ಇಬ್ಬರು ಕಾಮುಕ ಯುವಕರು ತಮ್ಮ ಅಪ್ರಾಪ್ತ ತಂಗಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಅತ್ಯಾಚಾರಗಳ ರಾಜಧಾನಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶದಲ್ಲಿ ನಡೆದಿದೆ. ಯೋಗಿ ಆದಿತ್ಯನಾಥ್ ಆಡಳಿತದಲ್ಲಿ ರಾಮರಾಜ್ಯ ನಿರ್ಮಾಣವಾಗುತ್ತದೆ ಎಂಬ ಉತ್ತರ ಪ್ರದೇಶವು ಕಾಮುಕರ ರಾಜ್ಯವಾಗಿ ಗುರುತಿಸಿಕೊಳ್ಳುತ್ತಿದೆ.
ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಕೃತ್ಯ ನಡೆದಿದೆ. ಕಳೆದ ಒಂದು ವರ್ಷದಿಂದ ಅಪ್ತಾಪ್ತ ಬಾಲಕಿಯ ಮೇಲೆ ಆಕೆಯ ಇಬ್ಬರು ಅಣ್ಣಂದಿರೇ ಅತ್ಯಾಚಾರ ಎಸಗಿದ್ದಾರೆ. ತಮ್ಮ ಕೃತ್ಯಗಳನ್ನು ವಿಡಿಯೋ ಕೂಡ ಮಾಡಿಕೊಂಡಿದ್ದರು. ಯಾರಿಗಾದರೂ ಹೇಳಿದರೆ ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದರೆಂದು ಆರೋಪಿಸಲಾಗಿದೆ.
ಸೆಪ್ಟೆಂಬರ್ 18 ರಂದು ಸಂತ್ರಸ್ತೆಯನ್ನು ಆಕೆಯ ಗೆಳೆಯ ಭೇಟಿ ಮಾಡಿದಾಗ, ತನ್ನ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಬಾಲಕಿ ಹೇಳಿಕೊಂಡಿದ್ದಾನೆ. ಬಳಿಕ, ಸಂತ್ರಸ್ತೆ ಮತ್ತು ಆಕೆಯ ಗೆಳೆಯ ಅರ್ವಾಲ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಈ ಲೇಖನ ಓದಿದ್ದೀರಾ?: ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಮತ್ತು ರಾಜಕೀಯ ಲೆಕ್ಕಾಚಾರ…!
ಬಾಲಕಿಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.