌ನಗರದಲ್ಲಿ ನಡೆದಿದೆ. ಅಕ್ಟೋಬರ್ 4ರಂದು ಬಾಲಕಿಯ ಅಪಹರಣ ನಡೆದಿದ್ದು ಅಂದಿನಿಂದ ಅ.6ರವರೆಗೂ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆದಿದೆ.

- Advertisement -

ಮೊದಲು ವಿಜಯ್ ಠಾಕೂರ್ ಮತ್ತು ಪವನ್ ಠಾಕೂರ್ ಬಲವಂತವಾಗಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರಾಜ್‌ ಠಾಕೂರ್ ಎಂಬಾತನ ಜೊತೆ ಸೇರಿ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಯನ್ನು ಸಿಟಿ ಟವರ್ ಬಳಿ ಬಿಟ್ಟಿದ್ದು, ಅಲ್ಲಿ ಸೋಹಮ್ ಠಾಕೂರ್ ಆಕೆಯನ್ನು ಮತ್ತೆ ಪವನ್ ಠಾಕೂರ್ ಕಚೇರಿಗೆ ಕರೆದೊಯ್ದು ಮತ್ತೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿಗೆ ₹5500 ಬೆಲೆಗಾಗಿ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | 18 ವರ್ಷದ ಯುವತಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ

ಅದಾದ ಬಳಿಕ ಪ್ರಕಾಶ್ ಮೋದಿ ಮತ್ತು ಮತ್ತೋರ್ವರು ಆಕೆಯನ್ನು ಶಾಲೆಯ ಬಳಿಯಿಂದ ಮನೆಗೆ ಬಿಡುವುದಾಗಿ ಹೇಳಿ ಕರೆದೊಯ್ದು ಅಕ್ಟೋಬರ್ 6ರವರೆಗೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾರೆ.

ಸಂತ್ರಸ್ತ ಬಾಲಕಿಯ ಕುಟುಂಬವು ಆಕೆಗಾಗಿ ಹುಡುಕಾಡಿದ್ದಾರೆ. ಆದರೆ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆಯೇ ಎಂಬುದು ಖಚಿತವಾಗಿಲ್ಲ. ಸೋಮವಾರ ಬಾಲಕಿ ಮನೆಗೆ ಮರಳಿದ್ದು, ಭಯದಿಂದ ತನಗಾದ ದೌರ್ಜನ್ಯದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಮಂಗಳವಾರ ರಾತ್ರಿ ಈ ಎಲ್ಲಾ ವಿಚಾರವನ್ನು ಕುಟುಂಬಸ್ಥರಿಗೆ ಬಾಲಕಿ ತಿಳಿಸಿದ್ದಾಳೆ.

ಈ ಸಂಬಂಧ ವಿಸ್‌ನಗರ ಪೊಲೀಸರು ಅಪಹರಣ, ಅತ್ಯಾಚಾರ, ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ ವಿಜಯ್ ಅಶೋಕ್‌ಜಿ ಠಾಕೂರ್, ಪವನ್‌ಜಿ ದಿವಾನ್‌ಜಿ ಠಾಕೂರ್, ರಾಜ್ ಠಾಕೂರ್, ಸೋಹಮ್‌ಜಿ ಸುರೇಶ್‌ಜಿ ಠಾಕೂರ್, ಮಕ್ವಾನ ದೇವಾಂಗ್ ಮತ್ತು ಮೋದಿ ಪ್ರಕಾಶ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಬಾಲಕಿಯ ಮನೆಯ ಸಮೀಪದಲ್ಲಿ ಪೊಲೀಸರು ಪಟ್ರೋಲಿಂಗ್ ಹೆಚ್ಚಿಸಿದ್ದಾರೆ ಎನ್ನಲಾಗಿದೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...

ಪೊಲೀಸ್ ವಿರುದ್ಧ ಲೈಂಗಿಕ ಕಿರುಕುಳ ದೂರಿನ ಬೆನ್ನಲ್ಲೇ ಜಾತಿನಿಂದನೆ ಕೇಸ್: ಯೂಟ್ಯೂಬರ್ ಯುವತಿ ಬಂಧಿಸದಂತೆ ಸುಪ್ರೀಂ ಆದೇಶ

ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಯುವ ಪತ್ರಕರ್ತೆ...

ರಾಮಲೀಲಾ ಮೈದಾನದಲ್ಲಿ ₹15.66 ಕೋಟಿಯ ಕಣ್ಗಾವಲು: 338 ಫೇಶಿಯಲ್ ರೆಕಗ್ನಿಷನ್ ಕ್ಯಾಮೆರಾ ಅಳವಡಿಕೆಗೆ ಸಿದ್ಧತೆ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಸರಣಿ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳ ಪ್ರಮುಖ...